ಲೇಖನ

2017ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-2017' ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಈ ಪ್ರಶಸ್ತಿಯು ರೂ.5000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ವಿಜೇತ ಹಸ್ತಪ್ರತಿಯನ್ನು ಗದಗ ದ ಲಡಾಯಿ ಪ್ರಕಾಶನದಿಂದ ಪ್ರಕಟಿಸಲಾಗುವುದು. 

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ. 

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು. 


ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 15. 

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ; 

ಪ್ರಕಾಶ ಸುನಂದಾ ಕಡಮೆ 
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2017
ನಂ. 90, 'ನಾಗಸುಧೆ' ಮಹಡಿ, 
6/ಬಿ ಕ್ರಾಸ್, ಕಾಳಿದಾಸನಗರ, 
ವಿದ್ಯಾನಗರ ವಿಸ್ತೀರ್ಣ 
ಹುಬ್ಬಳ್ಳಿ- 580031
 
ದೂರವಾಣಿ; 9845779387. 


 

ಕನ್ನಡದ ಬರಹಗಳನ್ನು ಹಂಚಿ ಹರಡಿ

Leave a Reply

Your email address will not be published.