ಪೂರ್ಣತೆಯ ಕಡೆಗೆ
ಬುಡಸೋರುವ ಕೊಡದಲ್ಲಿ, ಹಿಡಿದಿಡುವ ಆಸೆಯಲಿ ತುದಿಕಾಣದ ಪಯಣವಿದು ತೀರಬಹುದೇ ದಾರಿ||ಪ|| ಬಗೆಹರಿಯದ ಮೌಲ್ಯವದು ’ಪೈ’ ಎಂದು ಪರಿಧಿ ವ್ಯಾಸದ ಸರಳ ಅನುಪಾತವದು ನಿಜಪೂರ್ಣಬೆಲೆಯ ಕಂಡುಹಿಡಿಯಲಾಗದೆ ಎಷ್ಟು ಯುಗಗಳೋ ಅದರ ಹಿಂದೆ ಹಿಂದೆ ಆದಿ ಗೂತ್ತಿಲ್ಲ ಈ ಪಯಣಕೆ, ಅಂತ್ಯ ಮೊದಲಿಲ್ಲ ಮಸುಕು ಗಮ್ಯದ ಕಡೆಗೆ ಹುಡುಕಾಟವೇ ಎಲ್ಲ ಸನಿಹವಾದರೂ ಎಂದೂ ನಿಖರವಲ್ಲ ಪೂರ್ಣತೆಯ ಸುಳಿವಿಲ್ಲ, ಪ್ರಯತ್ನ ಬಿಟ್ಟಿಲ್ಲ ತೀರದ ಹಠಕೆ ಅರ್ಪಣೆಯೇನು ಕಡಿಮೆಯ ಹೋದೇವ ಹತ್ತಿರ, ಮುಟ್ಟೇವ ಗುರಿಯ?||೧| ಅನಿಲ ಖನಿಜಗಳಷ್ಟೇ ಅವನಿಯಲಿದ್ದವಂತೆ … Read more