ಜಗದೊಳು ಸರ್ವವೂ ಸುಖಮಯವು: ಜಯಶ್ರೀ.ಜೆ. ಅಬ್ಬಿಗೇರಿ ಬೆಳಗಾವಿ
ಹಾಲಿನಂಥ ಬೆಳದಿಂಗಳು ಚೆಲ್ಲಿ ಹಿತ ನೀಡುವ ಚಂದಿರ ಕಾರ್ಮೋಡಗಳ ನಡುವೆ ಸಿಕ್ಕು ಮರೆಯಾಗುತ್ತಾನೆ. ಕೆಲ ಕಾಲದ ನಂತರ ಬೆಳ್ಳಿ ಮೋಡಗಳ ನಡುವೆ ಮತ್ತೆ ಬೆಳ್ಳನೆಯ ನಗು ಬೀರುತ್ತಾನೆ. ಅಮವಾಸ್ಯೆಯ ದಿನ ಸಂಪೂರ್ಣ ಮಾಯವಾದ ಚಂದಿರ ಹುಣ್ಣಿಮೆ ದಿನ ಬಾಗಿಲು ಮುಚ್ಚಿ ಮಲಗಿದ್ದರೂ ಬೆಳಕಿಂಡಿಯಿಂದ ನಾವಿದ್ದಲ್ಲಿಗೆ ಬಂದು ತಂಪು ನೀಡುತ್ತಾನೆ. ಬದುಕಿನಲ್ಲಿ ಸುಖ ದುಃಖಗಳೂ ಹೀಗೇ ಒಂದರ ಹಿಂದೆ ಒಂದು ಬರುತ್ತಲೇ ಇರುತ್ತವೆ. ಸುಖ ದುಃಖಗಳು ಸೈಕಲ್ ಗಾಲಿಯ ಚಕ್ರದ ಕಡ್ಡಿಗಳಿದ್ದಂತೆ ಒಮ್ಮೆ ಮೇಲಿದ್ದದ್ದು ಇನ್ನೊಮ್ಮೆ ಕೆಳಗೆ ಬರಲೇಬೇಕು. … Read more