ನಜರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಸಮಸ್ಯೆಗೆ ಹೋಜ ಸೂಚಿಸಿದ ಪರಿಹಾರ ಒಂದು ದಿನ ಹೋಜ ತನ್ನ ಪರಿಚಯದವನೊಬ್ಬನನ್ನು ರಸ್ತೆಯಲ್ಲಿ ಸಂಧಿಸಿದ. ಆ ಮನುಷ್ಯ ಚಿಂತಾಕ್ರಾಂತನಾಗಿದ್ದಂತೆ ಗೋಚರಿಸುತ್ತಿದ್ದದ್ದರಿಂದ ಹೋಜ ಅವನನ್ನು ಕಾರಣ ವಿಚಾರಿಸಿದ. “ನನಗೊಂದು ಭಯಾನಕ ಕನಸು ಬೀಳುತ್ತಿದೆ,” ವಿವರಿಸಿದ ಆತ, “ನನ್ನ ಮಂಚದ ಕೆಳಗೆ ಒಂದು ಪೆಡಂಭೂತವೊಂದು ಅಡಗಿ ಕುಳಿತಿರುವಂತೆ ಪ್ರತೀ ದಿನ ರಾತ್ರಿ ಕನಸು ಬೀಳುತ್ತಿದೆ. ಎದ್ದು ನೋಡಿದರೆ ಅಲ್ಲೇನೂ ಇರುವುದಿಲ್ಲ. ಎಂದೇ ನಾನೀಗ ವೈದ್ಯರ ಹತ್ತಿರ ಹೋಗುತ್ತಿದ್ದೇನೆ. ೧೦೦ ದಿನಾರ್ ಶುಲ್ಕ ಕೊಟ್ಟರೆ ಇದಕ್ಕೆ ಚಿಕಿತ್ಸೆ ನೀಡುವುದಾಗಿ ಹೇಳಿದ್ದಾರೆ.” … Read more