ಪಾತಾಳದೆಡೆಗೆ!: ಗುರುಪ್ರಸಾದ ಕುರ್ತಕೋಟಿ
(ಇಲ್ಲಿಯವರೆಗೆ) ವೆಂಕಣ್ಣ ಪರಿವಾರ ಸಮೇತ ಬೆಂಗಳೂರಿನ ವಿಮಾನಾಲಯದ ಪ್ರವೇಶದ್ವಾರಕ್ಕೆ ಪಾದಸ್ಪರ್ಶ ಮಾಡಿದಾಗ ಗಂಟೆ ರಾತ್ರಿ ಹನ್ನೊಂದಾಗಿತ್ತು. ಮುಂಜಾನೆ ಎರಡು ಗಂಟೆಗೆ ಪ್ಲೇನು ಹೊರಡುವದಿತ್ತಾದರೂ ಆದಕ್ಕಿಂತ ನಾಲ್ಕು ತಾಸು ಮೊದಲೇ ಅಲ್ಲಿರಬೇಕಿತ್ತು. ಎಲ್ಲ ಔಪಚಾರಿಕತೆಗಳನ್ನು ಮುಗಿಸಬೇಕಲ್ಲ. ಅಮೆರಿಕಾಕ್ಕೆ ಹೋಗುವುದೆಂದರೆ ಅಷ್ಟು ಸುಲಭವೇ? ಬೆಂಗಳೂರಿನಿಂದ ಜರ್ಮನ್ ದೇಶಕ್ಕೆ ಮೊದಲ ಫ್ಲೈಟು. ಅಲ್ಲಿಂದ ಅಮೇರಿಕಾದ ಚಿಕ್ಯಾಗೊ ನಗರಕ್ಕೆ ಇನ್ನೊಂದು ಫ಼್ಲೈಟು. ಕೊನೆಗೆ ಇವನು ಹೋಗಬೇಕಾಗಿದ್ದ ಊರಾದ ಸ್ಯಾಂಡಿ ಗೆ ಮತ್ತೊಂದು! ಒಂದೇ ಫ್ಲೈಟಿನಲ್ಲಿ ಅಷ್ಟು ದೂರ ಕ್ರಮಿಸುವುದು ಕಷ್ಟ. ಆ ದೇಶಕ್ಕೆ … Read more