ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಕೋಡಂಗಿ ಒಬ್ಬಾತ ಮನೋವೈದ್ಯರನ್ನು ಭೇಟಿ ಮಾಡಿ ಹೇಳಿದ, “ ಡಾಕ್ಟರೇ, ನಾನು ಯಾವಾಗಲೂ ಮಂಕಾಗಿರುತ್ತೇನೆ. ನಾನೇನೇ ಮಾಡಿದರೂ ಮಂಕಾಗಿಯೇ ಇರುತ್ತೇನೆ. ಇದಕ್ಕೇನು ಪರಿಹಾರ ಎಂಬುದೇ ತಿಳಿಯುತ್ತಿಲ್ಲ.” ಮನೋವೈದ್ಯರು ಅವನನ್ನು ನೇರವಾಗಿ ನೋಡುತ್ತಾ ಹೇಳಿದರು, “ನನ್ನ ಜೊತೆಯಲ್ಲಿ ಕಿಟಕಿಯ ಹತ್ತಿರ ಬಾ.” ಇಬ್ಬರೂ ಕಿಟಕಿಯನ್ನು ಸಮೀಪಿಸಿದಾಗ ಮನೋವೈದ್ಯರು ಹೊರಗೆ ಒಂದು ದಿಕ್ಕಿನತ್ತ ತೋರಿಸುತ್ತಾ ಹೇಳಿದರು, “ಅಲ್ಲೊಂದು ಡೇರೆ ಕಾಣುತ್ತಿದೆಯಲ್ಲವೇ?. ಅದೊಂದು ಸರ್ಕಸ್ಸಿನ ಡೇರೆ. ಆ ಸರ್ಕಸ್ ನಿಜವಾಗಿಯೂ ಬಲು ಚೆನ್ನಾಗಿದೆ. ಅದರಲ್ಲೊಬ್ಬ ನಿಜವಾಗಿಯೂ ಜನಗಳನ್ನು ನಗಿಸಬಲ್ಲ ಕೋಡಂಗಿಯೊಬ್ಬನಿದ್ದಾನೆ. … Read more