ಅಂಧಕಾರ ಅಳಿಸುವ ಬೆಳಕಿನ ಅರಿವು ದೀಪಾವಳಿ: ವೈ.ಬಿ.ಕಡಕೋಳ
ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈಹಿಡಿದು ನಡೆಸೆನ್ನನು ಇರುಳು ಕತ್ತಲೆಯ ಗವಿ:ಮನೆ ದೂರ; ಕನಿಕರಿಸಿ ಕೈಹಿಡಿದು ನಡೆಸೆನ್ನನು ಹೇಳಿ ನನ್ನಡಿಯಿಡಿಸು;ಬಲುದೂರ ನೋಟವನು ಕೇಳಿದೊಡನೆಯೇ ಸಾಕು ನನಗೊಂದು ಹೆಜ್ಜೆ ಅಜ್ಞಾನದ ಕತ್ತಲೆಯನ್ನು ಕಳೆಯಲು ಜ್ಞಾನದ ದೀಪ ಅಗತ್ಯ. ದೀಪಾವಳಿ ದೀಪಗಳ ಬೆಳಕಿನ ಹಬ್ಬ. ನರಕಚತುರ್ದಶಿಯಿಂದ ಆರಂಭಿಸಿ ಮೂರು ದಿನಗಳವರೆಗೆ ಆಚರಿಸುವುದುಂಟು. ಭಾರತದ ಎಲ್ಲೆಡೆಯಲ್ಲಿಯೂ ದೀಪಾವಳಿಯನ್ನು ಆಚರಿಸುತ್ತಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಸ್ತಾಪಗೊಳ್ಳುವ ಎರಡು ಮುಖ್ಯ ಹೆಸರುಗಳು. ನರಕ ಹಾಗೂ ಬಲಿ. ನರಕನು ಭೂದೇವಿಯ … Read more