ಕಲಾವಿದ ಎಸ್.ಎಫ್. ಹುಸೇನಿ ಅವರು ಕಲಾವಲಯದಲ್ಲಿ ಮೈಸೂರು ಹುಸೇನಿ ಎಂದೇ ಚಿರಪರಿಚಿತರು. ತಂದೆ ಸಯ್ಯದ್ ಫೀರ್, ತಾಯಿ ಜೀನಾತ್‌ವುನ್ನಿಸಾ ಬೀ ರವರ ಮಗನಾಗಿ ಮಂಡ್ಯಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರಂನಲ್ಲಿ ಜನಿಸಿದ ಇವರು ಬಾಲ್ಯದ ದಿನಗಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತರಾಗಿ ಕಲೆಯಲ್ಲಿಯೇ ಜೀವನ ರೂಪಿಸುವಂತಾಯಿತು.
ಇವರು ಮೈಸೂರಿನ ವೈಜಯಂತಿ ಚಿತ್ರಕಲಾ ಶಾಲೆಯಲ್ಲಿ ಪೈನ್ ಆರ್ಟ್ ಡಿಪ್ಲೊಮ ಮತ್ತು ಆರ್ಟ್‌ಮಾಸ್ಟರ್ ಶಿಕ್ಷಣ ಪಡೆದು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಬಿ.ಎಫ್.ಎ. ಪದವಿಯನ್ನು ಪಡೆದಿದ್ದಾರೆ. ಅವರ ವಿಶಿಷ್ಟ ಬಗೆಯ ಕಾಗದ ಭಿತ್ತಿಶಿಲ್ಪಗಳು, ಏಕರೇಖಾಚಿತ್ರಗಳು ಪ್ರಯೋಗಾತ್ಮಕ ಅಮೂರ್ತ ಛಾಯಾಚಿತ್ರಗಳು ಮತ್ತು ಸಾಂಝಿಜನಪದ ಕಾಗದಕತ್ತರಿಕಲೆ ಕಲಾಕೃತಿಗಳು ಇವರ ಕಲಾಪ್ರತಿಭೆಗೆ ಸಾಕ್ಷಿಯಾಗಿವೆ.
ಹುಸೇನಿ ಚಿತ್ರಕಲೆಯನ್ನು ಮೈಸೂರು, ಬೆಂಗಳೂರು, ಧಾರವಾಡ, ಗುಲ್ಬರ್ಗ, ಉಡುಪಿ ಹೀಗೆ ಅನೇಕ ಕಡೆಗಳಲ್ಲಿ ಏಕವ್ಯಕ್ತಿ ಚಿತ್ರಕಲಾಪ್ರದರ್ಶನಗಳು, ಸುಮಾರು ೭೦ಕ್ಕೂ ಹೆಚ್ಚು ಸಮೂಹಕಲಾಪ್ರದರ್ಶನ ಕಾರ್ಯಗಾರಗಳಲ್ಲಿ ಭಾಗವಹಿಸಿ ಕರ್ನಾಟಕ ಮಾತ್ರವಲ್ಲದೆ ಹೊರರಾಜ್ಯಗಳಾದ ಮುಂಬೈ, ದೆಹಲಿ, ಚೆನ್ನೈ ನಗರಗಳಲ್ಲಿ ಚಿತ್ರಕಲಾ ಪ್ರದರ್ಶನಗಳನ್ನು ನೀಡಿದ್ದಾರೆ. ಹುಸೇನಿಯವರ ವಿಶೇಷತೆ ಎಂದರೆ ಗ್ರಾಮೀಣ ಭಾಗದ ಜನರಿಗೆ ಕಲೆ ತಲುಪುವ ಉದ್ದೇಶದಿಂದ ತಮ್ಮದೇ ಸಾಂಝಿ ಕಲಾಲೋಕ ಸಂಸ್ಥೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹತ್ತುವರ್ಷಗಳಿಂದ ಚಿತ್ರಕಲಾಪ್ರದರ್ಶನ, ಕಾರ್ಯಗಾರಗಳನ್ನು ನಡೆಸುತ್ತಾ ಬಂದಿದ್ದಾರೆ. ಇವರ ಅನೇಕ ಕಲಾಕೃತಿಗಳು ದೇಶ ಮತ್ತು ವಿದೇಶಗಳ (ಆಸ್ಟ್ರೇಲಿಯ, ಫಿನ್‌ಲ್ಯಾಂಡ್, ಜರ್ಮನ್, ಸೌತ್ ಆಫ್ರಿಕ, ದೋಹ) ಖಾಸಗಿ ಸಂಗ್ರಹಕಾರರಲ್ಲಿ ಸಂಗ್ರಹಗೊಂಡಿವೆ.
ಎಸ್.ಎಫ್.ಹುಸೇನಿಯವರ ಕಲಾಪ್ರತಿಭೆಗೆ ಅನೇಕ ಪ್ರಶಸ್ತಿ ಸನ್ಮಾನಗಳು ಸಂದಿವೆ ಅವುಗಳಲ್ಲಿ ಮುಖ್ಯವಾಗಿ ೧೯೯೯ ರಲ್ಲಿ ಮೈಸೂರು ದಸರ ಕಲಾಪ್ರದರ್ಶನ ಪ್ರಶಸ್ತಿ, ೨೦೦೧-ರಲ್ಲಿ ಮೈಸೂರಿನ ಕನ್ನಡಸಂಸ್ಕೃತಿ ಇಲಾಖೆಯಿಂದ ಯುವಸಂಭ್ರಮ ಪ್ರಶಸ್ತಿ, ಧಮಸ್ಥಳದ ಶಾಂತಿವನಟ್ರಸ್ಟ್ ವತಿಯಿಂದ ನಡೆಯುವ ರಾಜ್ಯ ಮಟ್ಟದ ಅಂಚೆಕುಂಚ ಸ್ಪರ್ಧೆಯಲ್ಲಿ ೨೦೦೧ರಿಂದ ಸತತ ನಾಲ್ಕು ಹಾಗು ೨೦೦೭ರಲ್ಲಿ ಪ್ರಶಸ್ತಿ ಒಟ್ಟು ಐದು ಬಾರಿ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಜಪಾನ್‌ಹಬ್ಬದಲ್ಲಿ ೨೦೦೯ ರಿಂದ ನಾಲ್ಕು ಬಾರಿ, ಕಿರಿಗಾಮಿ ಪೇಪರ್ ಕಟ್ಟಿಂಗ್ಸ್ ಕಾಗದ ಕಲೆಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ, ೧೯೯೯ರಲ್ಲಿ ಮೈಸೂರಿನ ರಾಮನ್ಸ್ ಕಂಪ್ಯೂಟರ್ ರಾಕೊಫೇಸ್ಟ್ ಪ್ರಶಸ್ತಿ, ಕರ್ನಾಟಕಲಲಿತ ಕಲಾ ಅಕಾಡೆಮಿಯಿಂದ ಎರಡು ಬಾರಿ ಸ್ಕಾಲರ್‌ಶಿಪ್ ೧೯೯೯ ಮತ್ತು ೨೦೦೦. ವೈಜಯಂತಿಚಿತ್ರಕಲಾಶಾಲೆಯಿಂದ ಬೆಸ್ಟ್ ಮ್ಯೂರಲ್ ಪ್ರಶಸ್ತಿ, ೨೦೦೧-ರಲ್ಲಿ ಮೈಸೂರಿನ ಮಾನಸಗಂಗ್ರೋತಿಯ ಮಹಿಳಾಅಧ್ಯಯನಕೇಂದ್ರದಿಂದ ಪೋಸ್ಟರ್‌ರಚನಗೆಪ್ರಶಸ್ತಿ, ಇವುಗಳ ಜೊತೆಗೆ ಅನೇಕ ಸಂಘಸಂಸ್ಥೆಗಳಿಂದ ಸನ್ಮಾನಗಳು ಸಾಂಝಿಕಲಾಸಾಮ್ರಾಟ್, ಚಿತ್ರರತ್ನ ಹೀಗೆ ಹಲವಾರು ಪ್ರಶಸ್ತಿಗಳು ಸಂದಿವೆ. ಇವರ ಕಲಾಯಾತ್ರೆ ಹೀಗೆ ನಿರಂತರವಾಗಿ ಸಾಗಲಿ ಎಂದು ಹಾರೈಸೋಣ.
ಒತ್ತಡವೇ ತುಂಬಿರುವ ಈ ಜಗತ್ತಿನಲ್ಲಿ ಕಲೆಯೇ ಒತ್ತಡವನ್ನು ಕಳೆಯುವ ಸಾಧನ ಎಂದೇ ನಂಬಿರುವ ಹುಸೇನಿಯವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯ ಬೇಕಾಗಿದ್ದಲ್ಲಿ 9845153277ಕ್ಕೆ ಕರೆ ಮಾಡಬಹುದು ಇಲ್ಲವೆ ಇವರ ಬ್ಲಾಗ್: mysorehuseni.blogspot.in ನಲ್ಲಿ ಸಾಂಝಿ ಕಾಗದ ಕಲೆಯ ಚಿತ್ರಗಳನ್ನು ನಡಬಹುದಾಗಿದೆ…
ಹುಸೇನಿಯವರಲ್ಲಿನ ಕಲಾಕಾರನಿಗೂ ಅದನ್ನು ಪರಿಚಯಿಸಿದ ಪಂಜು ಪತ್ರಿಕೆಗೂ ನನ್ನ ಧನ್ಯವಾದಗಳು.
superb
Superb! Very talented!!
Adbhutha kale
wonderful art..
congrats..& best wishes
ಅಮೋಘ ಕಲೆ!!
ಧನ್ಯವಾದಗಳು.
superb!
best wishes..
work excellent
u r extra ordinary sir