ಮಾರ್ನೆಮಿ: ಭರತೇಶ ಅಲಸಂಡೆಮಜಲು.


        

ಪಿಲಿ, ಕೊರಗೆ, ಕರಡಿ, ಸಿಂಹ ನಲಿತೋಂತಲ್ಲಗೆ, 
ಪುರಿ ಬಾಲೆ, ಜೆತ್ತಿ ಅಜ್ಜೆರ್ ಲಕ್ಕುತ್ ನಡತ್ತೆರ್‍ಗೆ,
ಊರುಗೂರೇ ಲಕ್ಕಂಡ್ ದೂಳು, ಚೆಂಡೆತ ಗದ್ದಾವುಗೂ
ಬತ್ತಂಡ್ ಮಾರ್ನೆಮಿ ನಡತ್ತೊಂದು, ನಲಿತೊಂದು…..

ತುಳುನಾಡಿನಲ್ಲಿ ನವರಾತ್ರಿ, ದಸರಾಕ್ಕಿಂತ ಚಿರಪರಿಚಿತವಾಗಿ ಮಾರ್ನೆಮಿಯೆಂಬ ಹೆಸರಿನಿಂದ ದುರ್ಗೆಯರನ್ನು ಪೂಜಿಸಲಾಗುತ್ತದೆ. ಮಾರ್ನೆಮಿ ಅಂದ ಕೂಡಲೇ ಈ ಭಾಗದ ಅಬಾಲರಿಂದ ವೃದ್ಧ ಜನರ ಮೈ ಪುಳಕಗೊಳ್ಳುತ್ತದೆ ಮನ ಆರಳುತ್ತದೆ. ೯ದಿನಗಳ ಕಾಲ ಭರಪೂರ ಮನರಂಜನೆ. ದೇವರು, ಪ್ರಾಣಿ, ಜನಾಂಗಗಳಿಗೆ ವೇಷದ ಮೂಲಕ ಅರ್ವಿಭಾವಗೊಳಿಸಿ ಆ ತೆರದಲ್ಲಿ ನಟನೆ, ಹಾಸ್ಯ, ಮಾತಿನ ರಂಗು ನೀಡಿ ದುರ್ಗೆಯರ ಅರಾಧನೆ ಶುರುವಿಡುತ್ತದೆ, ದಕ್ಷಿಣದ ಜಿಲ್ಲೆಗಳ ಪ್ರಸಿದ್ಧ ದೇವಾಲಯಗಳಾದ ಮಂಗಳಾದೇವಿ, ಕಟೀಲು, ಬಪ್ಪನಾಡು, ಮಂದಾರ್ತಿ, ಕೊಲ್ಲೂರು, ಬೆಳ್ಳಾರೆಯ ಜಲದುರ್ಗೆ, ಭಗವತಿ ಹೀಗೆ ಹಲವಾರು ಹಳ್ಳಿಗೊಂದರಂತೆ, ಸೀಮೆಗೊಂದರಂತೆ ದುರ್ಗೆಯರ ದೇವಾಲಯಗಳು ಕಂಡುಬರುತ್ತದೆ, ಈ ದಿನಗಳಲ್ಲಿ ಮನೆ ಮನೆಗಳಲ್ಲಿ ಪೂಜೆ ನಡೆಯದಿದ್ದರೂ ದೇವಿಯ ಅರಾಧನೆ ಮಾಡುವ ಮನೆಗಳಲ್ಲಿ, ಸಿರಿ ದರ್ಶನವಿರುವ ಮನೆಗಳಲ್ಲಿ ಮಾರ್ನೆಮಿಯ ವಿಶೇಷ ಪೂಜೆ ನಡೆಸುತ್ತಾರೆ. ತುಳುನಾಡಿನ ಯಕ್ಷಗಾನ ಪ್ರಸಂಗಗಳಲ್ಲಿ ದುರ್ಗೆಯರ ಲೀಲೆಗಳನ್ನು ಮನೋಜ್ಞವಾಗಿ ವರ್ಣಿಸುತ್ತಾರೆ ಹಲವಾರು ಕ್ಷೇತ್ರ ಮಹಾತ್ಮೆಗಳು ದೇವಿಯರ ಮಹಿಮೆಯನ್ನು ಕಣ್ಣಿಗೆ ಕಟ್ಟಿಕೊಟ್ಟಿರುವುದು ಇದಕ್ಕೆ ಸಾಕ್ಷಿ . 

ಇಲ್ಲಿ ನವರಾತ್ರಿ ದಿನಗಳಲ್ಲಿ ದೇವರ ಹರಕೆ ರೂಪದಲ್ಲಿ ವೇಷ ಧರಿಸುವುದು ಸಾಮಾನ್ಯ ಇದು ಒಂದು ಪವಿತ್ರ ಕಾರ್‍ಯವೆಂದು ೧ದಿನ, ೩ದಿನ, ೫ ದಿನ, ೭ ದಿನ ವೇಷ ಧರಿಸಿ ಸೇವೆ ಮಾಡುವ ಹರಕೆ ಹೇಳಿಕೊಂಡು ವೇಷ ಧರಿಸಿ ಬೀದಿಗಿಳಿಯುತ್ತಾರೆ ಜನರ ಮನ ರಂಜಿಸುತ್ತಾರೆ ವೇಷ ಕಟ್ಟುವ ಮೊದಲು ಸ್ಥಳೀಯ ಗ್ರಾಮ ದೇವಾಸ್ಥಾನಕ್ಕೆ ಹೋಗಿ ವೃತ, ಶಾಸ್ತ್ರ ನಿಯಮ ಪಾಲಿಸಿ ವೇಷ ಕಟ್ಟಿ ಮನೆ ಮನೆಗೆ ತೆರಳಿ ಅದರ ಪಾವಿತ್ರ್ಯ ಕಾಪಾಡಿಕೊಂಡು ಮತ್ತೆ ವೇಷ ಕಳಚಿ ದೈವ-ದೇವರುಗಳಿಗೆ ಕಾಣಿಕೆಯನ್ನು ಹರಕೆ ರೂಪದಲ್ಲಿ ಹಾಕಿ ಧಾರ್ಮಿಕತೆಯ ಗಟ್ಟಿತನ, ಆಚರಣೆಯ ಭದ್ರತೆ, ಭಕ್ತಿಯ ಬದ್ಧತೆಯ ಅನಾವರಣವಾಗುತ್ತದೆ…

ಪ್ರಮುಖವಾಗಿ ಕೊರಗ, ಹುಲಿ, ಸಿಂಹ, ಕರಡಿ, ಕೆಲಸ ಬಿಂಬಿಸುವ ವೇಷ, ಬೇಟೆಗಾರ ಇತ್ಯಾದಿ…. ದುಷ್ಟರ ಸಂಹಾರಕ್ಕೆ ಬಹುರೂಪಗಳ ತಳೆದು ಧರೆಗಿಳಿದ ದುರ್ಗೆಯರಂತೆ ಈ ನಾಡಿಗೆ ಬಂದ ಮಾರಿಯನ್ನು, ದುಷ್ಟಶಕ್ತಿಗಳನ್ನು ಬಹುವೇಷಗಳ ಅದುಮಿದ ಶಕ್ತಿಗೆ ಹೆದರಿ ತೊಲಗಲಿ ಎಂಬುವುದೆ ಮುಖ್ಯ ಉದ್ದೇಶ. 

ಹೌದು ಮಕ್ಕಳು ಹುಲಿ ಬಂದರೆ ಅದರ ಹಿಂದೆ ಒಂದಷ್ಟು ಹೆಜ್ಜೆ ನಡೆದು ಪಿಲಿನಲಿಕೆಯನ್ನು ಹೆದರಿಕೆಯಿಂದಲೆ ನೋಡುವುದು, ಮತ್ತೆ ದುಡ್ಡು ತೆಗೆದುಕೊಳ್ಳುವಾಗ ಪಿಲಿ ಮಂಡೆ ತೆಗೆದು ನಿಜ ಸ್ವರೂಪ ನೋಡಿ " ಉಂದು ನಮನ ಸುಂದರೆ" (ಇದು ನಮ್ಮ ಸುಂದರ) ಯಾವಗಲೂ ನೋಡುವ ಮುಖ ಪರಿಚಯವಾದಾಗ ಹೆದರಿಕೆ ಘಟ್ಟ ಹತ್ತಿರುತ್ತದೆ. ಮತ್ತೆ ಕರಡಿ ಬ್ಯಾಂಡ್ ಸದ್ದು ಕೇಳಿದಾಗ ಮನೆಯೊಳಗೆ ಓಡಿ ಏಣಿಯ ಕೆಳಗೆ ಕುಳಿತುಕೊಳ್ಳುವುದು. ಮನೆಯಲ್ಲಿ ಸಿಕ್ಕಾಪಟ್ಟೆ ಹಠ ಮಾಡುವ ಮಕ್ಕಳು, ಸುಮ್ಮನೆ ಅಳುವ ಮಕ್ಕಳಿಗೆ ಈ ಮಾರ್ನೆಮಿ ರಜೆಯಲ್ಲಿ ವಿಶ್ರಾಂತಿ ಕಾರಣ ಜೋರು ಅತ್ತಾರೆ ಕೊರಗನಿಗೆ ಹಿಡಿದು ಕೊಡುತ್ತೆನೆಂದು ಮನೆಯ ಹಿರಿಯರು ಗದರಿಸುವುದು ಸಾಮಾನ್ಯ. ಕೊರಗನೆಂದರೆ ಸುಮಾರು ಹರೆಯದ ಮಕ್ಕಳವರೆಗೂ ಭಯ ಆ ಕಪ್ಪು ಮಸಿಯಿಂದ ಬಳಿದ ದೇಹ, ತಲೆಗೊಂದು ಮುಟ್ಟಾಲೆ, ಕಿವಿಯಲ್ಲೊಂದು ಅಲ್ಲಾಡುವ ಚಕ್ಕುಲಿ, ಕುತ್ತಿಗೆಯಲ್ಲಿ ಹೂವಿನ ಮಾಲೆ, ಕೈಗೆ ಕಡಗ, ಸೊಂಟಕ್ಕೊಂದು ಹಳೆಯ ಛತ್ರಿಯ ತುಂಡು, ಕಾಲಿಗೆ ಕಿಣಿ ಕಿಣಿ ಗೆಜ್ಜೆ, ಬೆನ್ನಲ್ಲೊಂದು ಜೋಲಿಗೆ, ಕೈಯಲ್ಲಿ ಉಪ್ಪಳಿಂಗೆ ಕೋಲು ಮನೆಯ ನಾಯಿಗಳನ್ನು ಹೆದರಿಸಲು ಈ ರೂಪ ಕಂಡಾಗ ಅಳುವ ಮಗು ಮೆಲ್ಲಗೆ ಅಜ್ಜಿ ಕೊಂಡಾಟದ ಜಕ್ಕೆಲಿನಲ್ಲಿ ಕೂತು ಕೊರಗನ ಕೊಳಲಿನ ಧ್ವನಿಗೆ ಕಿವಿಯಾಗುತ್ತದೆ ಮತ್ತೆ ಕೊರಗ ಹೊರಡುವಾಗ ಹೆದರಿಕೆ ತೆಗೆಯಲು ಮುಂಡಕ್ಕೆ ಕರಿ ಬೊಟ್ಟು ಹಾಕಿ, ಮನೆಯವರೊಂದಿಗೆ ಹರಟಿ, ತಾಂಬೂಲ ತಿಂದು ಎದ್ದಾಗ ಮೆಲ್ಲಗೆ ಮಗು ತಲೆ ಎತ್ತುವುದು ಇವೆಲ್ಲ ಹಳ್ಳಿಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿದ್ದ ದೃಶ್ಯ. ಇಂದು ಕೊರಗನಂತಹ ಮನಮೋಹಕ ಹಲವಾರು ವೇಷಗಳು ಇಲ್ಲದಂತಾಗಿವೆ, ವೇಷಗಳ ಕೀಟಲೆ, ಕಿರುಚಾಟ ಅಧುನಿಕವಾಗುತ್ತಿದೆ. ಪಾವಿತ್ರ್ಯ ಉಳಿಸಿ ವೇಷ ಧರಿಸುತ್ತಿದ್ದ ಹಿರಿಯರು ಇಲ್ಲವಾಗಿದ್ದಾರೆ. ವರ್ಷದ ವೇಷ ಬಾರದಿದ್ದರೆ ಮಾರ್ನೆಮಿಗೆ ಸಾರ್ಥಕವಲ್ಲ ಯೆಂಬ ಭಾವನೆ ಮೂಡುತ್ತದೆ. ಧಾರ್ಮಿಕತೆ, ನಂಬಿಕೆ, ಮಣ್ಣಿನ ಪರಿಮಳ ಪಸರಿಸುವ ಇಂತಹ ಆಚರಣೆ ಒಂದಷ್ಟು ಅಧುನಿಕತೆಯ ರಂಗು ಪಡೆದು ಸಾಗುತಿರುವುದು ಸಂತಸದ ವಿಚಾರ. ಸರ್ವರಿಗೂ ಮಾರ್ನೆಮಿಯ ಶುಭಾಶಯಗಳು.

-ಭರತೇಶ ಅಲಸಂಡೆಮಜಲು. 

*****

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

2 Comments
Oldest
Newest Most Voted
Inline Feedbacks
View all comments
Kirana
Kirana
10 years ago

Well informative one…

Praveen Chandra
10 years ago

Nice one Bharath. 

2
0
Would love your thoughts, please comment.x
()
x