ಭವ: ಪ್ರಶಸ್ತಿ ಪಿ.
ಮಧ್ಯಾಹ್ನದಿಂದಲೂ ಮಳೆಯ ಕಣ್ಣಾಮುಚ್ಚಾಲೆಯಾಟದಲ್ಲಿ ಕಾಮನಬಿಲ್ಲಿನ ಚಿತ್ತಾರಗಳ ಬಿಡಿಸಿ ಸುಸ್ತಾದ ಸೂರ್ಯ ಮೋಡಗಳ ಮರೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾನೋ ಎಂಬಂತೆ ಕವಿದಿದ್ದ ಮಬ್ಬುಗತ್ತಲು. ಇಲ್ಲಾಡಿ ಬೇಸರಗೊಂಡ ಮೋಡಗಳು ಇನ್ನೆಲ್ಲೋ ಹಾರಿದಂತೆ ಸೂರ್ಯ ಆಗಸವನ್ನೇ ಪಟವನ್ನಾಗಿಸಿ ಬಿಡುವು ಕಳೆಯುತ್ತಿದ್ದ . ಹಳದಿ ಕೇಸರಿಗಳ ಚಿತ್ತಾರ ಬಿಡಿಸುತ್ತಿದ್ದ ರವಿ, ಹೊಗೆಯುಗುಳುತ್ತಿದ್ದ ಬಸ್ಸುಗಳು, ದಿನವಿಡೀ ಸುರಿದ ಮಳೆಯಿಂದ ತಂಪಾದ ದಾರಿಪಕ್ಕದ ಮರಗಳು, ಕೊಚ್ಚೆಯಿಂದ ಕಾಲಿಡಲೂ ಆಗದಂತಹ ರಸ್ತೆಯ ಇಕ್ಕೆಲಗಳು..ಬದುಕೂ ಹೀಗೆ ಅಲ್ಲವೇ ? ಚಂದವೆಂದುಕೊಂಡ್ರೆ ಚಂದ ಚಂದ. ಗೋಳೆಂದುಕೊಂಡ್ರೆ ಗೋಳೇ ಗೋಳು ! ಪ್ರಕೃತಿಗೆ … Read more