ಒಂದು ಹಳೆಯ ಪತ್ರ: ವೀರ್ ಸಂತೋಷ್
ದಿನಾಂಕ ೧೪ ಫೆಬ್ರವರಿ ೨೦೧೩ ಪ್ರೀತಿಯ ಹೆಸರು ಹೇಳಲಾಗದವಳೇ/ಪಲ್ಲವಿ, ಧನ್ಯವಾದಗಳು. ಖಾಲಿ ಹಾಳೆಯಂತಿದ್ದ ನನ್ನನ್ನು ಎಲ್ಲರೂ ಓದುವಂತಹ ಕೃತಿಯನ್ನಾಗಿ ಮಾಡಿದ ನಿನಗೆ ಪ್ರೀತಿಪೂರ್ವಕ ಧನ್ಯವಾದಗಳು. ಇದು ನಾನು ನಿನಗಾಗಿ ಬರೆಯುತ್ತಿರುವ ೩೬೫ನೇ ಪತ್ರ. ನಿನ್ನೆ ಬರೆಯುವಾಗಿದ್ದ ಪ್ರೇಮ, ಅದೇ ಉತ್ಕಟತೆಯೊಂದಿಗೆ ಇದನ್ನೂ ನಿನಗೆ ಅರ್ಪಿಸುತ್ತಿದ್ದೇನೆ. ನಿನ್ನ ಭಕ್ತನ ಈ ಕಿರು ಕಾಣಿಕೆಯನ್ನು ಸ್ವೀಕರಿಸುತ್ತೀಯಲ್ಲವೇ? ಆಯ್ತು ಕೋಪ ಮಾಡ್ಕೋಬೇಡ. ಹೀಗೆಲ್ಲಾ ಹುಚ್ಚು ಪ್ರೇಮಿಯಂತೆ ಮಾತಾಡೋದು ನಿನಗೆ ಇಷ್ಟವಿಲ್ಲ ಅನ್ನೋದು ನೆನಪಿದೆ. ಅದೆಲ್ಲಾ ಒತ್ತಟಿಗಿರಲಿ. ಇವತ್ತು ಫೆಬ್ರವರಿ ೧೪. ವ್ಯಾಲೆಂಟೈನ್ಸ್ … Read more