ಕಾಡು(ವ) ಕಟ್ಟುವ ಕತೆ!! ಭಾಗ-7: ಅಖಿಲೇಶ್ ಚಿಪ್ಪಳಿ
ತುಡುಗು ದನಗಳ ಕಾಟವನ್ನು ತಡೆಯಲು ಬೇರಾವುದೇ ಉಪಾಯ ಕಾಣಲಿಲ್ಲ. ಇಡೀ ದಿನ ಕಾಯುವುದಂತೂ ಸಾಧ್ಯವಿಲ್ಲ. ನೀರಿನ ಅಭಾವದಿಂದ ಸಾಯುತ್ತಿರುವ ಗಿಡಗಳನ್ನು ಉಳಿಸುವುದು ಹೇಗೆ ಎಂಬುದೇ ಪ್ರಶ್ನೆ. ಬಾವಿಯನ್ನೋ, ಕೊಳವೆ ಬಾವಿಯನ್ನೋ ತೆಗೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ನೀರಿನ ಅಭಾವಕ್ಕೆ ಮೊಟ್ಟಮೊದಲಿಗೆ ಬಲಿಯಾಗುತ್ತಿರುವುದು ಊರಹೊನ್ನೆಯೆಂಬ ಗಿಡಗಳು. ಇವುಗಳನ್ನು ಹೊನ್ನಾವರ-ಕುಮುಟದ ಕಡೆಯಿಂದ ತರಿಸಿದ್ದೆ. ಮೊದಲ ವರ್ಷ ನೀರು ಬೇಡುವ ಸಸ್ಯಗಳವು. ನೀರನ್ನು ಕೊಡದಿದ್ದರೆ ಊರಹೊನ್ನೆ ಗಿಡಗಳು ಬದುಕಲಾರವು. ಈಗ ನೆರೆಯವರಿಗೆ ಕೊಂಚ ಹೊರೆಯಾದರೆ ಹೇಗೆ ಎಂಬ ಯೋಚನೆಯೊಂದು ಬಂತು. ಪಕ್ಕದ ಆಶ್ರಮದವರ … Read more