ಓ ನಾಗರಾಜ ಅಪ್ಪಣೆಯೇ…
ನಮ್ಮ ಆಫೀಸಿನ ಎದುರು ಬೈಕುಗಳು ಸಾಲಾಗಿ ನಿಲ್ಲುವ ಜಾಗದಲ್ಲಿ ಮೊನ್ನೆ ನಾಗರಹಾವೊಂದು ಬಂದು ಮಲಗಿತ್ತು. ಅದೇನು ಬೈಕಿನಂತೆ ಸರದಿ ಸಾಲಿನಲ್ಲಿ ಇರಲಿಲ್ಲ. ಯಾರದೋ ಬೈಕಿನ ಟ್ಯಾಂಕ್ ಕವರ್‌ನಲ್ಲಿ ಬೆಚ್ಚಗೆ ಪವಡಿಸಿತ್ತು. ಸದ್ಯ ಬೈಕಿನ ಸವಾರನಿಗೆ ಅದೇನು ಮಾಡಲಿಲ್ಲ. ಗಾಬರಿಯಿಂದ ಇಳಿದು ಯಾವುದೋ ಚರಂಡಿ ಹುಡುಕಿಕೊಂಡು ಹೋಯಿತು. ಆವತ್ತೆಲ್ಲ ಆ ಹಾವಿನ ಬಗ್ಗೆ ಗುಲ್ಲೋ ಗುಲ್ಲು. ಅಲ್ಲಿದ್ದವರೆಲ್ಲ ಹಾವು ಅಲ್ಲಿಗೆ ಏಕೆ ಬಂತು ಎಂಬುದರ ಬಗ್ಗೆ ಒಂದು ವಿಚಾರಸಂಕಿರಣಕ್ಕೆ ಆಗುವಷ್ಟು ಮಾತಾಡಿದರು ಎನ್ನಿ. ಹಾವುಗಳು ಯಾರಿಗೆ ತಾನೆ … Read more