ಹೆಗ್ಗಡಹಳ್ಳಿ ಮಕ್ಕಳಿಂದ “ನಿಮ್ಮ ಕಸ ನಿಮಗೆ” ಅಭಿಯಾನ.
‘ನಾಳೆಗಳು ನಮ್ಮದು” ಎಂಬ ಧ್ಯೇಯದೊಂದಿಗೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿಯ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಕಳೆದ ವಾರ ನಡೆದ ಬಣ್ಣದಮೇಳದಲ್ಲಿ ಮಕ್ಕಳು ಅಪರೂಪದ ಅಭಿಯಾನವೊಂದನ್ನು ಆರಂಭಿಸಿದರು. ಬೇರೆ ಬೇರೆ ರುಚಿಯ ಅತ್ಯಾಕರ್ಷಕ ಮಕ್ಕಳ ತಿಂಡಿಗಳನ್ನು ದೇಶದಲ್ಲಿ ಹಲವಾರು ಕಂಪೆನಿಗಳು ಉತ್ಪಾದಿಸುತ್ತವೆ. ಸಣ್ಣ ಸಣ್ಣ ಹಳ್ಳಿಗಳಲ್ಲಿಯೂ ಇಂತಹ ಉತ್ಪನ್ನಗಳು ಸಿಗುತ್ತವೆ. ಆ ಉತ್ಪನ್ನಗಳನ್ನು ಬಣ್ಣ ಬಣ್ಣದ ಪ್ಲಾಸ್ಟಿಕ್ ಕವರುಗಳಲ್ಲಿ ತುಂಬಿ ಮಕ್ಕಳನ್ನು ಆಕರ್ಷಿಸಲಾಗುತ್ತದೆ. ಹೆಗ್ಗಡಹಳ್ಳಿಯ ಮಕ್ಕಳು ಬಣ್ಣದಮೇಳದಲ್ಲಿ ಸೇರಿ ಈ ಕವರು ನಮ್ಮೂರಿಗೆ ಕಸವಾಗಿ ಹಾಗೆಯೇ ಉಳಿಯುತ್ತದೆ ಎಂಬುವುದನ್ನು … Read more