ಡಾ. ಹೆಚ್. ಶಾಂತಾರಾಮ್ ಪ್ರಶಸ್ತಿಗೆ ಕೃತಿ ಆಹ್ವಾನ

ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ನ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ ಹೆಸರಿನಲ್ಲಿ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಕಾದಂಬರಿಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ.

2018 ಜನವರಿಯಿಂದ 2019 ಡಿಸೆಂಬರ್ ಒಳಗೆ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ. ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಜೂನ್ 5,2020ರ ಒಳಗೆ ( 5/6/2020) ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ, ಉಡುಪಿ ಜಿಲ್ಲೆ 576201.ಈ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.

ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ದತ್ತಿನಿಧಿ ಸ್ಥಾಪಿಸಿ 2010ರಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು ಆಗಸ್ಟ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 15000 ರೂಪಾಯಿಗಳು ನಗದಿನೊಂದಿಗೆ ಬೆಳ್ಳಿಫಲಕ ನೀಡಲಾಗುವುದೆಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Inline Feedbacks
View all comments
0
Would love your thoughts, please comment.x
()
x