Facebook

Archive for 2020

ಪಂಜು ಕಾವ್ಯಧಾರೆ

ನಂಕ್ಯಾಕೋ…. ಬೆತ್ತಿಂಗ್ಳುನ ಕಂಡ್ರೇ ಭಯಾ ಆತೈತೆ ಬಾಗ್ಲಾಕ್ಕಂಡು ಬುಡ್ಡೀದೀಪಾನ ಆರಿಸಿ ಸುಮ್ಜೆ ಕೂಕಂತೀನಿ ಗವ್ವನ್ನೋ ಕತ್ಲು ಮೈಮ್ಯಾಗೇ ನಿಧಾನುಕ್ಕೆ ರೇಷ್ಮೇ ಹುಳ ತಲೆಯಾಡ್ಸಂಗೆ ನಿನ್ನ ಗ್ಯಾಪ್ನದ ನೆನಪುಗಳು ಎದ್ದು ನಿಂತ್ಕಂತವೆ ಗ್ವಾಡೇ ಮ್ಯಾಗೆ ನೀನೇ ಬಂದಂಗಾತು ದಾಳಿಂಬೆ ಬೀಜದ ಸಾಲಿಟ್ಟಂಗೆ ನಗ್ತಿದ್ದೆ ನನ್ನ ಮನುಸ್ನಾಗೆ ಒಲವಿನ ದೀಪ ಬೆಳುಗ್ತು ನಂಕಾಗ ಗೊತ್ತಾತು ನಾನೂನು ಒಬ್ಮನ್ಸಾ ಅಂತಾ ಗ್ವಾಡೇ ಮ್ಯಾಗೇ ಕೂಕಂಡು ನಗ್ತಾ ಇರೋಳ್ಗೇ ನಡುಮನೆತಾಕ ಬಂದು ಆಸರಿಕೆ- ಬ್ಯಾಸರಿಕೆ ಕಳಿಯಾಕೆ ಮನುಸಾಗ್ತಿಲ್ವಾ… ನಂಕ್ಯಾಕೋ ಬೆಳಕೇ ಬ್ಯಾಡಾ ಅನ್ನುಸ್ಬುಟೈತೆ […]

ಮನೆ ಬಾಡಿಗೆಗಿದೆ!: ಎಸ್.ಜಿ.ಶಿವಶಂಕರ್

ಹೌದು, ನನ್ನ ಮನೆಯ ಮೊದಲ ಮಹಡಿ ಮನೆ ಬಾಡಿಗೆಗಿದೆ! ಫ್ಯಾಕ್ಟ್ರಿ ಕೆಲಸ ಮಾಡಿದವರಿಗೆ ನನ್ನ ಕಾಲದಲ್ಲಿ ಪೆನ್ಷನ್ ಇರಲಿಲ್ಲ. ಅದಕ್ಕೇ ಪಿಎಫ್ ಸಾಲ ತೆಗೆದು ಬಾಡಿಗೇಗೇಂತ ಇಪ್ಪತ್ತು ವರ್ಷದ ಹಿಂದೆ ಮಹಡಿ ಮೇಲೊಂದು ಮನೆ ಕಟ್ಟಿಸಿದ್ದೆ. ಕೆಳಗೆ ನಾನು ವಾಸ, ಮೇಲಿನದು ಬಾಡಿಗೆಗೇಂತ ಯೋಜನೆ ಮಾಡಿ ಕಾರ್ಯ ಅರೂಪಕ್ಕಿಳಿಸಿದ್ದೆ. ಕಳೆದ ಇಪ್ಪತ್ತು ವರ್ಷದಲ್ಲಿ ಐದಾರು ಜನ ಬಾಡಿಗೆದಾರರು ನೆಮ್ಮದಿಯಿಂದ ಇದ್ದು ಹೋದರು. ಆದರೆ ಈಗ ಮಾತ್ರ ವಿಚಿತ್ರ ಪರಿಸ್ಥಿತಿ ಎದುರಾಗಿತ್ತು. ಪ್ರತೀ ರೂಮಿಗೂ ಅಟ್ಯಾಚ್ಡ್ ಬಾತ್ರೂಮು ಕೇಳುತ್ತಿದ್ದರು! […]

ಭಾವೈಕ್ಯತೆಯೆಂಬ ಬಳ್ಳಿಯ ಹೂವುಗಳು: ಹೆಚ್. ಷೌಕತ್ ಆಲಿ

ಯುವ ಕವಿ ಮೆಹಬೂಬ ಪಾಷ ಎ.ಮಕಾನದಾರ ಕೊಪ್ಪಳದವರು.ಸಮಾಜಶಾಸ್ತ್ರದಲ್ಲಿ ಎಂ.ಎ ಮತ್ತು ಬಿ.ಎಡ್ ಶಿಕ್ಷಣದ ಬಳಿಕ ಅತಿಥಿ ಉಪನ್ಯಸಕರಾಗಿ ಸೇವಾ ಕಾರ್ಯ ಆರಂಭ. ಕವಿಯ ಬಗ್ಗೆ ನಾನು ಒಂದಷ್ಟು ವಿಚಾರ ಹೇಳಬೇಕನ್ನಿಸುತ್ತೆ, ಬದುಕಿಗೆ ತುಂಬ ಹತ್ತಿರದನೆಂಟು ಮೆಹಬೂಬ ಪಾಷರವರ ಚಿಂತನೆಗಳು ಆಳಕ್ಕೆ ಹೋದರೂ ಅಲ್ಲಿಯು ಒಂದು ಚಿಗುರು ಕಾಣುವಂಥದ್ದು. ಜಾತಿ, ನೀತಿ, ರೀತಿ, ರೀವಾಜುಗಳಿಂದ ಆಚೆಗೆ ಇವರ ಹೃದಯ ಚಿಂತಿಸುತ್ತದೆ. ಬದುಕು ಅನೇಕ ಘಟ್ಟಗಳಲ್ಲಿ ಅನೇಕ ಅನುಭವ ನೀಡಿ ಅದರಿಂದ ಕಲಿತ ಪಾಠವೇ ಜೀವನದ ಸಾರ್ಥಕದ ಮುನ್ನೋಟವಾಗಿರುತ್ತೆ ಇಂತಹ […]

ಅಹಮಿಲ್ಲದ ಮಹಮದರ ಬದುಕೇ ಕವಿತಾಸಾರ: ಡಾ. ಹೆಚ್ಚೆನ್ ಮಂಜುರಾಜ್

ಎಲ್ಲ ಮರೆತಿರುವಾಗ ಇಲ್ಲ ಸಲ್ಲದ ನೆವವ ಹೂಡಿ ಬರದಿರು ಮತ್ತೆ ಹಳೆಯ ನೆನಪೇ ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ ರಾಡಿಗೊಳಿಸುವೆ ಏಕೆ, ಮಧುರ ನೆನಪೇ? ಬಹಳ ಒಳ್ಳೆಯ ಕವಿ ಹಾಗೂ ಅದಕಿಂತಲೂ ಒಳ್ಳೆಯ ಮನುಷ್ಯರಾದ ನಿಸಾರ್ ಅಹಮದ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ‘ಕನ್ನಡವೆಂದರೆ ಬರಿ ನುಡಿಯಲ್ಲ. ………’ ಎಂದು ತಿಳಿಸಿ ಕೊಟ್ಟವರಿವರು. ಮನಸು ಗಾಂಧಿಬಜಾರು ಎಂದವರು. ಕನ್ನಡ ನಾಡು ನುಡಿಗಳ ನಿತ್ಯೋತ್ಸವವನ್ನು ಸತ್ಯವಾಗಿಸಿದವರು. ಕುರಿಗಳು ಸಾರ್ ಕುರಿಗಳು ಎಂದು ವಿಡಂಬಿಸಿದವರು. ಮೂಲತಃ ಭೂಗರ್ಭ ವಿಜ್ಞಾನಿಯಾದರೂ ನವೋಲ್ಲಾಸದ ಕವಿಗಳಾಗಿಯೇ […]

ಕುರಿಯ ಹಾಲಿನ ಐಸಕ್ರೀಮು (ಭಾಗ ೧): ಗುರುಪ್ರಸಾದ ಕುರ್ತಕೋಟಿ

ಅಮೇರಿಕೆಗೆ ಹೋಗುವುದು ಖಚಿತವಾಗಿ, ವೀಸಾ ಸಂಭ್ರಮಗಳೆಲ್ಲ ಮುಗಿದಾಗ ನಮ್ಮ ಕಂಪನಿಯಲ್ಲಿ ನನಗೆ ಕರೆಗಳು ಬರಲು ಶುರುವಾಗಿದ್ದವು. ಅಮೆರಿಕೆಯ ವೀಸಾ ಸೀಲು ಬಿದ್ದವರು ಅಂದರೆ ಮದುವೆಗೆ ತಯಾರಾದ ಕನ್ಯೆಯರು ಇದ್ದಂತೆ. ಹುಡುಗಿಗೆ ವಯಸ್ಸಾದಂತೆ ತಂದೆತಾಯಿಯರಿಗೆ ಎಷ್ಟು ಆತಂಕ ಇರುತ್ತದೋ (ನಮ್ಮ ಕಾಲದಲ್ಲಿ ಹಾಗಿತ್ತು, ಈಗ ಹುಡುಗನ ತಂದೆತಾಯಿಗೆ ಅಂತ ಓದಿಕೊಳ್ಳಿ!) ಅದಕ್ಕಿಂತ ಹೆಚ್ಚು ಆತಂಕ ಆಯಾ ವಿಸಾಧಾರಿಗಳ ಮ್ಯಾನೇಜರ್ ಗಳಿಗೆ. ನಾವು ಒಂಥರಹದ ಬಿಸಿ ತುಪ್ಪ ಅವರಿಗೆ. ಅದಕ್ಕೆ ಕಾರಣವೂ ಇದೆ. ವೀಸಾಕ್ಕೆ ಅಂತ ಸಿಕ್ಕಾಪಟ್ಟೆ ಖರ್ಚು ಮಾಡಿರುತ್ತಾರೆ. […]

ಬೆನ್ ಜಾನಸನ್‍ನ ನಾಟಕ- Every Man In His Humour- ಅವಿವೇಕತನಕ್ಕೆ ಕನ್ನಡಿ: ನಾಗರೇಖಾ ಗಾಂವಕರ

ಇಂಗ್ಲೆಂಡಿನ ಹಳೆಯ ಉಪನಗರ ಹಾಗ್ಸ್‍ಡೆನ್‍ನ ನೋವೆಲ್ಲ್ ವಯೋವೃದ್ದ, ಆದರೆ ಧೀಮಂತ, ವ್ಯವಹಾರಿಕ ಕಲೆಯಲ್ಲಿ ನಿಪುಣ. ಆತನ ಮಗ ತರುಣ ಎಡ್ವರ್ಡ. ಮಗನ ಆಸಕ್ತಿಗಳು ಆತನ ಶ್ರೇಯಸ್ಸು ಇವುಗಳ ಬಗ್ಗೆಯೇ ತಂದೆಯ ಮೊದಲ ಆದ್ಯತೆ. ಮಗನಿಗೆ ಆಪ್ತವಾಗಿರುವ ಕಾವ್ಯ ಸಾಹಿತ್ಯಗಳೆಲ್ಲವೂ ಆತನಿಗೆ ಉಪಯೋಗಕ್ಕೆ ಬಾರದ ಸಂಗತಿಗಳು. ಲಾಭವಿಲ್ಲದ ವಿದ್ಯೆ. ಅದರೊಂದಿಗೆ ಆತನ ಇನ್ನೊಂದು ಚಿಂತೆ ಸದಾ ಗಿಡುಗಗಳ ಪಳಗಿಸುತ್ತ ಕಾಲಹರಣ ಮಾಡುವ ಆತನ ಅಣ್ಣನ ಮಗ ಹಳ್ಳಿ ಗಮಾರ ಸ್ಟೀಫನ್ ಬಗ್ಗೆ. ಒಬ್ಬ ವ್ಯಾವಹಾರಿಕ ಚಾತುರ್ಯವುಳ್ಳ ನೊವೆಲ್ಲ್ ತಂದೆಯಾಗಿ […]

ಸುಖಾಂತ: ಅಶ್ಫಾಕ್ ಪೀರಜಾದೆ

-೧- ಮೊದಮೊದಲು ಕ್ಷೇಮವಾಗಿಯೇ ಇತ್ತು ಜೀವನ, ಹೂವಿನಹಾಸಿಗೆಯಾಗಿತ್ತು. ಯಾರಿಗೆ ಗೊತ್ತಿತ್ತು? ಹೀಗೆ ಮುಳ್ಳಿನದಾರಿಯಾಗುವುದೆಂದು?, ಬದುಕು ಕಣ್ಣೀರ ಕಡಲಾಗುವದೆಂದು. ಮನೆಗೆನಾನೊಬ್ಬಳೆ ಮಗಳು, ಅರಮನೆಯಂಥ ಮನೆಗೆ ನಾನೇ ಒಡತಿ. ಅವ್ವನನ್ನನ್ನು ಅಪ್ಪನ ಕೈಗಿಟ್ಟು ಶಿವನ ಪಾದಾ ಸೇರಿದ್ದಳು. ಅವ್ವ ಹೋದಮ್ಯಾಗ ಊರ ಜನ ಅಪ್ಪನಿಗೆ ಇನ್ನೊಂದು ಮದುವೆ ಆಗುವ ಸಲಹೆನೀಡಿದ್ದರೂ, ಹೊಸದಾಗಿ ಬರುವ ಹೆಂಗಸು ಹೆಂಗಿರತಾಳೋ?. ತಾಯಿ ಇಲ್ಲದ ತಬ್ಬಲಿಗೆ ಮಲತಾಯಿ ಹಿಂಸೆ ಬೇರೆ ಬೇಡ ಅಂತಾ ಕಣ್ಣಲ್ಲಿ ಕಣ್ಣಿಟ್ಟು, ಅಂಗೈಯಲಿ ಅರಗಿಣಿ ಸಾಕಿದಾಂಗ ನನ್ನ ಸಾಕಿದ್ದ. ನಾ ಬೆಳದ […]

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 19 & 20): ಎಂ. ಜವರಾಜ್

-೧೯- ಸೂರ್ಯ ಕಣ್ಬುಟ್ಟು ನಾನು ಕಪಿಲ ಬಾವಿ ಮೆಟ್ಲತ್ರ ಇದ್ದಿ ಅಯ್ನೋರು ಬಾವಿ ನೀರೊಳ್ಗ ಈಜ್ತಾ.. ಚೆಂಗುಲಿ ಬಾವಿ ಕಟ್ಟ ಮ್ಯಾಲ ನಗ್ತಾ.. ಅರೆ, ಮ್ಯಾಲಿಂದ ತಿಗುನ್ ತಳ್ಳು ಬೀಳ್ತಲ್ಲಾ.. ಚೆಂಗುಲಿ, ‘ಅಯ್ನೋರಾ ತಳ್ಳು ಉದುರ್ತಾ ಅವ ಆದು ಗುಡ್ಯಾಕಕಿಲ್ವ. ಶಂಕ್ರಪ್ಪೋರು ಈಚೀಚ್ಗ ಬರದೇ ಇಲ್ಲ’ ‘ಅಂವ ನಿಗುರ್ತ ಅವ್ನ ನೀನೆ ಮಾಡ್ಲಾ ಸಂತಗೋಗಿ ಹರಾಜಾಕ್ಲಾ ನಿಂಗೇನ್ ಕೇಮಿ ಇದ್ದದು..’ ‘ಆಯ್ತು ಅಯ್ನೋರಾ ಆಗ ನನ್ನೇನಾರ ಶಂಕ್ರಪ್ಪೋರ್ ಕೇಳುದ್ರಾ..’ ‘ಏಯ್, ಲೌಡೆ ಬಂಚೊತ್ ಅಂವ ಹಂಗೇನಾರ ಬಂದ್ರ […]

ಪ್ರೀತಿಯ ದೇವತೆಗಾಗಿ……: ಜಹಾನ್ ಆರಾ

ನನ್ನ ಮುದ್ದು ಮಮ್ಮಿ ಜಾನ್‍ಗೆ ನನ್ನ ಮನದಾಳದಿಂದ ಪ್ರೀತಿ ತುಂಬಿದ ಒಂದು ಸಲಾಮ್. ಅಮ್ಮೀಜಾನ್ ತುಂಬಾ ನೆನಪಾಗ್ತಿದ್ದೀರಾ ನಿಮ್ಮ ಮಡಿಲಿಗೆ ಹಾಗೆ ಓಡಿ ಬಂದು ಮಗುವಾಗಿ ನೆಮ್ಮದಿಯ ತುಸು ಗಳಿಗೆ ಕಳಿಬೇಕು ಅಂತಾ ಅನಿಸ್ತಿದೆ ಆದರೆ ಏನ್ಮಾಡಲಿ ನಿಮ್ಮಿಂದ ನನ್ನನ್ನು ಬಹಳ ದೂರಕ್ಕೆ ಕಳಿಸಿದ್ದೀರಾ. ಮಮ್ಮೀಜಾನ್ ನೆನ್ನೆ ಒಂದು ಪದ್ಯ ಓದ್ದೆ ಸುಭದ್ರಕುಮಾರಿ ಚೌಹಾನ್ ‘ಮೈ ಬಚ್‍ಪನ್ ಕೊ ಭೂಲ್ ರಹಿತಿ ಬೋಲ್ ಉಲಿ ಬಿಟಿಯಾ ಮೇರಿ’ ‘ನಂದನ ವನಸಿ ಖಿಲ್ ಉಟ್ಟಿ ಯಹ ಛೋಟಿಸಿ ಕುಟಿಯಾ […]

“ಮಾನಸ ಗುರುವಿಗೆ ನನ್ನ ನಮನ”: ಶ್ರೀ ಕೊಯಾ

” ಮನೋರಮಾ ಮನೋರಮಾ ಮಲಗೋಬದ ಘಮ ಘಮ ” ನಾನು ಅದುವರೆವಿಗೂ ಹೈಸ್ಕೂಲು ದಿನಗಳಲ್ಲಿ ಕೇಳಿ, ಕಲಿತ ಪದ್ಯಗಳಿಗಿಂತಲೂ ಭಿನ್ನವಾಗಿದ್ದ ಪದ್ಯ ಇದಾಗಿತ್ತು. ಕಾಲೇಜಿನ ಮೆಟ್ಟಿಲು ಏರಿದ್ದ ದಿನಗಳವು : ಇಸವಿ ೧೯೭೬ , ದ್ವಿತೀಯ ಪಿಯುಸಿ. ನನಗೆ ನಿಸಾರ್ ಅಹಮದ್ ರವರಂತಹ ಕವಿಯ ಪರಿಚಯ ಮಾಡಿಸಿದ್ದು ಅಂದಿನ ಕನ್ನಡ ಪ್ರಾಧ್ಯಾಪಕರಾಗಿದ್ದ ಶ್ರೀಯುತ ಬಸವರಾದ್ಯರು. ಅಂದಿನ ದಿನಗಳಲ್ಲಿ ತಾಲೂಕ್ ಆಗಿದ್ದ ಚಾಮರಾಜನಗರದ ಕಾಲೇಜಿನಲ್ಲಿ ಕೇವಲ ಮೂವತ್ತು ವಿದ್ಯಾರ್ಥಿಗಳ ವೃಂದಕ್ಕೆ ; ಪಂಪ , ರನ್ನ , ಕುವೆಂಪು […]