ಟಿ.ಎಸ್.ಗೊರವರ ಅವರ “ರೊಟ್ಟಿ ಮುಟಗಿ” ಕಾದಂಬರಿ ಲೋಕಾರ್ಪಣೆ
ಧಾರವಾಡದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಛಯದಲ್ಲಿ ಜನೆವರಿ 29, ರವಿವಾರ ಬೆಳಗ್ಗೆ 10.30ಕ್ಕೆ ಟಿ.ಎಸ್.ಗೊರವರ ಅವರ "ರೊಟ್ಟಿ ಮುಟಗಿ" ಕಾದಂಬರಿ ಲೋಕಾರ್ಪಣೆ.
ಧಾರವಾಡದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಛಯದಲ್ಲಿ ಜನೆವರಿ 29, ರವಿವಾರ ಬೆಳಗ್ಗೆ 10.30ಕ್ಕೆ ಟಿ.ಎಸ್.ಗೊರವರ ಅವರ "ರೊಟ್ಟಿ ಮುಟಗಿ" ಕಾದಂಬರಿ ಲೋಕಾರ್ಪಣೆ.
ತುಂಡು ಬಟ್ಟೆಯ ಮಾನ….. ನಡೆದು ಹೋಗಲು ಅವಳು ಹಾದಿಯಲಿ ಹಸಿದ ಮೊಸಳೆಗಳಂತೆ ನಿಂತು ಕಾಯುವರು ಚುಡಾಯಿಸಲು …… ಸೂಜಿಯ ಕಣ್ಣೋಟಗಳಿಂದ ಕೊಲ್ಲುವರು ಅವಳ ಉಡುಗೆಯ ಅಂಚು ಪಾಪ!! ಗಾಳಿಗೆ ಹಾರಲು…. ಸಣ್ಣ ಬಟ್ಟೆ ತೊಡಲೇ ಬೇಕಿಲ್ಲವಳು ಕ್ಷಣ ಕ್ಷಣ ಒಳಒಳಗೆ ಸಾಯಲು , ಕಾಲು ಭೂಮಿಗೆ ಸೋಕಿದರೆ ಸಾಕು, ಸಿದ್ಧವಾಗಿವೆ ಸಮಾಜ, ಕಟ್ಟುನಿಟ್ಟು, ಲಿಂಗ ತಾರತಮ್ಯ ಗಳು ಅವಳ ಇರಿಯಲು…. ತುಂಡು ಬಟ್ಟೆ ತೊಟ್ಟ ಮಾತ್ರಕ್ಕೆ ಹೆಣ್ಣು ಪರವಾನಗಿ ನೀಡಿದಂತೆಯೇ ಮುಟ್ಟಲು?????? ಹೌದೆನ್ನುವವರೇ ಹೇಳಿ ಹಾಯುವಿರಾ ನೀವು … Read more
ನಾಳೆ "ಕುಮಾರಗಂಧರ್ವ ಹಾಲ್ ನಲ್ಲಿ (ಬೆಳಗಾವಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಶಕ್ತರು ಭಾಗವಹಿಸಬೇಕು ಮತ್ತು ಆಸಕ್ತರು ಕಾರ್ಯಕ್ರಮವನ್ನು ವೀಕ್ಷಿಸಬೇಕು. ಒಟ್ಟಿನಲ್ಲಿ ಎಲ್ಲರೂ ಅಲ್ಲಿರಬೇಕು'' ಎಂದು ಪ್ರಿನ್ಸಿಪಾಲರಾದ ಶ್ರೀ ಬಿ. ಮಲ್ಲಿಕಾರ್ಜುನ ಸರ್ ಅವರು ಗಂಭೀರವಾಗಿ ಹೇಳಿದಾಗ ರೋಮಾಂಚನವಾಯಿತು. ಏಕೆಂದರೆ ಬಿ. ಎಡ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಅಂದ್ರೆ ಮರುಭೂಮಿಯಲ್ಲಿ ಸಿಗುವ ಓಯಾಸಿಸ್ ಇದ್ದಹಾಗೆ. ಅದೂ ಕೆ. ಡಿ ದೇಶಪಾಂಡೆ ಮತ್ತು ಆನಂದ ಅಪ್ಪುಗೋಳ್(ಧರ್ಮದೇವತೆ, ನಂತರ ಸಂಗೊಳ್ಳಿರಾಯಣ್ಣ ಸಿನೆಮಾ ಖ್ಯಾತಿಯ)ಅವರುಗಳು ನಡೆಸುವ ಕಾರ್ಯಕ್ರಮ. ಸರಿ, … Read more
ಕೃತಿ: ಹುರಿಗೆಜ್ಜಿ ಲೇಖಕರು: ರಾಜಕುಮಾರ್ ಮಡಿವಾಳರ ಅವಲೋಕನ: ಸುರೇಶ ಎಲ್.ರಾಜಮಾನೆ, ರನ್ನಬೆಳಗಲಿ ಹುರಿಗೆಜ್ಜಿಯ ಸದ್ದು ಮನಸಿನ ಕಿವಿತಾಕಿದಾಗ… *** ರಾಜಕುಮಾರ್ ಮಡಿವಾಳರ ಅವರನ್ನು ಬೇಟಿಯಾಗಿ ಸರಿಯಾಗಿ ಎರಡು ವರ್ಷಗಳ ನಂತರ ಮತ್ತೊಮ್ಮೆ ಮೊನ್ನೆ ನಡೆದ ಮಕ್ಕಳ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ಎದುರುಗೊಂಡೆನು. ಈ ಕವಿ ಜೊತೆಗೆ ಬರೆತಾಗ ಕವಿ ಬೆರೆಯುವದಕ್ಕು ಬರೆಯುವದಕ್ಕೂ ವ್ಯತ್ಯಾಸವಿಲ್ಲ ಅನಿಸಿತು. ಪ್ರೀತಿಯಿಂದ ಹುರಿಗೆಜ್ಜಿ ಕೇಳಿದಾಗ ರಾಜಮರ್ಯಾದೆಯೊಂದಿಗೆ… ಎಂದು ಬರೆದು ನನ್ನ ಕೈಗಿಟ್ಟ ಈವತ್ತು ಅವನ ಹುರಿಗೆಜ್ಜಿಯ ಸದ್ದನ್ನು ಮನಸಿನ ಕಿವಿ ನಿಮರಿಸಿಕೊಂಡು ಕೇಳುವ … Read more
ತನಗೆ ನಲವತ್ತು ವರುಷ ತುಂಬುವ ಮುನ್ನ ಭಾರತವ ವಿಶ್ವಮಾನ್ಯವಾಗಿಸಿ, ಭಾರತದ ಧರ್ಮ, ಸಂಸ್ಕೃತಿಯ ಜಗಕೆ ಸಾರಿ, ಹಿಂದೂ ಧರ್ಮದ ಉದಾತ್ತತೆಯನ್ನು ಅರ್ಥೈಸಿ, ಭಾರತದ ಬಗೆಗೆ ಮಹಾನ್, ಉದಾತ್ತ ಭಾವನೆ, ಬರುವಂತೆ ಮಾಡಿ, ಅದ್ಬುತವ ಸಾಧಿಸಿ, ವಿಶ್ವಮಾನ್ಯನಾದ. ಆ ವೀರ ಸನ್ಯಾಸಿ ತನ್ನ ಆಕರ್ಷಕ ನಿಲುವಿನಿಂದ, ಉದಾತ್ತ ಮಾತಿನಿಂದ, ಸಿರಿ ಕಂಠದಿಂದ ಜನರ ಮಂತ್ರಮುಗ್ದಗೊಳಿಸಿ ಜಗವ ಗೆದ್ದ ! ಭಾರತ ರೂಪುಗೊಳ್ಳದ ಮುನ್ನ ಭಾರತೀಯತೆಯ ಪರಿಚಯ ವಿಶ್ವಕ್ಕೆ ಅಷ್ಟಾಗಿ ಆಗಿರಲಿಲ್ಲ. ಆಗಲು ಸಾಧ್ಯವಿರಲಿಲ್ಲ. ಏಕೆಂದರೆ ೧೯೪೭ ಕ್ಕಿಂತ ಹಿಂದೆ … Read more
೧ ಆ ಮುಗ್ಧಮುಖದ ಕಪ್ಪು ಚೆಲುವೆಯ ಚಿತ್ರವಿರುವ ಫೋಟೊವನ್ನು ಸುದೀಪ ರಾಜುವಿನ ಕೈಗೆ ಕೊಡುತ್ತಾ ಹೇಳಿದ, 'ರಾಜು, ಬೇಜಾರು ಮಾಡಬೇಡ. ನಿನ್ನ ಹೆಂಡತಿಯ ಈ ಫೋಟೋ ಕೊಡಲು ಸ್ವಲ್ಪ ತಡವಾಯಿತು'. ಸುದೀಪ ಕೊಟ್ಟ ಆ ಫ಼ೋಟೊ ನೋಡುತ್ತ ರಾಜು ಕಣ್ಣುಗಳಲ್ಲಿ ನೀರು ತುಂಬಿಕೊಂಡ. 'ನಿಮ್ಮಿಂದ ತುಂಬಾ ಉಪಕಾರವಾಯಿತು. ನನ್ನ ಹೆಂಡತಿಯ ನೆನಪಿಗೆ ಇದಕ್ಕಿಂತ ಒಳ್ಳೇದು ನಾನಿನ್ನೇನೂ ನಿರೀಕ್ಷೆ ಮಾಡ್ಲಿಲ್ಲ. ನಿಮ್ಮ ಕ್ಯಾಮರಾದಲ್ಲಿ ಆದಿನ ಫ಼ೋಟೊ ತೆಗೆಯದೆ ಹೋಗಿದ್ದರೆ ಅವಳ ನೆನಪಿಗೆ ಅಂತ ನನ್ನ ಹತ್ರ ಇನ್ನೇನೂ ಇರ್ಲಿಲ್ಲ' … Read more
ಇಲ್ಲಿಯವರೆಗೆ ಕಾರ್ಲಾ ಹೊಮೋಲ್ಕಾ ಮಹಿಳೆಯರ ಕಿಂಗ್-ಸ್ಟನ್ ಜೈಲಿನಲ್ಲಿ ಬಂಧಿಯಾಗಿರುತ್ತಾಳೆ. ಮುಂದೆ 1997 ರಲ್ಲಿ ಆಕೆಯನ್ನು ಕ್ಯೂಬೆಕ್ ನಗರದ ಜೋಲಿಯೆಟ್ ಇನ್ಸ್ಟಿಟ್ಯೂಷನ್ ಗೆ ವರ್ಗಾಯಿಸಲಾಗುತ್ತದೆ. ಹಲವು ಮನಃಶಾಸ್ತ್ರಜ್ಞರು, ನ್ಯಾಯಾಲಯದ ಅಧಿಕಾರಿಗಳು, ಅಪರಾಧ ವಿಭಾಗದ ತಜ್ಞರ ತಂಡಗಳು ಸತತವಾಗಿ ಕಾರ್ಲಾಳನ್ನು ನಿಯಮಿತವಾಗಿ ಭೇಟಿ ಮಾಡುತ್ತಾ, ಅಗತ್ಯ ಚಿಕಿತ್ಸೆಯನ್ನು ನೀಡುತ್ತಿರುತ್ತವೆ. ಕಾರ್ಲಾ ಹೊಮೋಲ್ಕಾ ತೀವ್ರವಾದ ಗೃಹದೌರ್ಜನ್ಯಕ್ಕೆ ಬಲಿಯಾದ ಹೆಣ್ಣೆಂಬುದು ಸತ್ಯವಾದರೂ, ತನ್ನ ಪತಿಯ ಹಿಂಸಾಮನೋಭಾವಗಳೆಡೆಗೆ ವಿಪರೀತ ಎನ್ನುವಷ್ಟು ವ್ಯಾಮೋಹವಿದ್ದುದು ಅಧ್ಯಯನಗಳಿಂದಲೂ ತಿಳಿದುಬಂದವು. ಇಂಪಲ್ಸಿವ್ ಮತ್ತು ಸ್ಯಾಡಿಸ್ಟ್ ಗುಣಗಳನ್ನು ತನ್ನ ವ್ಯಕ್ತಿತ್ವದಲ್ಲಿ ಹೊಂದಿದ್ದ … Read more
ಅಪ್ಪ ದೇಹದಾನ ಮಾಡಿದ ಬಗ್ಗೆ ಒಂದಿಷ್ಟು ಜನ ಅಸಮಧಾನ ವ್ಯಕ್ತಪಡಿಸಿದರು. ಇರಲಿ ಅವರವರ ಭಾವಕ್ಕೆ ತಕ್ಕಂತೆ ಎಂದು ಸುಮ್ಮನಾದೆ. ಧಾರ್ಮಿಕ ವಿಧಿ-ವಿಧಾನಗಳನ್ನು ಮಾಡಬೇಕಲ್ಲ. ಕಾಶಿಗಿಂತ ಪವಿತ್ರವಾದ ಸ್ಥಳ ಗೋಕರ್ಣ ಎಂದು ಬಲ್ಲವರು ಹೇಳಿದರು. ಸರಿ ಎಂದು ಸಕುಟುಂಬ ಸಮೇತನಾಗಿ ಗೋಕರ್ಣಕ್ಕೆ ಹೊರಟಾಯಿತು. ಹೋದ ಕೂಡಲೇ ಮೊಟ್ಟ ಮೊದಲ ಕೆಲಸವೆಂದರೆ, ತಲೆ ಬೋಳಿಸಿಕೊಂಡಿದ್ದು. ಕನ್ನಡಿಯಲ್ಲಿ ಒಂದು ಕ್ಷಣ ಗುರುತೇ ಸಿಗದಂತೆ ಆಗಿತ್ತು. ಸ್ನಾನ ಮಾಡಿಬಂದವನು ಮೊದಲು ಹುಡುಕಿದ್ದು ಬಾಚಣಿಕೆಯನ್ನು. ಅಭ್ಯಾಸ ಬಲದಂತೆ ತಲೆ ಬಾಚಲು ಹೋದರೆ ಅಲ್ಲಿ ಕೂದಲೇ … Read more
ವಾಸಂತಿ ಮಗಳು ಮೃದುಲಾ ಗೆ ಫೋನ್ ಮಾಡಿದಳು. "ನಿನ್ನ ಅಣ್ಣ ನ ಲಗ್ನ ನಿಶ್ವಯವಾಗಿದೆ " ಒಂದು ವಾರದ ಮುಂಚೆಯೇ ಬರುವಂತೆ ಆಗ್ರಹ ಮಾಡಿದಳು. ಮೃದುಲಾ ಬಂದರೆ ಅಮ್ಮ ಅಮ್ಮ ಅಂತ ಹಿಂದೆ ಮುಂದೆ ಸುತ್ತುತ್ತ ಕೆಲಸಕ್ಕೆ ಸಹಾಯ ಮಾಡುತ್ತಾಳೆ ಎನ್ನಿಸಿತ್ತು. ಅವಳು ಮದುವೆಯಾಗಿ ಹೊರಟುಹೋದ ಮೇಲೆ ಒಂಟಿತನ ಕಾಡುತಿತ್ತು. ಅವಳ ಮದುವೆಯಾಗಿ ಎರಡು ವರ್ಷವಾಗಿದ್ದರೂ ಕೇವಲ ಒಂದುಸಾರಿ ಮನೆಗೆ ಬಂದಿದ್ದಳು. ದೂರದ ಹಳ್ಳಿ. ಬೇಸಾಯದ ಕುಟುಂಬ. ಬಿತ್ತನೆ ಕಾಲ,ಕೊಯ್ಲಿನ ಕಾಲ ಹೀಗೆ ಬಿಡುವಿಲ್ಲದ ಜೀವನ ಅವಳದು … Read more
ಅಪ್ಪ, ತಂದೆ, ಬಾಬಾ.. ಈ ಎರಡಕ್ಷರದ ಮಹತ್ವ. ಈ ಸಂಬಂಧದ ಅರ್ಥ ತಿಳಿದುಕೊಳ್ಳೋದು ಎಷ್ಟೋ ಜನರಿಂದ ಬಹುಷಃ ಆಗಂಗೇ ಇಲ್ಲಾ.. ಅಂಥವರಾಗ ನಾನೂ ಒಬ್ಬ ಎಷ್ಟಾದ್ರೂ ಹಿರಿ ಮಗ ನೋಡ್ರಿ, ಅವ್ವನ ಮ್ಯಾಲೇ ಪ್ರೀತಿ ಜಾಸ್ತಿ ಎಲ್ಲಾರೂ ಅಂತಾರ ತಾಯಿಯಾದಮೇಲೆ ಹೆಣ್ಣೆಗೆ ಎರಡನೇ ಜೀವ ಸಿಗ್ತದ ಅಂತ, ಮತ್ತ ಅಪ್ಪಗ? ಅವನ ಬಗ್ಗೆ ಯಾರೂ ಜಾಸ್ತೀ ಮಾತಾಡಲೇ ಇಲ್ಲ ಯಾಕಂದ್ರ ಅವರ ಜೀವನದಾಗ ಅಪ್ಪನ ‘ರೋಲ್’ ಯಾವತ್ತೂ, ಯಾರಿಗೂ ಕ್ಲಿಯರ್ ಆಗ್ಲೇ ಇಲ್ಲ ಎಲ್ಲರ ಜೀವನದ ಕಥಿಯೊಳಗೂ … Read more
“ಪ್ರತಿ ಸುಖದ ಹಿಂದೆ ಅನಿವಾರ್ಯವಾಗಿ ದುಃಖ ಬೆಂಬತ್ತುವುದೇ ಆದಲ್ಲಿ, ಆಗ ದುಃಖದಿಂದಲ್ಲ – ಸುಖದಿಂದಲೇ ಮುಕ್ತನಾಗುವ ಸ್ಪಷ್ಟತೆ ನಿನ್ನ ಜೀವನದಲ್ಲಿ ಫಲಿತವಾಗಬೇಕು.” (ಓಶೋ) — ನಾನಾಗ ಬೆಳಗಾವಿಯವನಾಗಿದ್ದೆ. ನಾನು ನನ್ನ ಸಂಸಾರದೊಂದಿಗೆ ವಾಸಿಸುತ್ತಿದ್ದ ಬಾಡಿಗೆ ಮನೆ ಬೆಳಗಾವಿ ದಂಡು ಪ್ರದೇಶದಲ್ಲಿತ್ತು. 1999 ರ ಡಿಸೆಂಬರ ತಿಂಗಳ ಮೊದಲ ರವಿವಾರದ ದಿನ ಮುಂಜಾನೆಯ ಸಮಯ. ಮನೆಯ ಬಾಗಿಲ ಚಿಲಕ ಕಟಕಟ ಬಡಿದ ಶಬ್ಧ. ಬಾಗಿಲು ತೆಗೆದೆ, ಅವನು ನಿಂತಿದ್ದ. ಬಾರೋ ಒಳಗೆ ಅಂದೆ. ಬಂದ, ಕೈಲಿದ್ದ ಆವತ್ತಿನ … Read more
ಗೋಪಾಲ್ ವಾಜಪೇಯಿ ಅನ್ನುವ ಹೆಸರು ಕೇಳಿದ ತಕ್ಷಣ ಸಿನಿಮಾದ ಹಾಡುಗಳ ಬಗ್ಗೆ ಗೊತ್ತಿರುವವರಿಗೆ ‘ಈ ಹಸಿರು ಸಿರಿಯಲಿ, ಮನಸು ನಲಿಯಲಿ ನವಿಲೇ’ ಮತ್ತು ‘ಕಂಬದಾ ಮ್ಯಾಲಿನ ಗೊಂಬೆಯೆ, ನಂಬಲೇನ ನಿನ್ನ ನಗೆಯನ್ನ’ ಹಾಡುಗಳಾದರೆ, ರಂಗಭೂಮಿಯ ಜನರಿಗೆ ‘ಅದ ಗ್ವಾಡಿ, ಅದ ಸೂರು ದಿನವೆಲ್ಲ ಬೇಜಾರು/ ತಿದಿಯೊತ್ತಿ ನಿಟ್ಟುಸಿರು ಎದಿಯಾಗ ಚುರುಚುರು..’, ‘ಯಾವ ದೇಸದ ರಮಣ ಬಂದು, ಏನ ಮೋಸವ ಮಾಡಿದಾ…’ ಇತ್ಯಾದಿ ಹಾಡುಗಳು ನೆನಪಿಗೆ ಬರುತ್ತವೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಶಿವರಾಜಕುಮಾರ್ ನಟಿಸಿದ ‘ಸಂತೆಯಲ್ಲಿ ನಿಂತ ಕಬೀರ’ ಸಿನಿಮಾ … Read more
ಅವತ್ತು ಎಪ್ರಿಲ್ ೨೧ ನೆ ತಾರೀಖು, ಮದ್ಯಾಹ್ನದ ಹೊತ್ತು. ಫೇಸ್ ಬುಕ್ ಮೆಸ್ಸೆಂಜರ್ ನಲ್ಲಿ ಬಂದ “ಎಂತದ್ರೋ” ಅನ್ನೋ ಮೆಸ್ಸಜು ನನ್ನ ಕಣ್ಣು ಹಿಗ್ಗಿಸಿತ್ತು. ಯಾವ ಹಿರಿಯರು ಆನ್ಲೈನ್ ಇದ್ದಾರೆ ಅಂತ ಗೊತ್ತಿದ್ರೂ, ಅವರು ನನಗೆ ಎಷ್ಟು ಚೆನ್ನಾಗಿ ಪರಿಚಯ ಇದ್ರೂ, ಅವರನ್ನ ಮಾತಾಡಿಸಬೇಕು ಅಂತ ಆಸೆ ಆದರೂ ಪಿಂಗ್ ಮಾಡೋಕೆ ಹೆದರತಿದ್ನೋ, ಅವರೇ ನನಗೆ “ಎಂತದ್ರೋ” ಅನ್ನೋ ಮೆಸ್ಸೇಜ್ ಕಳಸಿದ್ರೆ ನನಗೆ ಎಷ್ಟು ಖುಷಿ ಆಗಬೇಡಾ? ಅವತ್ತಿನ ದಿನ ನಾನು ಅಮೇರಿಕದಲ್ಲಿ ಇದ್ದೆ, ಅವ್ರು ಬೆಂಗಳೂರಿನಲ್ಲಿ. … Read more
ಇತ್ತೀಚೆಗೆ ಸಂಧ್ಯಾರಾಣಿ ತಾವು ಗೋಪಾಲ ವಾಜಪೇಯಿಯವರನ್ನು ಮೊದಲಬಾರಿ ಭೇಟಿಯಾದಾಗಿನ ಸನ್ನಿವೇಶ ಹೇಳುತ್ತಿದ್ದರು. ಅವರು ಮುಂದುವರೆಸುತ್ತ ಹೇಗೆ ಒಬ್ಬ ಕವಿ ತಾನೇ ಗೀತೆಗಳ ರಚಿಸಿದರೂ ಅದರ ಹಕ್ಕನ್ನು ಅನುಭವಿಸಲಾಗದ ಸಂಕಟವನ್ನು ಹೇಗೆ ಅನುಭವಿಸಿರಬಹುದು ಎಂದು ಹೇಳುತ್ತಿದ್ದರು. ಅದ್ಭುತ ಅನ್ನುವ ಸಾಹಿತ್ಯ ಹಾಡುಗಳ ಬರೆದರೂ ಇದು ನನ್ನದು ಅಂತ ಹೇಳಿಕೊಳ್ಳಲಾಗದ ವಿಚಿತ್ರ ಪರಿಸ್ಥಿತಿ ಗುರುಗಳಾದ ಗೋಪಾಲ ವಾಜಪೇಯಿ ಅನುಭವಿಸಿದರು. ಅದು ಆಗಿದ್ದು ನಾಗಮಂಡಲ ನಾಟಕ/ಸಿನೇಮಾಗೆ ಸಂಬಂಧಿತವಾಗಿ. ಶಾಮರಾಯರ ಕಣ್ಣು/ಕಿವಿ ತಪ್ಪಿಸಿ ಬರೆಯುವ ಪರಿಸ್ಥಿತಿ..ಇಂದಿಗೂ ನಾಗಮಂಡಲದ ಹಾಧು ಬರೆದವರು "ಗೋಪಾಲ … Read more
ನನ್ನ ಮಗ ಗುರುಪ್ರಸಾದ ಅದೊಂದು ದಿನ ಬೆಳಿಗ್ಗೆ “ಅಪ್ಪ, ಗೋಪಾಲ ವಾಜಪೇಯಿಯವರ ಪುಸ್ತಕ ಬಿಡುಗಡೆ ಸಮಾರಂಭವಿದೆ ಬರುತ್ತೀಯಾ? ಅವರು ನಿನ್ನನ್ನು ಕರೆದುಕೊಂಡು ಬರಲು ಹೇಳಿದ್ದಾರೆ.” ಅಂತ ಕೇಳಿದ. ನಾನು ಕೂಡಲೇ ಹೂಂ ಅಂತ ಒಪ್ಪಿಕೊಂಡೆ. ಆ ಹೆಸರು ನನಗೆ ೪೩ ವರ್ಷ ಹಿಂದೆ ಕರೆದೊಯ್ದಿತು. ನಮ್ಮಿಬ್ಬರದು ಗುರು-ಶಿಷ್ಯ ಸಂಬಂಧ. ಆ ಸಮಾರಂಭಕ್ಕೆ ಜಾತಕ ಪಕ್ಷಿಯಂತೆ ಕಾಯತೊಡಗಿದೆ. ಅಷ್ಟು ವರ್ಷಗಳ ನಂತರ ನನ್ನ ಆತ್ಮೀಯ ಗೋಪಾಲನನ್ನು ನೋಡುವ ಅವಕಾಶ ಅದಾಗಿತ್ತು. ನನ್ನ ಮಗನಿಗೆ ಚಿಕ್ಕಂದಿನಿಂದಲೂ ಸಾಹಿತ್ಯ, ನಾಟಕ ರಂಗದ … Read more
ನಿನ್ನ ಮಾತುಗಳು ಬೇಡುತ್ತಿರುವಾಗ ಬಲಿ ನನ್ನೆದೆಯ ನೋವನ್ನು ಯಾರಲ್ಲಿ ಹೇಳಿಕೊಳ್ಳಲಿ? ಮಾತಿಗೂ ಮೊದಲು ಕೋಪವೇ ಹೆಡೆ ಬಿಚ್ಚಿ ನಿಲ್ಲುತ್ತಿರುವಾಗ ಪಾತಾಳ ಗರುಡದ ಮಂತ್ರ ಕೋಲನ್ನು ಹುಡುಕುತ್ತ ಎಲ್ಲಿ ಹೋಗಲಿ? ಪ್ರೀತಿಯ ಹೂದೋಟದಲ್ಲಿ ಝಳಪಿಸುವ ಕತ್ತಿ ನರ್ತಿಸುವಾಗ ಸಾಣೆ ಹಿಡಿಯುವವರನ್ನು ಎಷ್ಟೆಂದು ಹುಡುಕಿ ಗಡಿಪಾರು ಮಾಡಲಿ? ಮನದ ಗರ್ಭಗುಡಿಯಲ್ಲಿ ನಂದಾದೀಪವೇ ಹೊತ್ತಿ ಪ್ರಜ್ವಲಿಸುವಾಗ ತಣ್ಣಿರು ಸುರಿದು ಬೆಂಕಿ ನಂದಿಸುವವರನ್ನು ಹುಡುಕುತ್ತ ಎಲ್ಲಿ ಹೋಗಲಿ? ಹೃದಯದಲ್ಲಿ ಪ್ರತಿಷ್ಟಾಪಿಸಿ ಮೂರ್ತಿ ತನ್ನನ್ನೇ ಭಗ್ನಗೊಳಿಸಿಕೊಳ್ಳುವಾಗ ಮುಕ್ಕಾಗದಂತೆ ಗರ್ಭಗುಡಿಯನ್ನು ಕಾವಲು ಕಾಯುವ ಕೆಲಸವನ್ನು ಯಾರಿಗೆ … Read more
80 ವರ್ಷಗಳ ಹಿಂದೆ ಅಳುತ್ತಲೇ ಭೂಮಿಗೆ ಬಂದ ಮಗುವಿಗೆ ತಿಳುವಳಿಕೆ ಬರುವ ಮೊದಲೇ ತನ್ನ ತಂದೆಯನ್ನು ಕಳೆದುಕೊಂಡಿತ್ತು. ತಂದೆಯನ್ನು ನೋಡಿದ ನೆನಪು ಅದಕ್ಕಿರಲಿಲ್ಲ. ಕಡುಬಡತನದ ಆ ಮನೆಯಲ್ಲಿ ಮನೆ ತುಂಬಾ ಮಕ್ಕಳು ಎಲ್ಲರೂ ಸೇರಿದರೆ ಬರೋಬ್ಬರಿ 8 ಮಕ್ಕಳು ಹಾಗೂ ಎರಡು ವಿಧವೆಯರು! ಊರಲ್ಲಿ ಶಾಲೆಯಿದೆ, ಓದಲಿಕ್ಕೆ ಕಷ್ಟವಿದೆ. ಅಂತೂ-ಇಂತೂ ಕಷ್ಟಪಟ್ಟು ಆ ಮಗು 7ನೇ ತರಗತಿಯವರೆಗೆ ಕಲಿಯಿತು. ಹೆಚ್ಚು ಕನ್ನಡ ಹಾಗೂ ಸ್ವಲ್ಪ ಇಂಗ್ಲೀಷು. ಮತ್ತೆ ಬೇಸಾಯಕ್ಕಿಳಿದ ಆ ಯುವಕ ನಿರಂತರವಾಗಿ ದುಡಿಯುತ್ತಲೇ ಇದ್ದ. ಮಧ್ಯದಲ್ಲಿ … Read more
ಕೇರಿಯ ಜನ ಕಂಗಾಲಾಗಿದ್ದರು. ಗೋಡೆಯಲ್ಲಿದ್ದ ಗೂಟ ಸುಮ್ಮನೆ ತೆಗೆದು ಅದೆಲ್ಗೋ ಬಡ್ಕೊಂಡ್ರು ಅನ್ನೋ ಹಾಗೆ ಇದೆಲ್ಲಾ ನಮ್ಗೆ ಬೇಕಿತ್ತಾ ಅಂತ ಕೇರಿಯ ಹೆಣ್ಣು ಮಕ್ಕಳೆಲ್ಲಾ ಗುಸು ಗುಸು ಪಿಸು ಪಿಸು ಮಾತಾಡಲು ಶುರು ಮಾಡಿದ್ದರು. ಇರೋದಕ್ಕೆ ಸರಿಯಾದ ಸೂರಿಲ್ಲಾ ಕುಡಿಯೋದಕ್ಕೆ ನೀರಿದ್ರೂ ಕೇರಿಯಾಚೆ ಹೋಗಿ ಹಿಡ್ಕೊಂಡ ಬರೋ ಧೈರ್ಯ ಇಲ್ಲಾ. ಮನೇಲಿರೋ ಮುಟಗಿ ಹಿಟ್ಟು ಖಾಲಿ ಆಗಿರೋದ್ರಿಂದ ಮೂರು ದಿನದ ತಂಗಳ ರೊಟ್ಟಿಯನ್ನೇ ನೆನೆಸಿಕೊಂಡು ತಿನ್ನೋ ಟೈಮ್ ಬಂದೈತಿ. ಕೂಸುಗಳಿಗೆ ಹಾಲು ಕುಡಿದೇವಂದ್ರೂ ನಮ್ಮ ಹೊಟ್ಟೆಗ್ ಹಿಟ್ಟಿದ್ರೇ ತಾನೇ … Read more
ಇಲ್ಲಿಯವರೆಗೆ ನ್ಯಾಯಮೂರ್ತಿ ಆರ್ಚಿ ಕ್ಯಾಂಪ್ಬೆಲ್ ರ ವರದಿಯು ಸ್ಕಾರ್-ಬೋರೋ ಸರಣಿ ಅತ್ಯಾಚಾರ ಪ್ರಕರಣಗಳಲ್ಲದೆ ಉಳಿದ ಪ್ರಕರಣಗಳ ಮೇಲೂ ಬೆಳಕು ಚೆಲ್ಲಿ ಉತ್ತಮ ಒಳನೋಟವನ್ನು ಕೊಡುತ್ತದೆ. ಕಾರ್ಲಾ ಹೊಮೋಲ್ಕಾಳ ತಂಗಿ ಟ್ಯಾಮಿ ಹೊಮೋಲ್ಕಾಳ “ಆಕಸ್ಮಿಕ ಮತ್ತು ಸ್ವಾಭಾವಿಕ'' ಸಾವೆಂದು ತಪ್ಪಾಗಿ ದಾಖಲಾದ ಘಟನೆಯನ್ನು ಉಲ್ಲೇಖಿಸುತ್ತಾ, ಟ್ಯಾಮಿಯ ಎಡಕೆನ್ನೆ, ಮೇಲ್ದುಟಿ ಮತ್ತು ಎಡಭುಜದ ಮೇಲೆ ಕಂಡುಬಂದಿದ್ದ ದಟ್ಟಕೆಂಪುಕಲೆಗಳ ಬಗ್ಗೆ ವರದಿಯು ಒತ್ತಿಹೇಳುತ್ತದೆ. ಹಚ್ಚೆಯಂತೆ ದಟ್ಟವಾಗಿ ಮೂಡಿಬಂದಿದ್ದ ಈ ಅಪರೂಪದ ಕಲೆಗಳನ್ನು ಕಡೆಗಣಿಸುವುದು ಸಾಧ್ಯವೇ ಇರಲಿಲ್ಲ. ಅಸಲಿಗೆ ಆಕೆಯ ಉಸಿರಾಟ ನಿಂತುಹೋದಾಗಲೇ … Read more
ಏಳ್ಬೇಕು ಅಂತಷ್ಟೊತ್ತಿಗೆ ಏಳ್ಬೇಕು, ಮಲಗ್ಬೇಕು ಅಂದಷ್ಟೊತ್ತಿಗೆ ಮಲಗಿ ಬಿಡ್ಬೇಕು. ಈ ಫೇಸ್ಬುಕ್ಕು,ವಾಟ್ಸಾಪು, ಜೀಮೆಲುಗಳನ್ನೆಲ್ಲ ಡಿಲಿಟ್ ಮಾಡಿ ಎಲ್ಲಾದ್ರೂ ದೂರ ಹೋಗಿ ಬಿಡಬೇಕು ಗುರೂ ಅಂತಿದ್ದವ ಅದರಲ್ಲೇ ಮೂರೊತ್ತೂ ಮುಳುಗಿರುತ್ತಿದ್ದ. ರಾಶಿ ರಾಶಿ ಪುಸ್ತಕಗಳ ಗುಡ್ಡೆ ಹಾಕಿಕೊಂಡವ ಕ್ಲಾಶ್ ಆಫ್ ಕ್ಲಾನ್ಸು, ಫ್ಯೂಚರ್ ಫೈಟಗಳಲ್ಲಿ ಕಳೆದುಹೋಗಿರುತ್ತಿದ್ದ. ಆಟಗಳಲ್ಲಿ ಸಿಗುವ ಕಾಲ್ಪನಿಕ ಕಾಸ ಹಿಂದೆ ಆತನ ಇಂದು ಕಾಣದಷ್ಟು ಕುರುಡನಾಗಿದ್ದವ ಒಮ್ಮೆ ಇದನ್ನೆಲ್ಲಾ ಪಟ್ಟನೆ ಬಿಟ್ಟು ಎಲ್ಲೋ ಮರೆಯಾಗಿಬಿಡುವನೆಂದು ಯಾರೂ ಎಣಿಸಿರಲಿಲ್ಲ. ಬೆಳಗಿಂದ ರಾತ್ರೆಯವರೆಗೂ ಆಫೀಸಲ್ಲೇ ಕೊಳೆಯುತ್ತಾನೆ ಎಂದು ಹೀಗಳೆಯೋ … Read more
ಮೌನಿ, ಗಿಜಿಗಿಡುವಂತೆ ಜನ ಸುತ್ತಲೆಲ್ಲರಿದ್ದರೂ ನಾ ನನ್ನೊಳು ಮಾತ್ರ ಮೌನಿ, ನನಗೆ ನಾನೇ ಮಿತ್ರ ನಾನೇ ಶತ್ರು ಏರಿಳಿತಗಳಲ್ಲೆಲ್ಲಾ ನನ್ನದು ಒಂದೇ ವೇಗ ಏರಿಗೆ ಕುಗ್ಗೇನು ಇಳಿವಿಗೆ ಹಿಗ್ಗೇನು ಜಾರಿದರೂ ಅಷ್ಟೇ ನೇಪಥ್ಯಕ್ಕೆ ಸರಿದರೂ ಅಷ್ಟೇ,, ಒಂಟಿ ದಾರಿಯಲಿ ನನಗೆ ನಾನೇ ಜಂಟಿ ಒಬ್ಬೊಬ್ಬನೇ ಮಾತನಾಡಿಕೊಳ್ಳುತ್ತೇನೆ ಅಳುತ್ತೇನೆ, ನಗುತ್ತೇನೆ ಒಮ್ಮಮ್ಮೆ ದು:ಖದಲಿ ಬಿಕ್ಕಿ ಬಿಕ್ಕಿ ಅಳುತ್ತೇನೆ, ಗೊತ್ತು ! ಈ ಜನರೆಲ್ಲ ನನ್ನ ಹಿಂದೆ ಆಡಿಕೊಳ್ಳುವರೆಂದು, ಹುಚ್ಚುಡುಗನೆಂದು ಲೊಚಗುಟ್ಟುವರೆಂದು, ಹರಿದ ಪ್ಯಾಂಟಿಗೆ ದಾರ ಕಟ್ಟಿ ಗೇಲಿ ಮಾಡುವರೆಂದು, … Read more
ಗೆಳೆಯ, ಮೇರೆ ಬಾತೋ ಮೇ ತೇರಿ ಫಿಕರ್ ಸದಾ…………………. ಮೇರೆ ಯಾದೋಂ ಮೇ ತೇರಿ ಫಿಕರ್ ಸದಾ……………….. ಖುಷಿಯಾಗಬೇಡ, ನಿನ್ನ ನೆನಸ್ಕೊಂಡು ಈ ಹಾಡು ಗುನುಗುತ್ತಿಲ್ಲ. ತುಂಬಾ ಹಾಯಾಗಿದ್ದೆ ಕಣೋ ನಾನು, ಸ್ವಾಭಿಮಾನಿ. ಚಿಕ್ಕಂದಿನಲ್ಲಿ ನನ್ನಿಬ್ಬರು ಗೆಳತಿಯರೊಡನೆ ಹರಟುತ್ತಾ, ನಗುತ್ತಾ ಶಾಲೆಗೆ, ಕಾಲೇಜಿಗೆ ಹೋಗುವುದು ಓದು ಕಲಿಯಲು ಎನ್ನುವುದನ್ನೇ ಮರೆತು ತುಂಬಾ ನಲಿಯುತ್ತಿದ್ದೆ. ಕಾಲೇಜಿನಲ್ಲಿ ಚೂಡಿ ಹಾಕಿದರೆ ವೇಲ್ ಹಾಕದೇ ಹೊರಟರೆ, ಇದ್ದರೂ ಕೊರಳಿಗಷ್ಟೇ ಸುತ್ತಿಕೊಂಡು ತಿರುಗುವುದನ್ನು ನೋಡಿ ಫ್ಯಾಮಿಲಿ ಫ್ರೆಂಡ್ಸ್ ಥರವಿದ್ದ ಹುಡುಗನೊಬ್ಬ ಗದರಿಸಿ … Read more
ನಾವು ಯಾವುದನ್ನೂ ಬಲವಂತವಾಗಿ ಉಳಿಸಲಾಗದು. ಹಾಗೆ ಉಳಿಸಿದರೂ ಬಹಳ ವರ್ಷ ಬದುಕದು. ಯಾವುದನ್ನು ಬಳಸುತ್ತೇವೋ ಅದು ಬಹಳ ವರ್ಷ ಉಳಿಯುತ್ತದೆ ಬೆಳೆಯುತ್ತದೆ. ಬರಿ ಬಾಯಿಯಿಂದ ಕನ್ನಡ ಉಳಿಸಿ ಬೆಳೆಸಿ ಎಂದು ಅಬ್ಬರಿಸಿದ ಮಾತ್ರಕ್ಕೆ ಕನ್ನಡ ಉಳಿಯದು. ಕನ್ನಡ ಬಳಸಿದರೆ ಉಳಿದೀತು, ಪ್ರೀತಿಸಿದರೆ ಬೆಳೆದೀತು. ಇದು ಯಾವುದೇ ಸಂಘ, ಸಂಸ್ಥೆ, ಒಕ್ಕೂಟಗಳ ಜವಾಬ್ದಾರಿಯಾಗಿರದೆ ಪ್ರತಯೊಬ್ಬ ಕನ್ನಡಿಗನ ಕರ್ತವ್ಯವಾಗಿರುತ್ತದೆ ಕನ್ನಡ ಸುಂದರ ಲಿಪಿಯಿರುವ ಮಧುರ ಭಾಷೆ. ಕನ್ನಡಿಗರನ್ನು, ಕನ್ನಡ ಸಂಸ್ಕೃತಿಯನ್ನು ರೂಪಿಸಿ, ದಾನ, ತ್ಯಾಗ ಉದಾತ್ತ ಗುಣಗಳಿಗೆ ಹೆಸರಾದ ಭಾಷೆ. … Read more
ನಾಲ್ಕನೇ ತರಗತಿಯಲ್ಲಿ ಕ್ಲಾಸ್ ಟೀಚರ್ ಆಗಿ ಇದ್ದಿದ್ದು ಒಬ್ಬರೇ ಮಾಸ್ತರು. ಅವರು ನನ್ನ ಜೀವನದಲ್ಲಿ ನೆನಪಿಟ್ಟು ಕೊಳ್ಳುವಂತಹ ವ್ಯಕ್ತಿತ್ವದವರು. ಅದು ನನ್ನ ನೆಚ್ಚಿನ ಕೊಟ್ರಪ್ಪ ಮಾಸ್ತರು. ಅವರೊಬ್ಬರೇ ಕನ್ನಡ, ವಿಜ್ಞಾನ, ಸಮಾಜ ಮತ್ತು ಗಣಿತ ಪಾಠವನ್ನು ಅತೀ ಸಂತೋಷವಾಗಿ ಹೇಳಿಕೊಡುತ್ತಿದ್ದುದು. ತಿಂಗಳಿಗೊಮ್ಮೆ ಪರೀಕ್ಷೆ, ಗರಿಷ್ಟ ಅಂಕ ಇಪ್ಪತೈದು. ಸರಿಸುಮಾರು ಎಲ್ಲಾ ವಿಷಯಗಳಲ್ಲೂ ಇಪ್ಪತ್ತರ ಮೇಲೆಯೇ ಗಳಿಸಿದ ನೆನಪು ನನಗೆ, ಅದಕ್ಕೆಂದೇ ಒಮ್ಮೆ ತರಗತಿಯ ಮಾನಿಟರ್ ಅದದ್ದೂ ಉಂಟು. ಹಾಗೆಯೇ ಇರಲು ಒಂದು ದಿನ … Read more
ಈ ಫೇಸ್ಬುಕ್ಕಿನ ಸಾಹಿತಿಗಳೆಲ್ಲಾ, ಅಥವಾ ಬೇರೆಡೆ ಸಾಹಿತ್ಯ ಬರೆಯುತ್ತಿದ್ದು ಸದ್ಯ ಫೇಸ್ಬುಕ್ಕಿನಲ್ಲಿ ಸಕ್ರಿಯರಾಗಿರೋ ಸ್ನೇಹಿತರೆಲ್ಲಾ ಯಾವುದೋ ಪಕ್ಷದ ವಕ್ತಾರರಂತೆ, ಮತ್ಯಾವುದೋ ಕೋಮಿನ ಹರಿಕಾರರಂತೆ ಯದ್ವಾ ತದ್ವಾ ಪೋಸ್ಟುಗಳನ್ನ ಹರಿಬಿಡೋದನ್ನು ನೋಡಿದಾಗ ಖೇದವಾಗುತ್ತೆ. ಮೋದಿಯೊಬ್ಬ ಸರ್ವಾಧಿಕಾರಿಯೆಂದಾಗ್ಲೋ, ಟಿಪ್ಪು ಜಯಂತಿ ಬೇಡವೆನ್ನುವವರಿಗೆ ಬುದ್ಧಿಯಿಲ್ಲವೆಂದಾಗ್ಲೋ , ಉರುಳು ಸೇವೆಗೋ, ಉಡುಪಿ ಚಲೋಗೋ ಪ್ರಶಂಸೆ, ಧಿಕ್ಕಾರಗಳನ್ನ ಬರೆದಾಗಾದ ಬೇಸರವಲ್ಲವದು. ಆದರೆ ಎಡವೇ ಸರಿಯೆಂದೋ, ಬಲವೇ ಸರ್ವೋತ್ತಮವೆಂದೋ ದಿನಂಪ್ರತಿ ಜಗಳ ಕಾಯೋ ಪರಿಗೆ ಕಸಿವಿಸಿಯಾಗುತ್ತೆ. ವೈಯುಕ್ತಿಕವಾಗಿ ಇಷ್ಟವಾಗೋ ಅವರು ಫೇಸ್ಬುಕ್ಕಿಗೆ ಬಂದಾಗ ಹಿಂಗ್ಯಾಕೆ ಅನ್ನೋದು … Read more
ಅಹಂಕಾರವೂ ಕರಗುವುದು. ಆಗರ್ಭ ಶ್ರೀಮಂತನ ಮಗನಿಗೆ ಐಶಾರಾಮಿಯ ಜೀವನ ನಡೆಸಲು ಏನೆಲ್ಲ ಮಾಡಬೇಕೋ ಅದನ್ನು ಚೆನ್ನಾಗಿ ತಿಳಿದಿದ್ದ.. ಕಾರು, ಬಂಗಲೆ ಜೊತೆಗೆ ಆಳುಕಾಳು ಅಲ್ಲದೆ ಕುಡಿತ ದಿನಕ್ಕೊಬ್ಬಳು ದೇಹದಾನ ಮಾಡುವವಳು ಸಿಗುತ್ತಿದ್ದಳು.. ತಂದೆ ರಾಮುವಿನ ಸವೆತ, ಬೆವರ ಹನಿ, ದೇಹದಲ್ಲಿ ಬತ್ತಿ ಹೋದ ರಕ್ತ ಇದಾವುದೂ ಕಣ್ಣಿಗೆ ಕಾಣಿಸುತ್ತಲೇ ಇರಲಿಲ್ಲ.. * ರೈತನಾಗಿದ್ದ ರಾಮುವಿನ ತಂದೆ ತನ್ನ ಕೃಷಿಭೂಮಿಯನ್ನು ಮಗನ ಕೈಗೊಪ್ಪಿಸಿ ಕಣ್ಣುಮುಚ್ಚಿಕೊಂಡರು. ಇದ್ದ ಒಂದು ಎಕರೆ ಜಾಗದಲ್ಲಿ ಮೊದಲು ಕೃಷಿ ಆರಂಭಿಸಿದ್ದ ರಾಮು ದಿನವೂ ತಾನೇ … Read more
ಕನ್ನಡ ನಾಡಿನ ಅಪರೂಪದ ನೃತ್ಯತಾರೆ ಜ್ಯೋತಿ ಬಳ್ಳಾರಿ ಹಾಗೂ ಕಲಾವಿದರ ತಂಡ ಜ್ಯೋತಿ ಬಳ್ಳಾರಿ ಕರ್ನಾಟಕ ಕಂಡ ಅಪರೂಪದ ನೃತ್ಯತಾರೆ. ಈ ತಾರೆ ಹಿಂದೊಮ್ಮೆ ಯಾವ ಪರಿ ಪ್ರೇಕ್ಷಕರಿಗೆ ತಮ್ಮ ನೃತ್ಯದ ಮೋಹಕತೆಯಿಂದ ಹುಚ್ಚು ಹಿಡಿಸಿದ್ದರೆಂದರೆ ಅದನ್ನು ಹಿಂದಿನ ಪ್ರೇಕ್ಷಕರು ಈಗಲೂ ನೆನಪಿಸಿ ಖುಷಿ ಪಡುತ್ತಾರೆ. ಆಶ್ಚರ್ಯವೆಂದರೆ ಈಗ ಕೂಡ ಜ್ಯೋತಿ ಬಳ್ಳಾರಿಯವರು ಅದೇ ಮೋಹಕತೆಯ ನೃತ್ಯವನ್ನು ಮಾಡಿ ಪ್ರೇಕ್ಷಕರ ಮನದಲ್ಲಿ ಅಭಿಮಾನದ ತರಂಗಳನ್ನು ಎಬ್ಬಿಸುತ್ತಾರೆ. ಮೂಲತಃ ಬಳ್ಳಾರಿಯವರಾದ ಜ್ಯೋತಿಯವರು ಕರ್ನಾಟಕದ ಎಲ್ಲ ವೃತ್ತಿ ರಂಗಭೂಮಿಗಳಲ್ಲಿ ತಮ್ಮ ಮೋಹಕ … Read more