ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-2015' ಕ್ಕಾಗಿ ಕನ್ನಡದ ಕವಿಗಳಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000 ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ ತಿಂಗಳಲ್ಲಿ ನಡೆಸಲಾಗುವುದು. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 31. 

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ.
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ; ಪ್ರಕಾಶ ಮತ್ತು ಸುನಂದಾ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2015, ನಂ. 90, 'ನಾಗಸುಧೆ' ಮಹಡಿ, 6/ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031, ದೂರವಾಣಿ; 9845779387. 

*****

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments
0
Would love your thoughts, please comment.x
()
x