ಕವಿತೆಯ ಜಾಡು ಹಿಡಿದು: ಸ್ಮಿತಾ ಅಮೃತರಾಜ್. ಸಂಪಾಜೆ.
ಈ ಕವಿತೆ ಒಮ್ಮೊಮ್ಮೆ ಅದೆಷ್ಟು ಜಿಗುಟು ಮತ್ತುಅಂಟಂಟು ಅಂದ್ರೆ ಹಲಸಿನ ಹಣ್ಣಿನ ಮೇಣದ ತರ. ಮತ್ತೆ ಮತ್ತೆ ತಿಕ್ಕಿದಷ್ಟೂ ಅಂಟಿಕೊಳ್ಳುತ್ತಾ, ಬಿಡದೇ ಕಾಡುತ್ತಾ , ಸತಾಯಿಸುತ್ತಾ, ಹಿಂದೆ ಮುಂದೆ ಸುತ್ತಿ ಸುಳಿದು ಯಾವುದೋ ಭಾವನಾ ತೀರಕ್ಕೆ ಲಗ್ಗೆಯಿಡುತ್ತಾ ತನ್ನನ್ನು ತಾನು ಮರೆವಿಗೆ ನೂಕಿಬಿಡುತ್ತದೆ. ಅರೆ ಕ್ಷಣವೂ ಬಿಟ್ಟೂ ಬಿಡದ ಆತ್ಮಸಂಗಾತಿಯಂತೆ ಪಕ್ಕಕ್ಕಿರುತ್ತದೆ. ಕವಿತೆ ಯಾವೊತ್ತೂ ನನ್ನ ಕೈ ಬಿಡಲಾರದು ಎಂಬ ಗುಂಗಿನಲ್ಲೇ, ತುಸು ಹೆಚ್ಚೇ ಹಚ್ಚಿಕೊಂಡು, ಯಾವುದಕ್ಕೂ ವಿನಾಕಾರಣ ತಲೆ ಕೆಡಿಸಿಕೊಳ್ಳದೇ, ಕವಿತೆಯನ್ನು ನನ್ನ ತೆಕ್ಕೆಯೊಳಗಿಟ್ಟೋ. . … Read more