ಕ್ರೂರ ಪ್ರಪಂಚದಲ್ಲಿ ನಾವೂ, ಮಕ್ಕಳೂ:ವಾಸುಕಿ ರಾಘವನ್
ಕಳೆದ ಡಿಸೆಂಬರ್ ಅಲ್ಲಿ ನಡೆದ “ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ”ಕ್ಕೆ ಹೋಗಿದ್ದು ಒಂದು ಅದ್ಭುತ ಅನುಭವ. ಒಂದು ಚಿತ್ರ ನೋಡಿ ಬಂದು, ಇನ್ನೊಂದು ಚಿತ್ರಕ್ಕೆ ಕ್ಯೂನಲ್ಲಿ ನಿಂತುಕೊಳ್ಳೋದು, ನಿಂತಲ್ಲೇ ಒಂದು ಸ್ಯಾಂಡ್ವಿಚ್ಚೋ ವ್ರಾಪೋ ಗಬಗಬ ತಿನ್ನೋದು. ಬೇರೆಯವರಿಗೆ ಹುಚ್ಚಾಟ ಅನ್ನಿಸಬಹುದಾದ ಈ ವರ್ತನೆ ಚಿತ್ರಪ್ರೇಮಿಗಳಿಗೆ ಸರ್ವೇಸಾಮಾನ್ಯ ಆಗಿತ್ತು. ಗೆಳೆಯ ಪವನ್ ಕುಂಚ್ ಜೊತೆ ಎರಡು ದಿನದಲ್ಲಿ ಎಂಟು ಚಿತ್ರ ನೋಡಿದ್ದು ಮರೆಯಲಾಗದ ನೆನಪು! ಶನಿವಾರ ಸಂಜೆ ಸಿನಿಮಾ ಹಾಲಲ್ಲಿ ಕೂರುವ ಹೊತ್ತಿಗೆ ಏನೋ ಒಂಥರಾ ಸುಸ್ತು. “ಫಿಲಂ … Read more