ಪ್ರೇಮ ಪತ್ರ: ಗಣೇಶ್ ಖರೆ
ನವೀನ ಮೇಘನಳ ಪರಿಚಯ ಸುಮಾರು ಆರೇಳು ವರ್ಷಗಳಷ್ಟು ಹಳೆಯದು. ಕಾಲೇಜಿನಿಂದ ಹಿಡಿದು ಕೆಲಸಕ್ಕೆ ಸೇರಿ ಎರಡು ವರ್ಷಗಳಾಗಿದ್ದವು ಇಬ್ಬರು ಜೊತೆಗಿದ್ದು. ನಿಷ್ಕಲ್ಮಶ ಸ್ನೇಹ ಇಬ್ಬರದು. ಇವರಿಬ್ಬರ ಸ್ನೇಹ ನೋಡಿ ಅಸೂಯೆಪಡದವರಿಲ್ಲ. ನಸುಗೆಂಪು ಬಣ್ಣದ ಉತ್ತಮ ಮೈಕಟ್ಟಿನ ಮಧ್ಯಮ ವರ್ಗದ ಸೀದಾ ಸಾದಾ ಹುಡುಗ ನವೀನ, ಹಾಲ್ಗೆನ್ನೆಯ ಎಲ್ಲರ ನೋಟವನ್ನ ಒಮ್ಮೆಲೇ ತನ್ನೆಡೆಗೆ ಸೆಳೆಯುವ ಶ್ರೀಮಂತರ ಮನೆಯ ಹುಡುಗಿ ಮೇಘನ, ಆದರೂ ಮನೆಯ ಶ್ರೀಮಂತಿಕೆ ಅವಳ ಸ್ವಭಾವದಲ್ಲಿರಲಿಲ್ಲ, ಬಹುಷಃ ಇದೆ ಕಾರಣವಿರಬೇಕು ಇವರಿಬ್ಬರ ಸ್ನೇಹ ಇಷ್ಟು ಗಟ್ಟಿಯಾಗಿರಲು. … Read more