ಅವಸ್ಥೆ!: ಎಸ್.ಜಿ.ಶಿವಶಂಕರ್
`ನೆನ್ನೆ ರಾತ್ರಿ ದಾವಣಗೆರೆಯವರು ಫೋನು ಮಾಡಿದ್ದರು..ಶಾಲಿನಿಯನ್ನು ಹುಡುಗ ಒಪ್ಪಿದ್ದಾನಂತೆ..ಆದ್ರೆ ಹುಡುಗ ಕಾರು ತಗೋಬೇಕಂತೆ, ಆರು ಲಕ್ಷ ವರದಕ್ಷಿಣೆ ಕೇಳ್ತಿದ್ದಾರೆ..ನೀನು ಹೂ ಅಂದರೆ..ನಿಮ್ಮಪ್ಪ ಫೋನು ಮಾಡಿ ಮಾತುಕತೆಗೆ ಕರೀಬೇಕೂಂತಿದ್ದಾರೆ…! ತಿಂಡಿಯ ತಟ್ಟೆ ಟೇಬಲ್ಲಿನ ಮೇಲಿಡುತ್ತಾ ತನ್ನ ತಾಯಿ ಹೇಳಿದಾಗ ರಾಜೀವನಿಗೆ ತನ್ನ ಶರೀರದ ಆ ಜಾಗ ನೆನಪಾಯಿತು. ಹೌದು ಸ್ನಾನ ಮಾಡುವಾಗ ನೋಡಿಕೊಂಡೆನಲ್ಲ..! ಅದರ ನೆನಪಿಂದ ಅವನಿಗೆ ವಿಚಿತ್ರವಾದ ಸಂಕಟವಾಯಿತು. ಆಹಾರ ಗಂಟಲಲ್ಲಿ ಇಳಿಯಲಿಲ್ಲ. ಕಿಟಿಕಿಯಿಂದಾಚೆ ನೋಡಿದ ಇನ್ನೂ ಕತ್ತಲಿತ್ತು. ಗಡಿಯಾರ ಆರೂವರೆಯನ್ನು ತೋರಿಸುತ್ತಿತ್ತು. `ಥೂ..ದರಿದ್ರದ ಟೈಮು! ಇದು … Read more