ಶಾಪ (ಭಾಗ-೧):ಪಾರ್ಥಸಾರಥಿ ಎನ್
ನನಗೆ ಆ ಮನೆಗೆ ಬರುವ ಅಗತ್ಯವೇನಿರಲಿಲ್ಲ. ಊರಹೊರಗಿನ ದುರ್ಗಾ ದೇವಾಲಯದಲ್ಲಿ ಕುಳಿತಿದ್ದ ನನ್ನನ್ನು ಅವನಾಗಿಯೇ ಮಾತನಾಡಿಸಿದ. ಅವನ ಹೆಸರು ಶ್ರೀನಿವಾಸ. "ಎಲ್ಲಿಂದ ಬರುತ್ತಿದ್ದೀರಿ?" ಅವನು ನನ್ನನ್ನು ಕುತೂಹಲದಿಂದ ಪ್ರಶ್ನಿಸಿದ. ಪ್ರಶ್ನೆ ಸರಿಯಾಗಿಯೆ ಇತ್ತು, ಹಾಗಾಗಿ ಉತ್ತರಿಸಿದೆ "ಉತ್ತರದ ಹರಿದ್ವಾರದಿಂದ ಹೊರಟವನು ಹಾಗೆಯೆ ಸುತ್ತುತ್ತ ಬಂದೆ, ಈಗ ನಿಮ್ಮ ಊರಿಗೆ ಬಂದಿರುವೆ". ಮತ್ತೆ ಕುತೂಹಲದಿಂದ ಪ್ರಶ್ನಿಸಿದ, "ರಾತ್ರಿ ಉಳಿಯುವ ಏರ್ಪಾಡು ಹೇಗೆ, ಎಲ್ಲಿ ಇಳಿದುಕೊಳ್ಳುವಿರಿ?" ನನಗೆ ಆ ರೀತಿಯ ಪ್ರಶ್ನೆಗಳು ಕಾಡುತ್ತಲೆ ಇರಲಿಲ್ಲ. ಇರುವೆನು ಎನ್ನುವಾಗ ರಾತ್ರಿಯೇನು, ಹಗಲೇನು, ಮುಂದಿನ … Read more