ಬೋನ್ಸಾಯಿ ಗಿಡದಂತೆ ಅರಳುವ ನರಳುವ ಸ್ತ್ರೀ ಬದುಕು: ನಾಗರೇಖಾ ಗಾಂವಕರ
ತೆಲಗಿನ ಪ್ರಸಿದ್ಧ ಲೇಖಕಿ ಅಬ್ಬೂರಿ ಛಾಯಾದೇವಿಯ ಒಂದು ಸಣ್ಣಕಥೆ “ಬೊನ್ಸಾಯಿ ಬ್ರತುಕು” ಅಂದರೆ ಬೋನ್ಸಾಯಿ ಬದುಕು. ಬೊನ್ಸಾಯಿ ಕಲೆಯನ್ನೆ ಆಧಾರವಾಗಿಟ್ಟುಕೊಂಡು ಸ್ತ್ರೀ ಬದುಕಿನ ಸುತ್ತ ಅದರ ಸೂಕ್ಷ್ಮ ಎಳೆಗಳ ಇತಿಮಿತಿಗಳ ಜಾಲಾಡಿದ ಸುಂದರ ಕಥಾನಕ. ಬೋನ್ಸಾಯಿ ಒಂದು ಜಪಾನೀ ಕಲೆ. ಅಗಾಧ ಬೆಳೆಯುವ ಮರಗಳನ್ನು ಕುಂಡಗಳಲ್ಲಿ ಮನೆಯೊಳಗಡೆ ಕೂಡ ಬೆಳೆಸುವಂತಹ ವಿಶಿಷ್ಟ ವಿಧಾನ. ಗಿಡದ ಬೆಳವಣಿಗೆಯನ್ನು ಕುಂಠಿತಗೊಳಿಸುವ, ಅದರ ವಿಸ್ತಾರಕ್ಕೆ ವೈಶಾಲ್ಯಕ್ಕೆ ಇತಿಮಿತಿಗಳ ಹೇರಿ, ಸಂಕುಚಿತಗೊಳಿಸುವ ಸುಂದರ ಕುತಂತ್ರದ ಕಲಾತ್ಮಕ ವಿಧಾನ. ಮರದ ಅಪಾರ ಸಾಮಥ್ರ್ಯ, ವಿಶಾಲತೆಗಳೆಲ್ಲ ಮೊಟಕುಗೊಂಡು … Read more