ಚೈತ್ರದ ಯುಗಾದಿ ಸಂಭ್ರಮ: ಸುಮನ್ ದೇಸಾಯಿ
ಮಾಸಗಳೊಳಗ ಮೊದಲನೆ ಮಾಸ ಚೈತ್ರ ಮಾಸ, ಅದರೊಳಗ ಬರೊ ಸಂವತ್ಸರದ ಮೊದಲನೆ ಹಬ್ಬ ಯುಗಾದಿ. ಯುಗಾದಿ ಅಂದಕೂಡಲೆ ನೆನಪಾಗೊದು, ಬೇವು ಬೆಲ್ಲ. ಈ ಬೇವು ಬೆಲ್ಲದ ಸಂಪ್ರದಾಯ ಯಾವಾಗ ಶುರು ಆತೊ ಗೊತ್ತಿಲ್ಲಾ, ಆದ್ರ ಭಾಳ ಅರ್ಥಪೂರ್ಣ ಪದ್ಧತಿ ಅದ. ಜೀವನದಾಗ ಬರೋ ಸುಖ-ದುಖಃ ಸಮಾನಾಗಿ ತಗೊಂಡು, ಧೈರ್ಯಾದಿಂದ ಎನಬಂದ್ರುನು ಎದರಸಬೇಕು ಅನ್ನೊ ಸಂದೇಶವನ್ನ ಸಾರತದ. ಚೈತ್ರ ಮಾಸ ಅಂದ್ರ ಫಕ್ಕನ ನೆನಪಾಗೊದು ಹಸಿರು, ಯಾಕಂದ್ರ ಚಳಿಗಾಲದಾಗ ಬರಡಾಗಿ ನಿಂತ್ತಿದ್ದ ಗಿಡಾ, ಮರಾ, ಬಳ್ಳಿಗೊಳು ಚಿಗುರೊ ಕಾಲಾ. ನಂಗಿನ್ನು … Read more