Facebook

Archive for the ‘ಕಥಾಲೋಕ’ Category

ಅಂದಿನ ಆ ಕರಾಳ ರಾತ್ರಿ: ನಂದಾ ಹೆಗಡೆ

ಎಪ್ಪತ್ತರ ಇಳಿವಯಸ್ಸಿನಲ್ಲಿ ನಾನು ನನ್ನ ಹಿಂದಿನ ಬದುಕಿನ ಬಗ್ಗೆ ಒಂದು ಸಿಂಹಾವಲೋಕನ ಮಾಡಿದಾಗ—————– ನನ್ನ ಬದುಕು ನಾನಂದುಕೊಂಡಂತೆಯೇ ನಡೆಯಿತು. ಎಷ್ಟೋ ಜನ ಹೇಳುತ್ತಾರೆ, ಬದುಕು ನಾನಂದುಕೊಂಡಂತೆ ನಡೆಯಲೇ ಇಲ್ಲ. ನಾನಂದುಕೊಂಡಿದ್ದೇ ಒಂದು, ಬದುಕು ನಡೆದದ್ದೇ ಬೇರೆ, ನಾನೇನೇನೋ ಕನಸು ಕಂಡಿದ್ದೆ. ಆದರೆ ನನ್ನ ಯಾವ ಕನಸೂ ನನಸಾಗಲಿಲ್ಲ. . . . . . . . . ಹೀಗೇ ಏನೇನೋ . . . . . . . . . . . […]

ಒಂದು ಹುಡಗಿಯ ಶವ ಮತ್ತು ಪವಿತ್ರ ಜಲ !: ಅಶ್ಫಾಕ್ ಪೀರಜಾದೆ

-1- ದುಂಡಾಪುರ ! ಎಲ್ಲ ಜಾತಿಯ , ಎಲ್ಲ ವರ್ಗದ ಜನ ಒಟ್ಟಾಗಿ,ಒಗ್ಗಟ್ಟಾಗಿ ಬದುಕುವ ಒಂದು ಪುಟ್ಟ ಗ್ರಾಮ. ಜಾತಿಯಾಧಾರಿತ ಕಸಬುಗಳಲ್ಲಿ ನಿರತ ಗ್ರಾಮಸ್ಥರು ತಂತಮ್ಮ ಯೋಗ್ಯತೆಯನುಸಾರ ನಡೆದುಕೊಳ್ಳುವುದರಿಂದ ವಿವಿಧ ಕೋಮುಗಳ ನಡುವೆ ಮನಸ್ತಾಪವಿಲ್ಲ, ಗಲಭೆಗಳಿಲ್ಲ. ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬ ತತ್ತ್ವದಲ್ಲಿ ನಂಬಿಕೆಯಿಟ್ಟು ಶಾಂತಿಯಿಂದ, ನಂಬಿಕೆಯಿಂದ ಬದುಕು ಸಾಗಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಈ ಗ್ರಾಮವನ್ನು ಒಂದು ಆದರ್ಶ ಗ್ರಾಮ ಒಂದು ಮಾದರಿ ಗ್ರಾಮವೆಂದೇ ಬಣ್ಣಿಸಬಹುದು. ಜಾತಿಯಾಧಾರಿತ ಕಸಬುಗಳಾದ ಚಮ್ಮಾರಿಕೆ, ಕುಂಬಾರಿಕೆ,ಕಂಬಾರಿಕೆ, ಪತ್ತಾರಿಕೆ, ಬಡಿಗತನ, ಕುರಿ […]

ಬಂಡಿ ಯಲ್ಲವ್ವ: ಭೀಮಣ್ಣ ಮಾದೆ

ಅಪ್ಪನ ಕಾಲಕ್ಕೆ ಮೂರಡಿ ಜಾಗದಲ್ಲಿ ಹಾಕಿಕೊಟ್ಟ ಹರಕು ಜೋಪಡಿ, ವರ್ಷಕ್ಕೊಮ್ಮೆ ಬಂಡಿ ಯಲ್ಲವ್ವನ ಹರಕೆಗೆ ಪಡೆಯುತ್ತಿದ್ದ ಕೋಣಗರವು, ಮೂರೊತ್ತಿನ ಗಂಜಿ ಹನುಮಂತನನ್ನು ಗೌಡರ ಲೆಕ್ಕದ ಪುಸ್ತಕ ರೂಪದಲ್ಲಿ ಬಂಧಿಸಿ ಬಿಟ್ಟಿದ್ದವು. ಚಿಕ್ಕವರು ದೊಡ್ಡವರೆನ್ನದೆ ಕೈಯೆತ್ತಿ ಮುಗಿಯುತ ಏಕವಚನದಲಿ ನಾಮಧೇಯಾನಾಗುವುದು ಜೀತದ ಕೆಲಸದ ಜೊತೆಗೆ ಸೇರಿಹೋಗಿತ್ತು. ಮೊದಲ ಗಂಡನ ಕಳೆದುಕೊಂಡ ಹೊನ್ನವ್ವಳನ್ನು ತಂದೆ ಬ್ಯಾಡ ಅಂದರು ಎಲ್ಲವ್ವನ ಎದುರಿನಲ್ಲಿಯೇ ಕಟ್ಟಿಕೊಂಡು ಆರು ಜನರನ್ನು ಸಂಸಾರದ ಬಂಡಿಯಲಿ ಕೂರಿಸಿಕೊಂಡು ಒಂಟೆತ್ತಿನಂಗ ಎಳೆಯುತ್ತಿದ್ದ ಈತನ ಕುಟುಂಬಕ್ಕೆ ಬಂಡಿ ಯಲ್ಲವ್ವನೇ ಸರ್ವಸ್ವ. ಯಲ್ಲವ್ವಳಿಗೆ […]

ಜನ್ನತ್: ಅಶ್ಫಾಕ್ ಪೀರಜಾದೆ

ಶಬ್-ಏ-ಮೆಹರಾಜ ! ಮುಹ್ಮದ ಪೈಗಂಬರರನ್ನು ಸರ್ವಶ್ರೇಷ್ಠ ಅಲ್ಲಾಹ ತನ್ನ ಆಸ್ಥಾನಕ್ಕೆ ಸ್ವಾಗತಿಸಿ ಆದರಾತಿಥ್ಯ ನೀಡಿದ ಮಹತ್ವದ ರಾತ್ರಿ. . . ಅಲ್ಲಾಹ ಮತ್ತು ಪೈಗಂಬರರ ಈ ಅಪೂರ್ವ ಸಮ್ಮಿಲನದ ಸವಿನೆನಪಿಗಾಗಿ ಇಡೀ ಮುಸ್ಲಿಂ ಸಮುದಾಯದವರು ಆ ಇಡೀ ರಾತ್ರಿಯನ್ನು ಅಲ್ಲಾಹನ ನಾಮಸ್ಮರಣೆ, ಪ್ರಾರ್ಥನೆಯಲ್ಲಿ ಕಳೆಯುತ್ತಾರೆ. ವಿಶೇಷ ಪ್ರಾರ್ಥನೆ, ಪ್ರವಚನಗಳ ಮುಖಾಂತರ ತಮಗೂ ‘ಜನ್ನತ್’ ಅಂದರೆ ಸ್ವರ್ಗ ಲಭ್ಯವಾಗಲೆಂದು ಕೋರುತ್ತಾರೆ. ಸಾದೀಕ ಕೂಡ ಈ ಸಾಮೂಹಿಕ ಪ್ರಾರ್ಥನೆ, ಪ್ರವಚನಗಳಲ್ಲಿ ಭಾಗಿಯಾಗಲು ತನ್ನ ಮೊಹಲ್ಲಾದ ಮಸೀದಿಗೆ ತಲಪುತ್ತಾನೆ. ಇಶಾ ನಮಾಜಿನ […]

ಅಜ್ಜ ನೆಟ್ಟ ಹಲಸಿನ ಮರ: ಸತೀಶ್ ಶೆಟ್ಟಿ. ವಕ್ವಾಡಿ

ಸೂರ್ಯನ ಬೆಳಗಿನ ಬೆಳಕಿಗೆ ಮಂಜಿನ ಹನಿಗಳ ರಂಗಿನಾಟ ಆಗತಾನೆ ಮುಗಿದಿತ್ತು. ಸೂರ್ಯನ ಬೆಳಕಿನ ಅಟ್ಟಹಾಸ ಹೆಚ್ಚಾದಂತೆ ಮನೆ ಎದುರಿನ ಹುಲ್ಲು ಹಾಸಿನ ಮೇಲೆ ಬೆಚ್ಚನೆ ಮಲಗಿದ್ದ ಮಂಜಿನ ಹನಿಗಳು ಒಂದೊಂದಾಗಿ ಕಾಣದ ಗೂಡು ಸೇರುವ ತವಕದಲ್ಲಿದ್ದವು. ಅದೂ ಬೇರೆ ಕಾರ್ತಿಕ ಮಾಸ. ಚಳಿರಾಯನ ಒಡ್ಡೋಲಗಕ್ಕೆ ಆಗಷ್ಟೇ ರಂಗಸಜ್ಜಿಕೆಯ ಹೂರಣವಾಗಿತ್ತು. ಮನೆಯ ಕಣದಲ್ಲಿ ರಂಗು ಮೂಡಿಸಿದ್ದ ಭತ್ತದ ತಿರಿ ಮತ್ತು ಹುಲ್ಲಿನ ಕುತ್ತರಿಗಳಿಂದ ಮೂಗಿಗೆ ಅಪ್ಪಳಿಸುತ್ತಿದ್ದ ಭತ್ತದ ಸುವಾಸನೆ ಮನದ ಮೂಲೆಯಲ್ಲಿ ಹೊಂಗಿರಣದ ಚಿತ್ತಾರ ಬರೆಸಿದ್ದವು. ಮನೆ ಹಿಂದಿನ […]

ಟಚ್ ಸ್ಕ್ರೀನ್: ಸುದರ್ಶನ್.ವಿ

  “ಹಲೋ ಎಲ್ಲಿದ್ದಿಯೋ? ಎಷ್ಟು ವರ್ಷ ಆಯ್ತು ನಿನ್ನ ನೋಡಿ, ಯಾವಾಗ ಸಿಗೋಣ?” “ಹ್ಯಾಟ್ಸ್ ಆಫ್ ಫೇಸ್ ಬುಕ್‍ಗೆ. ನಿನ್ನ ನಂಬರ್ ಸಿಕ್ತು. ನಿಜಕ್ಕೂ ಥ್ಯಾಂಕ್ಸ್ ಈ ಟೆಕ್ನಾಲಜಿಗೆ” … ಈ ಕಡೆ ಒಂದು ಕ್ಷಣ ಮೌನ. ಹೀಗೆ ಅಚಾನಕ್ಕಾಗಿ ಬಂದ ಹಳೆಯ ಗೆಳೆಯನ ಕರೆ ಕೊಂಚ ನನ್ನನ್ನು ಪಾಪ ಪ್ರಜ್ಞೆ ಗೆ ದೂಡಿತು. ಛೇ ನಾನೆಂಥ ಮನುಷ್ಯ…? ಡಿಗ್ರಿ ಮುಗಿದ ನಂತರ ಎಲ್ಲರ ಜೊತೆಗೂ ಸಂಬಂಧ ಕಡಿದುಕೊಂಡು ಬದುಕುತ್ತಿದ್ದೆನಲ್ಲಾ… ಬಾಲ್ಯದ ಗೆಳೆಯರು ಜಯನಗರದ ಮನೆಯನ್ನು ಬಿಟ್ಟು […]

ಕುರಿಯ ಕಾಲು: ಜೆ.ವಿ.ಕಾರ್ಲೊ

ಕಿಟಕಿಯ ಪರದೆಗಳು ಇಳಿಬಿದ್ದಿದ್ದ ಬೆಚ್ಚನೆಯ ರೂಮಿನಲ್ಲಿ ಟೇಬಲ್ ಲ್ಯಾಂಪಿನ ಮಂದ ಬೆಳಕು ಒಂದು ವಿಶಿಷ್ಟ ವಾತಾವರಣ ಉಂಟುಮಾಡಿತ್ತು. ಅವಳು ಕುಳಿತಿದ್ದ ಕುರ್ಚಿಯ ಹಿಂಭಾಗದಲ್ಲಿದ್ದ ಸೈಡ್‍ಬೋರ್ಡಿನ ಮೇಲೆ ಒಂದು ಅರೆ ತುಂಬಿದ್ದ ವ್ಹಿಸ್ಕಿ ಬಾಟಲ್, ಎರಡು ಉದ್ದನೆಯ ಗ್ಲಾಸುಗಳು, ಸೋಡ ಮತ್ತು ಐಸ್ ತುಂಡುಗಳ ಥರ್ಮೋ ಬಕೆಟ್ ತಯಾರಾಗಿತ್ತು. ಅವಳ ಎದುರಿನ ಕುರ್ಚಿ ಇನ್ನೂ ಖಾಲಿ ಇತ್ತು. ಮೇರಿ ಮಲೋನಿ, ತನ್ನ ಪತಿ ಕೆಲಸದಿಂದ ಹಿಂದಿರುಗುವುದನ್ನೇ ಕಾಯುತ್ತಿದ್ದಳು. ಗಳಿಗೆಗೊಮ್ಮೆ ಅವಳ ದೃಷ್ಟಿ ಗೋಡೆಯ ಮೇಲಿದ್ದ ಗಡಿಯಾರದ ಕಡೆಗೆ ಹೊರಳುತ್ತಿತ್ತು. […]

ಉದಾತ್ತ ಜೀವಿ ಪ್ಲಾಟಿಪಸ್: ಅರ್ಪಿತ ಮೇಗರವಳ್ಳಿ

ಒ೦ದಾನೊ೦ದು ಕಾಲದಲ್ಲಿ ಆ ದೇವರು ಅನ್ನೋನಿಗೆ ಮೂರು ಬಗೆಯ ವಿಭಿನ್ನ ಜೀವಿಗಳನ್ನು ಸೃಷ್ಟಿಮಾಡುವ ಹುಕಿ ಬ೦ದಿತು. ಆ ಪ್ರಕಾರವಾಗಿ ದೇವರು ಮೊಟ್ಟಮೊದಲಿಗೆ ಸಸ್ತನಿಗಳನ್ನು ಸೃಷ್ಟಿಸಿ ಅವುಗಳಿಗೆ ನೆಲದ ಮೇಲೆ ಬದುಕುವ ಅವಕಾಶಮಾಡಿಕೊಟ್ಟನು. ಹಾಗೆಯೆ ವಾತಾವರಣದ ವಿಪರೀತಗಳಿ೦ದ ರಕ್ಷಿಸಿಕೊಳ್ಳಲು ಅವಕ್ಕೆ ತುಪ್ಪಳವನ್ನು ದಯಪಾಲಿಸಿದನು. ಎರಡನೆಯದಾಗಿ ಮೀನುಗಳನ್ನು ಸೃಷ್ಟಿಸಿದ ಭಗವ೦ತ, ಅವುಗಳನ್ನು ನೀರಿನಲ್ಲಿ ಸರಾಗವಾಗಿ ಈಜಾಡಲು ಬಿಟ್ಟು, ಉಸಿರಾಡಲು ಕಿವಿರುಗಳನ್ನು ನೀಡಿದನು. ತನ್ನ ಸೃಷ್ಟಿಕಲೆಯನ್ನು ಮು೦ದುವರೆಸಿದ ದಯಾಮಯಿ ಮೂರನೆಯದಾಗಿ ಹಕ್ಕಿಗಳನ್ನು ಸೃಷ್ಟಿಸಿ ಆಕಾಶದಲ್ಲಿ ಅನ೦ತವಾಗಿ ಹಾರಡಲು ಅವುಗಳಿಗೆ ರೆಕ್ಕೆಗಳನ್ನು ನೀಡಿದನು. […]

ಆರತಕ್ಷತೆ: ಅದಿತಿ ಎಂ. ಎನ್.

ದೂರದ ಸಂಬಂಧಿಯಾಗಿದ್ದ ಶಿವರಾಮನ ಮಗನ ಮದುವೆಯ ಕರೆಯೋಲೆ ತಲುಪಿದಾಗಿನಿಂದ ಜಯಣ್ಣ ಮೋಡದ ಮೇಲೆಯೇ ತೇಲುತ್ತಿದ್ದರು. ಹಣಕಾಸಿನ ವಿಚಾರದಲ್ಲಿ ತಾನೆಲ್ಲಿ, ಶಿವರಾಮನೆಲ್ಲಿ? ಆದರೂ ಅವನು ತನಗೆ ಮದುವೆಯ ಕರೆಯೋಲೆಯನ್ನು ಮರೆಯದೇ ಕಳಿಸಬೇಕೆಂದರೆ ತನ್ನ ಮೇಲೆ ಅವನಿಗೆ ಪ್ರೀತಿ, ವಿಶ್ವಾಸ ಇದೆಯೆಂದೇ ಅರ್ಥವಲ್ಲವೇ ಎನ್ನುವುದು ಜಯಣ್ಣನ ತರ್ಕವಾಗಿತ್ತು. ಅವರ ಉತ್ಸಾಹಕ್ಕೆ ತಕ್ಕ, ಮದುವೆಯ ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಇತ್ತು; ಅದೂ ಮನೆಯಿಂದ ಅಂದಾಜು ಐದಾರು ಕಿಲೋಮೀಟರ್ ದೂರದಲ್ಲಿದ್ದ ದೊಡ್ಡ ಛತ್ರದಲ್ಲಿ. ಹಾಗಾಗಿ ಜಯಣ್ಣ, ಮದುವೆಗೆ ಅಲ್ಲದಿದ್ದರೆ ಆರತಕ್ಷತೆಗಾದರೂ ಹೋಗಿಯೇ ಸಿದ್ಧ […]

ಅಮಾವಾಸ್ಯೆ: ಗಿರಿಜಾ ಜ್ಞಾನಸುಂದರ್

“ಏ ಬೇಡ ಮಕ್ಕಳಾ, ಅವು ನಮ್ಮ ಸೀಬೆ ಮರಗಳಲ್ಲ, ಬೇರೆಯವರದ್ದು. ಅವರನ್ನು ಕೇಳದೆ ಹಾಗೆಲ್ಲ ಕೀಳಬಾರದು” ಎಂದು ಕಾಮಾಕ್ಷಿ ಕೂಗುತ್ತಿದ್ದರು ಮಕ್ಕಳ ಸೈನ್ಯ ಅವಳ ಮಾತನ್ನು ಕಿವಿಗೆ ಹಾಕಿಕೊಳ್ಳದೆ ಹಣ್ಣುಗಳನ್ನು ಕಿತ್ತು ತಮ್ಮ ಚೀಲಕ್ಕೆ ಹಾಕುವುದರಲ್ಲಿ ಮುಳುಗಿತ್ತು. ಒಟ್ಟು ಹತ್ತು ಮೊಮ್ಮಕ್ಕಳು ಸೇರಿ ಲಗ್ಗೆ ಹಾಕಿದ್ದರು. ರಜಕ್ಕೆ ಅಜ್ಜಿ ಮನೆಗೆ ಬಂದಿದ್ದ ಎಲ್ಲರು ಮಂಗಗಳಾಗಿದ್ದರು. ಅವರನ್ನು ಹಿಡಿಯುವುದಕ್ಕೆ ಸೀನ ಮಾವನಕೈಯಲ್ಲಿ ಮಾತ್ರ ಸಾಧ್ಯ ಆಗುತ್ತಿತ್ತು. ಅವರು ಶಾಲೆಯ ಮುಖ್ಯೋಪಾಧ್ಯಾಪಕರಾಗಿ ಮಕ್ಕಳ ಮೇಲೆ ಒಳ್ಳೆ ಹಿಡಿತ ಹೊಂದಿದ್ದರು. ಆದರೆ […]