2018 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2018’ ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. 10,000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ.

ವಿ.ಸೂ; ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು. ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು.

ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ; ಜುಲೈ 15.

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ;

ಪ್ರಕಾಶ ಸುನಂದಾ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2018
ನಂ. 90, ‘ನಾಗಸುಧೆ’ ಮಹಡಿ,
6/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- 580031
ದೂರವಾಣಿ; 9845779387.


 

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Inline Feedbacks
View all comments
0
Would love your thoughts, please comment.x
()
x