ಇಲಿ ಪಾಶಾಣ ಮಾರುವವನ ಜೀವನ ಪ್ರೀತಿ: ನಟರಾಜು ಎಸ್. ಎಂ.
ಜಲ್ಪಾಯ್ಗುರಿಯ ಮಧ್ಯ ಭಾಗದಲ್ಲಿ ಒಂದು ಪುಟ್ಟ ನದಿ ಹರಿಯುತ್ತೆ. ಆ ನದಿಯ ಹೆಸರು ಕರೋಲ. ಬಹುಶಃ ಬೆಂಗಾಲಿಯಲ್ಲಿ ಕರೋಲ ಅಂದರೆ ಹಾಗಲಕಾಯಿ. ಈ ನದಿಗೆ ಅಲ್ಲಲ್ಲಿ ಪುಟ್ಟ ಪುಟ್ಟ ಸೇತುವೆಗಳಿವೆ. ಅಂತಹ ಒಂದು ಪುಟ್ಟ ಸೇತುವೆ ದಿನ್ ಬಜಾರ್ ಮೋಡ್ ಎನ್ನುವ ಜಾಗದ ಬಳಿ ಇದೆ. ದಿನ್ ಬಜಾರ್, ಜಲ್ಪಾಯ್ಗುರಿಯಲ್ಲಿ ವ್ಯಾಪಾರ ವಹಿವಾಟು ನಡೆಯುವ ಒಂದು ಪ್ರಮುಖ ಜಾಗ. ನಾನು ಮನೆಯಿಂದ ಆಫೀಸಿಗೆ ಹೊರಡಬೇಕಾದರೆ ಈ ದಿನ್ ಬಜಾರ್ ಅನ್ನು ದಾಟಿಯೇ ಹೋಗಬೇಕು. ನನ್ನ ಮನೆಯಿಂದ ಆಫೀಸಿಗೆ … Read more