ಪಂಚ್ ಕಜ್ಜಾಯ

‘ನಿಶಾ’ಗಮನ: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಇಡೀ ರಾತ್ರಿ ನಿದ್ದೆ ಹತ್ತಿರಕ್ಕೂ ಸುಳಿಯದೇ ಒದ್ದಾಡಿ ತನಗೆ ಯಾವಾಗಲೋ ನಿದ್ದೆ ಹತ್ತಿದ್ದು ಬೆಳಿಗ್ಗೆ ಎದ್ದಾಗಲೇ ಸುಜಯ್ ಗೆ ಗೊತ್ತಾಗಿದ್ದು. ಎದ್ದವನೇ ಅತ್ತಿತ್ತ ತಡಕಾಡಿ ತನ್ನ ಸ್ಮಾರ್ಟ್ ಫೋನು ಎಲ್ಲಿಹುದು ಅಂತ ಹುಡುಕಾಡಿದ. ಎದ್ದ ಕೂಡಲೇ ಅದರ ಮುಖ ನೋಡದಿದ್ದರೆ ಸಮಾಧಾನವಿಲ್ಲ ಅವನಿಗೆ. ಅದು ಪಕ್ಕದಲ್ಲಿರದಿದ್ದರೆ ಅವನಿಗೆ ಉಸಿರಾಡುವುದೂ ಕಷ್ಟವೇ! ಹಿಂದಿನ ಕಾಲದ  ಕಥೆಗಳಲ್ಲಿ ರಾಕ್ಷಸರ ಜೀವ ಒಂದು ಗಿಣಿಯಲ್ಲಿ ಇರುತ್ತಿತ್ತಂತೆ ಹಾಗೆಯೇ ಸುಜಯ್ ನ ಜೀವ ಅವನ ಸ್ಮಾರ್ಟ್ ಫೋನ್ ನಲ್ಲೆ ಇದೆ. ಅದನ್ನೊಂದು […]

ಪಂಚ್ ಕಜ್ಜಾಯ

ಪಾತಾಳದೆಡೆಗೆ!: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ವೆಂಕಣ್ಣ ಪರಿವಾರ ಸಮೇತ ಬೆಂಗಳೂರಿನ ವಿಮಾನಾಲಯದ ಪ್ರವೇಶದ್ವಾರಕ್ಕೆ ಪಾದಸ್ಪರ್ಶ ಮಾಡಿದಾಗ ಗಂಟೆ ರಾತ್ರಿ ಹನ್ನೊಂದಾಗಿತ್ತು. ಮುಂಜಾನೆ ಎರಡು ಗಂಟೆಗೆ ಪ್ಲೇನು ಹೊರಡುವದಿತ್ತಾದರೂ ಆದಕ್ಕಿಂತ ನಾಲ್ಕು ತಾಸು ಮೊದಲೇ ಅಲ್ಲಿರಬೇಕಿತ್ತು. ಎಲ್ಲ ಔಪಚಾರಿಕತೆಗಳನ್ನು ಮುಗಿಸಬೇಕಲ್ಲ. ಅಮೆರಿಕಾಕ್ಕೆ ಹೋಗುವುದೆಂದರೆ ಅಷ್ಟು ಸುಲಭವೇ? ಬೆಂಗಳೂರಿನಿಂದ ಜರ್ಮನ್ ದೇಶಕ್ಕೆ ಮೊದಲ ಫ್ಲೈಟು. ಅಲ್ಲಿಂದ ಅಮೇರಿಕಾದ ಚಿಕ್ಯಾಗೊ ನಗರಕ್ಕೆ ಇನ್ನೊಂದು ಫ಼್ಲೈಟು. ಕೊನೆಗೆ ಇವನು ಹೋಗಬೇಕಾಗಿದ್ದ ಊರಾದ ಸ್ಯಾಂಡಿ ಗೆ ಮತ್ತೊಂದು! ಒಂದೇ ಫ್ಲೈಟಿನಲ್ಲಿ ಅಷ್ಟು ದೂರ ಕ್ರಮಿಸುವುದು ಕಷ್ಟ. ಆ ದೇಶಕ್ಕೆ […]

ಪಂಚ್ ಕಜ್ಜಾಯ

ಆಪ್ತ ರಕ್ಷಕ!: ಗುರುಪ್ರಸಾದ ಕುರ್ತಕೋಟಿ

ಅವತ್ತು  ಕೆಲಸ ಮುಗಿಸಿ ನಾನು ಮನೆಗೆ ಬಂದಾಗ ರಾತ್ರಿ ಹನ್ನೊಂದು ಗಂಟೆ. ಕೆಲಸದ ಸುಸ್ತು, ತಲೆ ಬೇರೆ ಸಣ್ಣಗೆ ನೋಯುತ್ತಿತ್ತು. ನಮ್ಮ ಅಪಾರ್ಟಮೆಂಟಿನ ಹೊರಗೆ ಕಾರು ನಿಲ್ಲಿಸಿಕೊಂಡು "ಅವನು" ಗೇಟು ತೆಗೆಯಲೆಂದು ಕಾಯುತ್ತಿದ್ದೆ…  ಅವನ ಹೆಸರು ನಂದೀಶ. ಅವನನ್ನು ಏನಂತ ಪರಿಚಯಿಸಬೇಕೆಂದು ಗೊತ್ತಾಗುತ್ತಿಲ್ಲ. ಸೆಕ್ಯುರಿಟಿ ಅನ್ನಲೇ? ಊಹುಂ, ಅವನು ಅದಕ್ಕಿಂತ ಜಾಸ್ತಿ. ವಾಚ್ ಮನ್ ಅನ್ನಲೂ  ಮನಸ್ಸಿಲ್ಲ, ಏಕೆಂದರೆ ವಾಚ್ ಮ್ಯಾನ್ ಗಳು ಬರೀ ವಾಚ್ ಮಾಡುತ್ತಾರೆ ಅಷ್ಟೆ!  ಅವನನ್ನು  ನಮ್ಮ "ಆಪ್ತ ರಕ್ಷಕ" ಅಂತ ಕರೆಯುವುದೇ […]

ಪಂಚ್ ಕಜ್ಜಾಯ

ವಿಮಾನಾಲಯ ಅಂದ್ರ ಏನ್ ಮೀನಿಂಗು?: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ…) ವೆಂಕಣ್ಣನನ್ನು ಅವನ ಕಂಪನಿಯವರು ಅಮೆರಿಕಾಕ್ಕೆ ಕಳಿಸುವ ನಿರ್ಧಾರ ಮಾಡುತ್ತಾರೆ. ಹೆಂಡತಿ, ಮಗಳನ್ನೂ ಜೊತೆಗೆ ಕರೆದೊಯ್ಯುವ ನಿರ್ಧಾರ ಮಾಡಿ ಅವರಿಗೆ ವೀಸಾ ಮಾಡಿಸಲು ಚೆನ್ನೈಗೆ ಹೋಗುತ್ತಾನೆ. ವಿಸಾ ಕೊಡುವದಕ್ಕೆ ಅಮೇರಿಕದವರು ಕಾಡಿಸುವ ರೀತಿಗೆ ಬೇಸತ್ತು,  ಆ ದೇಶಕ್ಕೆ ಹೋಗುವುದೇ ಬೇಡ ಅನ್ನುವ ನಿರ್ಧಾರ ಮಾಡುತ್ತಾನಾದರೂ ಹೆಂಡತಿ ಮಗಳಿಗೋಸ್ಕರ ನಿರ್ಧಾರ ಬದಲಿಸುತ್ತಾನೆ.  ಮುಂದೆ ಓದಿ… ) ಮೊದಲೆಲ್ಲಾ ವಿದೇಶ ಪ್ರಯಾಣ ಮಾಡುವವರ ದೊಡ್ಡದೊಂದು ಫೋಟೊ ಪೇಪರಿನಲ್ಲಿ ಹಾಕಿಸಿ, ಅವರಿಗೆ ಬಂಧು ಮಿತ್ರರು ಶುಭ ಕೋರುತ್ತಿದ್ದರು. ಅದು ಯಾಕೆ ಹಾಗೆ […]

ಪಂಚ್ ಕಜ್ಜಾಯ

ರೆಡಿ ಸ್ಟೆಡಿ ಪೋ!: ಗುರುಪ್ರಸಾದ ಕುರ್ತಕೋಟಿ

ಅವತ್ತಿನ ದಿನದಲ್ಲೇನು ಹೇಳಿಕೊಳ್ಳುವಂತಹ ವಿಶೇಷತೆಯಿರಲಿಲ್ಲ. ಪ್ರತಿದಿನದಂತೆ ಅವತ್ತೂ ಬೆಳಗಾಗಿತ್ತು, ವೆಂಕಣ್ಣ  ಎಂದಿನಂತೆ ಬಲ ಮಗ್ಗಲಲ್ಲೇ ಎದ್ದಿದ್ದ! ಅವನ ಹೆಂಡತಿ ಎಂದಿನಂತೆ ಅವತ್ತು ಕೂಡ ಇನ್ನೂ ಎದ್ದಿರಲಿಲ್ಲವಾದ್ದರಿಂದ, ಹಲವು ಬಗೆಯ ರಾಸಾಯನಿಕಗಳ ಆಗರವೆಂದು ಗೊತ್ತಿದ್ದೂ ಕೂಡ ಚಹಾ ಎನ್ನುವ ಕಷಾಯದ ವಿಷವನ್ನು ತನ್ನ ಕೈಯಾರೆ ಕುದಿಸಿಕೊಂಡ. ಎಷ್ಟಂದ್ರೂ ನಮಗೆ ಬೇಕಾದ ವಿಷವನ್ನು ನಾವೇ ಆರಿಸಿಕೊಳ್ಳಬೇಕೆಂದು ಹಿರಿಯರು ಹೇಳಿಬಿಟ್ಟಿದ್ದಾರಲ್ಲ! ಯಾಂತ್ರಿಕವಾಗಿ ಇತರ ಪ್ರಾತಃ ಕರ್ಮಗಳಿಗೂ ಮುಕ್ತಿಯನ್ನು ಕರುಣಿಸಿದ್ದ. ಹಿಂದಿನ ದಿನ ನೋಡಿದ್ದ ನಾಟಕದ ಪಾತ್ರವೊಂದು ಅವನ ತಲೆಯಲ್ಲಿ ಇನ್ನೂ ಗುಂಯ್ […]

ಪಂಚ್ ಕಜ್ಜಾಯ

ವಿಸ್ಮಯದ ಮಾಯಾಲೋಕ!: ಗುರುಪ್ರಸಾದ ಕುರ್ತಕೋಟಿ

ಕಾರ್ಪೊರೇಟ್ ಜಗತ್ತಿನಲ್ಲಿ, ವರ್ಷಕ್ಕೊಮ್ಮೆಯೋ, ಎರಡು ಸರ್ತಿಯೋ ಟೀಮ್ ಔಟಿಂಗ್ (team outing) ಅಂತ ಮಾಡುತ್ತಾರೆ. ಒಂದು ದಿನದ ಮಟ್ಟಿಗೆ ಕಚೇರಿಯ ಸಹೋದ್ಯೋಗಿಗಳೆಲ್ಲರೂ ಬೆಂಗಳೂರಿನಿಂದ ಸ್ವಲ್ಪ ಹೊರ ವಲಯದಲ್ಲಿರುವ ರಿಸಾರ್ಟ ಒಂದರಲ್ಲಿ ಕಾಲ ಕಳೆದು ಬರುತ್ತಾರೆ. ಅಲ್ಲಿ ಆಟವಾಡಿಸುತ್ತಾರೆ, ಅಬ್ಬರದ ಸಂಗೀತವಿರುತ್ತೆ, ನೃತ್ಯವಿರುತ್ತೆ. ತಮ್ಮ ಒತ್ತಡದ ಕೆಲಸದ ಮಧ್ಯೆ ದಣಿದ ಜೀವಗಳಿಗೆ ಒಂದಿಷ್ಟು ವಿರಾಮ ಕೊಡಿಸುವ ಪ್ರಯತ್ನ ಅದು. ಅದರ ಘೋಷಣೆಯಾಗುತ್ತಲೇ ಎಲ್ಲರಿಗೂ ಖುಷಿ, ಇನ್ನೂ ಕೆಲವು ಆತ್ಮಗಳಂತೂ ಸಂತಸದಿಂದ ಅರಳುತ್ತವೆ. ಆ ಆತ್ಮಗಳ ನೆಲೆಯಾಗಿರುವ ದೇಹಗಳಿಗೊಂದು, ವಿಶಿಷ್ಠವಾದ […]

ಪಂಚ್ ಕಜ್ಜಾಯ

ಬೆಂಬಿಡದ ಭೂತ: ಗುರುಪ್ರಸಾದ ಕುರ್ತಕೋಟಿ

(ಅತೀಂದ್ರಿಯ ಅನುಭವದ ಕಥೆಗಳು – ಭಾಗ ೬) ಈ ಕಥೆ ನನ್ನ ಸಹೋದ್ಯೋಗಿ ರಮೇಶ ನಾಯಕ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದದ್ದು — ನಾನು ಹುಟ್ಟಿ ಬೆಳೆದು ದೊಡ್ಡವನಾಗಿದ್ದು ಭಟ್ಕಳದಲ್ಲಿ. ನಮ್ಮ ಮನೆಯಿಂದ ಎಡವಿ ಬಿದ್ದರೆ ಸಮುದ್ರ! ಅಂದರೆ ಅದು ಅಷ್ಟು ಹತ್ತಿರದಲ್ಲಿದೆ ಅಂತ ಅರ್ಥ. ಅದು ಬೇರೆಯವರಿಗೆ ಕೇಳೋಕೆ ಚಂದ. ಪರ ಊರಿನಿಂದ ಒಂದೆರಡು ದಿನಕ್ಕೆ ಅಂತ ನಮ್ಮೂರಿಗೆ ಬಂದವರಿಗೆ ಸಮುದ್ರಕ್ಕೆ ಹೋಗಿ  ಸ್ನಾನ ಮಾಡಲು ಅಡ್ಡಿ ಇಲ್ಲ. ಅಲ್ಲೇ ಇರೋವ್ರಿಗೆ ಕಷ್ಟ. ಅದರ […]

ಪಂಚ್ ಕಜ್ಜಾಯ

ಪವಾಡ?: ಗುರುಪ್ರಸಾದ ಕುರ್ತಕೋಟಿ

(ಅತೀಂದ್ರಿಯ ಅನುಭವದ ಕಥೆಗಳು – ಭಾಗ ೫): ಈ ಸಲ ಒಂದು ಚಿಕ್ಕ ಘಟನೆಯಾ ಬಗ್ಗೆ ಹೇಳುತ್ತೇನೆ. ಇದು ನನ್ನ ಅಜ್ಜ (ಅಮ್ಮನ ತಂದೆ) ಅವರಿಗಾದ ಅನುಭವ. ಸುಮಾರು ಐದು ದಶಕಗಳ ಹಿಂದೆ ನಡೆದದ್ದು. ಆಗ ನನ್ನಜ್ಜ ಮಧ್ಯ ವಯಸ್ಕ. ಅವರ ಹೆಂಡತಿ, ಅಂದರೆ ನನ್ನ ಅಜ್ಜಿ, ರಾಘವೇಂದ್ರ ಸ್ವಾಮಿಗಳ ಭಕ್ತಳು. ಅಂತಿಂಥ ಭಕ್ತಳಲ್ಲ, ಘನಘೋರ ಭಕ್ತಳು! ರಾಯರ ಬಗ್ಗೆ ಅವಳಿಗೆ ಸಿಕ್ಕಾಪಟ್ಟೆ ನಂಬಿಕೆ. ಅದೇ ರೀತಿಯಾಗಿ ಅವರ ಸೇವೆಯನ್ನೂ ಚಾಚು ತಪ್ಪದೇ ಮಾಡುತ್ತಿದ್ದಳು. ಅದು ಪೂಜೆ-ಪುನಸ್ಕಾರವೋ, […]

ಪಂಚ್ ಕಜ್ಜಾಯ

ಭ್ರಮೆ? (ಅತೀಂದ್ರಿಯ ಅನುಭವದ ಕಥೆಗಳು – ಭಾಗ ೪): ಗುರುಪ್ರಸಾದ ಕುರ್ತಕೋಟಿ

(ಈ ಕಥೆ ನನ್ನ ಗೆಳೆಯ ವಿಟ್ಠಲ ಕುಲಕರ್ಣಿಗಾದ ಅನುಭವದ ಮೇಲೆ ಹೆಣೆದಿದ್ದು. ನಂಬುವಿರೋ ಇಲ್ವೊ ಗೊತ್ತಿಲ್ಲ… ಇದನ್ನು ಅವನ ಬಾಯಿಂದ ಕೇಳುತ್ತಿದ್ದಾಗ ಹಾಗೂ ಈ ಕಥೆಯನ್ನ ರಾತ್ರಿ ಬರೆಯುತ್ತಿರುವಾಗ ನನ್ನ ಮೈಯಲ್ಲಿ ಭಯದ ಕಂಪನಗಳೆದ್ದಿದ್ದಂತೂ ನಿಜ! ಅಂದ ಹಾಗೆ, ಕಥೆಯಲ್ಲಿ ಬಳಸಿರುವ  ಹೆಸರು ನಿಜವಾದ ವ್ಯಕ್ತಿಯದಲ್ಲ.) —  ಸುಮಾರು ಹದಿನೈದು ವರ್ಷಗಳ ಹಿಂದೆ, ನಾನಿನ್ನೂ ಹುಬ್ಬಳ್ಳಿಯಲ್ಲೇ ಕೆಲಸ ಮಾಡುತ್ತಿದ್ದೆ. ಸ್ಟುಡಿಯೋ ಒಂದರಲ್ಲಿ ಗ್ರಾಫಿಕ್ ಡಿಸೈನರ್ ಕೆಲಸ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರು . ಆದರೂ ಒಂದೊಂದು ಸಲ […]

ಪಂಚ್ ಕಜ್ಜಾಯ

ದೀಪದ ದೆವ್ವ (ದೆವ್ವದ ಕಥೆಗಳು – ಭಾಗ ೩):ಗುರುಪ್ರಸಾದ್ ಕುರ್ತಕೋಟಿ

(ಇದು ಸಂಗೀತಾ ಕೇಶವ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದ ಕತೆ) ನಾನಾಗ ಪೀಯುಸಿ ಮೊದಲ ವರ್ಷದಲ್ಲಿ ಓದುತ್ತಿದ್ದೆ. ನಾವಿದ್ದದ್ದು ನನ್ನ ಊರಾದ ಚಿಕ್ಕೋಡಿಯಲ್ಲಿ. ಅದು ಬೆಳಗಾವಿ ಜಿಲ್ಲೆಯಲ್ಲಿದೆ. ಹವಾಮಾನದ ವಿಷಯದಲ್ಲಿ ಅದಕ್ಕೂ ಬೆಳಗಾವಿಗೂ ಏನೂ ವ್ಯತ್ಯಾಸವಿರಲಿಲ್ಲ. ಅದು ಆಗಿನ ಸಂಗತಿ. ಈಗ ಬಿಡಿ ಬೆಳಗಾವಿಯ ಹವಾಮಾನವೂ ಪ್ರಕೃತಿ ವೈಪರಿತ್ಯಕ್ಕೆ ಬಲಿಯಾಗಿ ಹದಗೆಟ್ಟಿದೆ. ಆಗೆಲ್ಲಾ ಬೆಳಗಾವಿಯಲ್ಲಿ ಮಳೆ ಯಾವ ಪರಿ ಸುರಿಯುತ್ತಿತ್ತೆಂದರೆ… ಸುರಿಯುತ್ತಿತ್ತು ಅಷ್ಟೆ! ಒಮ್ಮೆ ಶುರುವಾಯಿತೆಂದರೆ ನಿಲ್ಲುವ ಮಾತೆ ಇರಲಿಲ್ಲ. ಚಿಕ್ಕೋಡಿಯ ಪರಿಸ್ಥಿತಿಯೂ ಹೆಚ್ಚು ಕಡಿಮೆ […]

ಕಥಾಲೋಕ ಪಂಚ್ ಕಜ್ಜಾಯ

ಇರುಳಲಿ ಕಂಡವಳು! (ದೆವ್ವದ ಕಥೆಗಳು – ಭಾಗ ೨): ಗುರುಪ್ರಸಾದ ಕುರ್ತಕೋಟಿ

ಬಿದರಕಾನ ಅನ್ನುವ ಮಲೆನಾಡಿನ ಸುಂದರ ಹಳ್ಳಿಗೆ, ನನ್ನ ಮಾವನ ಊರಾದ ಕಿಬ್ಬಳ್ಳಿಯಿಂದ ಒಂದು ಗಂಟೆಯ ದಾರಿ. ಕಿಲೋಮೀಟರುಗಳ ಲೆಕ್ಕದಲ್ಲಿ ಬರಿ ಹದಿನೈದು. ಆದರೆ ಬಳುಕುತ್ತ ಹರಿಯುವ ಮೋಹಕ ನದಿ ಅಘನಾಷಿನಿಯ ಪಕ್ಕಕ್ಕೆ ಚಾಚಿಕೊಂಡ ಏರಿಳಿತದ, ತಿರುವುಗಳಿಂದಲೇ ಭೂಷಿತವಾದ ಘಾಟ್ ರಸ್ತೆಯನ್ನು ಕ್ರಮಿಸುವುದಕ್ಕೆ ಒಂದು ಗಂಟೆ ಬೇಕು. ಆ ರಸ್ತೆಯಲ್ಲಿ ಕಾರು ಓಡಿಸುವುದೇ ಒಂದು ಖುಷಿ, ಎಷ್ಟೋ ಸಲ ಆ ಖುಷಿ ಓಡಿಸುವವರಿಗೆ ಮಾತ್ರ! ಯಾಕೆಂದರೆ ಹಿಂದೆ ಕುಳಿತವರು ರೋಡಿನ ತಿರುವಿಂಗ್ಸ್ ನಲ್ಲಿ ಹೊಟ್ಟೆ ತೊಳಸಿಕೊಳ್ಳುವವರಾಗಿದ್ದರೆ, 'ಗೊಳ್' ಅಂತ […]

ಪಂಚ್ ಕಜ್ಜಾಯ

ದೆವ್ವದ ಮನೆ: ಗುರುಪ್ರಸಾದ ಕುರ್ತಕೋಟಿ

(ಇದು ನನ್ನ ತಂದೆ ಶಶಿಕಾಂತ ಕುರ್ತಕೋಟಿ ಅವರಿಗೆ ಆದ ಒಂದು ಅನುಭವ, ಅವರೇ ಹೇಳಿದ್ದು. ಮೂಲ ಕತೆಗೆ ಧಕ್ಕೆ ಬರದಂತೆ, ಓದಿಸಿಕೊಂಡು ಹೋಗಲಿ ಅಂತ ಸಲ್ಪ ಮಸಾಲೆ ಬೆರೆಸಿದ್ದೇನೆ. ಅದು ಅಜೀರ್ಣಕ್ಕೆ ಕಾರಣವಾಗಲಿಕ್ಕಿಲ್ಲವೆಂಬ ನಂಬಿಕೆ ನನ್ನದು!) ಕಣ್ಣು ತೆರೆದಾಗ ನಾನು ಆಸ್ಪತ್ರೆಯಲ್ಲಿದ್ದೆ. ಕೈಗೆ ಸಲಾಯಿನ್ ಹಚ್ಚಿದ್ದರು. ನನ್ನ ಹೃದಯದ ಬಡಿತ ನನಗೆ ಸ್ಪಷ್ಟವಾಗಿ ಕೇಳುತ್ತಿತ್ತು. ಕಣ್ಣಿಗೆ ಕತ್ತಲೆ ಬಂದಿದ್ದಷ್ಟೆ ನನಗೆ ನೆನಪು. ಆಮೇಲೇನಾಯ್ತು? ಯಾರು ನನ್ನನ್ನಿಲ್ಲಿ ತಂದದ್ದು ಒಂದು ನನಗೆ ಅರ್ಥವಾಗುತ್ತಿಲ್ಲ.  "ಸರ್ ಕಣ್ಣು ತಗದ್ರು!" ಅಂತ […]

ಪಂಚ್ ಕಜ್ಜಾಯ ಲಲಿತ ಪ್ರಬಂಧ

ಹೀಗೊಂದು ಗೆಳೆಯರ ಬಳಗ! (ಅಳಿದುಳಿದ ಭಾಗ?!): ಗುರುಪ್ರಸಾದ ಕುರ್ತಕೋಟಿ

(ನಮ್ಮ ಗೆಳೆಯರ ಬಳಗ ಹಾಗೂ ಅಗಿನ ನನ್ನ ಅನುಭವಗಳ ಬಗ್ಗೆ  ಹಿಂದೊಮ್ಮೆ ಬರೆದಿದ್ದೆ. ಅದಕ್ಕೆ ಸಿಕ್ಕ ಅಭೂತಪೂರ್ವ ಪ್ರತಿಕ್ರಿಯೆಯಿಂದ ಪುಳಕಿತನಾದೆ. ಅದನ್ನು ಓದಿದ ಕೆಲವು ಗೆಳೆಯರ ಆಗ್ರಹದ ಮೇರೆಗೆ, ಆ ಸಮಯದಲ್ಲಿ ನಮ್ಮ ಜೊತೆಗಿದ್ದ ಇನ್ನೂ ಕೆಲವು ವ್ಯಕ್ತಿಗಳು ಹಾಗೂ ಕೆಲವು ಮೋಜಿನ ಸಂಗತಿಗಳ ಬಗ್ಗೆ ಈಗ ಬರೆದಿದ್ದೇನೆ. ಹಿಂದಿನ ಲೇಖನ ಓದಿಯೇ ಇದನ್ನು ಓದಬೇಕೆಂದೇನು ಇಲ್ಲ. ಆದರೂ ಓದಿದರೆ ನಾನು ಬೇಡ ಅನ್ನುವುದಿಲ್ಲ! 🙂 ಇಲ್ಲಿದೆ ಅದರ ಲಿಂಕ್  ***** ನಮ್ಮ ಬಳಗದ ಇನ್ನೊಂದು ಅವಿಭಾಜ್ಯ […]

ಪಂಚ್ ಕಜ್ಜಾಯ ಲಲಿತ ಪ್ರಬಂಧ

ಹೀಗೊಂದು ಗೆಳೆಯರ ಬಳಗ!: ಗುರುಪ್ರಸಾದ ಕುರ್ತಕೋಟಿ

ಮುಂಜ ಮುಂಜಾನೆ ಒಳ್ಳೆ ಸಕ್ಕರಿ ನಿದ್ದಿಯೊಳಗ ಕನಸ ಕಾಣ್ಲಿಕತ್ತಾಗ  ನನ್ನ ಫೋನು ಒದರಲಿಕ್ಕೆ ಶುರು ಹಚ್ಚಿಗೊಂಡು ನನಗ ಒದ್ದು ಎಬ್ಬಿಸ್ತು. ಹೊತ್ತಿಲ್ದ ಹೊತ್ತ್ನ್ಯಗ ಫೋನ್ ಮಾಡಾಂವ್ ಅಂದ್ರ ಪ್ರಶಾಂತ ನ್ನ ಬಿಟ್ಟು ಬ್ಯಾರೆ ಯಾರೂ ಇರ್ಲಿಕ್ಕೆ ಸಾಧ್ಯ ಇಲ್ಲ ಅಂತ ಕನಸಿನ್ಯಾಗನ ಡಿಸೈಡ್ ಮಾಡಿ ಎದ್ದು ನೋಡಿದ್ರ, ಅದು ಅವಂದ ಫೋನು!  "ಹೇಳಪಾ…" ಅಂದದ್ದಕ್ಕ, "ಯಾಕ್ರೀ ಸರ್ರ್ ಇನ್ನೂ ಮಲಗಿದ್ರೇನು" ಅಂತ ಹೇಳಿ ನಿದ್ದಿ ಕೆಟ್ಟಿದ್ದಕ್ಕ ಸಿಟ್ಟಿನ್ಯಾಗ ಬುಸಗುಡಕೋತ ಎದ್ದಂವ್ ಗ ಮತ್ತೊಂದಿಷ್ಟು ಸಿಟ್ಟು ಬರ್ಸಿದಾ. "ಇಲ್ಲಪಾ… […]

ಕಥಾಲೋಕ ಪಂಚ್ ಕಜ್ಜಾಯ

ನಾಯಿ ನಕ್ಕಿದ್ದು ಯಾಕೆ?!: ಗುರುಪ್ರಸಾದ ಕುರ್ತಕೋಟಿ

ಹೊಟ್ಟೆ ಹಸಿವೆಯಿಂದ ಗುರುಗುಡುತ್ತಿತ್ತು. ಯಾಕಿವತ್ತು ಇನ್ನೂ ತಟ್ಟೆಯ ಸಪ್ಪಳವೇ ಇಲ್ಲಾ? ನಾಲಿಗೆ ಹೊರ ಚಾಚಿ, ಮುಚ್ಚಿರುವ ತಲಬಾಗಿಲನ್ನೊಮ್ಮೆ ದಿಟ್ಟಿಸಿ ನೋಡುತ್ತಾ, ತಲೆಯ ಮೇಲೆ ಸುಡುತ್ತಿರುವ ಸೂರ್ಯನ ಶಾಖವನ್ನು ತಾಳಲಾರದೇ ತನ್ನ ಗೂಡಿನೆಡೆಗೆ ಕುಂಯ್ ಗುಡುತ್ತಾ ರಾಜಾ ವಾಪಸ್ಸಾದ. ಗೂಡಿನಲ್ಲಿ ತಾಪ ಇನ್ನೂ ಜಾಸ್ತಿಯಿತ್ತು. ತಾನು ಆ ಮನೆಯನ್ನು ಸೇರಿದ್ದು ಚಿಕ್ಕ ಕುನ್ನಿಯಾಗಿದ್ದಾಗ. ತನ್ನ ಅಮ್ಮ ಟ್ರಕ್ಕಿನಡಿಯಲ್ಲಿ ಸಿಕ್ಕಿ ಸತ್ತು ತಾನು ತಬ್ಬಲಿಯಾದಾಗ, ಮುದ್ದಾಗಿದ್ದೆನೆಂದೋ ಅಥವಾ ಮುಂದೆ ಮನೆ ಕಾಯುವೆನೆಂದೋ ತನ್ನನ್ನು ಮನೆಗೆ ತಂದು ಸಾಕಿದ್ದು ಈ ಮನೆಯ […]

ಪಂಚ್ ಕಜ್ಜಾಯ ಲಲಿತ ಪ್ರಬಂಧ

ಕನ್ನಡೋದ್ಧಾರ!: ಗುರುಪ್ರಸಾದ್ ಕುರ್ತಕೋಟಿ

ಮದುವೆಯಾಗಿ ಬೆಂಗಳೂರಿಗೆ ಬಂದಮೇಲೆ ಇನ್ನೂ ಒಂದು ಸಲಾನೂ ಸಿನಿಮಾಗೇ ಕರೆದುಕೊಂಡು ಹೋಗಿಲ್ಲಾ ಅಂತ ಅವತ್ಯಾಕೋ ಅನಿರೀಕ್ಷಿತವಾಗಿ ನೆನಪಾಗಿ ಜಾನು ರಂಪ ಮಾಡಿಕೊಂಡಿದ್ದಳು. ಗಪ್ಪಣ್ಣನಿಗೆ ಅವಳ್ಯಾಕೋ ಸಿಕ್ಕಾಪಟ್ಟೆ ತವರನ್ನು ಮಿಸ್ ಮಾಡಿಕೊಳ್ಳುತ್ತಿರಬಹುದೇ ಎಂದು ಅನಿಸಿತಾದ್ದರಿಂದ, ತಡ ಮಾಡದೇ … "ಅದಕ್ಕೇನಂತ ಇವತ್ತ ಹೋಗೋಣ ನಡಿ" ಅಂದು ಜಾನುನಲ್ಲಿ ಜಾನ್ ತಂದ! ಕೂಡಲೇ ಜಾನು ಕಾರ್ಯಪ್ರವೃತ್ತಳಾಗಿ, ಪಲ್ಲಂಗದ ಕೆಳಗಿನ ಮೂಲೆಯಲ್ಲಿ ಜೋಪಾನವಾಗಿ ಎಸೆದಿದ್ದ ಅವತ್ತಿನ ಪೇಪರ್ ಅನ್ನು ಎತ್ತಿ ತಂದು ಅದರಲ್ಲಿನ ಸಾಪ್ತಾಹಿಕ ಪುರವಣಿಯಲ್ಲಿದ್ದ ಅಸಂಖ್ಯಾತ ಸಿನಿಮಾಗಳ ಯಾದಿಯಲ್ಲಿ ಒಂದಕ್ಕೆ […]

ಪಂಚ್ ಕಜ್ಜಾಯ

ನಾನು ಬಡವ?:ಗುರುಪ್ರಸಾದ್ ಕುರ್ತಕೋಟಿ

ಮೂರ್ತಿ ಯಾವುದೋ ಒಂದು ಪುಸ್ತಕದಲ್ಲಿ ಗಹನವಾಗಿ ಮುಳುಗಿದ್ದವರು ನಿಟ್ಟುಸಿರು ಬಿಟ್ಟು ಹೀಗೆ ಅರುಹಿದರು… ಮೂರ್ತಿ: "ಗುರು, ಹಿಂದಿನ ಕಾಲದಲ್ಲಿ ನಮ್ಮ ದೇಶದಲ್ಲಿ ಎಂಥಾ ಸುಭಿಕ್ಷೆ ಇತ್ತಂತೆರೀ… ನಿಮಗೊತ್ತಾ? ಆಗ ವಿಜಯನಗರ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಬಂಗಾರಗಳನ್ನ ತರಕಾರಿಗಳ ತರ ಸಂತೆಲಿ ಮಾರುತ್ತಿದ್ದರಂತೆ!" ಗುರು: "ಹೌದು, ಆದ್ರೆ ಆಗಿನ ಕಾಲಕ್ಕೆ ಈಗಿನ ಕಾಲಕ್ಕೆ ಅಷ್ಟೆಲ್ಲಾ ಡಿಫರನ್ಸು ಇಲ್ಲಾ ಬಿಡ್ರೀ." ಮೂ: "ಅಧೆಂಗ್ರೀಪಾ?" ಗು: "ಈಗ ತರಕಾರಿಗಳನ್ನ ಮುತ್ತು, ರತ್ನ, ಬಂಗಾರಗಳ ರೇಟಿನಲ್ಲಿ ಮಾರ್ತಾರೆ ಅಷ್ಟೆ!!" ಮೂ: "ಹ್ಹ ಹ್ಹ […]

ಪಂಚ್ ಕಜ್ಜಾಯ

ಅವಳು!: ಗುರುಪ್ರಸಾದ ಕುರ್ತಕೋಟಿ

  ಇವತ್ತಿಗೆ ಸರಿಯಾಗಿ ಆರು ವರುಷಗಳ ಹಿಂದೆ ನಾನವಳ ಭೇಟಿಯಾಗಿದ್ದೆ. ಮೊದಲ ನೋಟದಲ್ಲೇ ಅವಳಲ್ಲಿ ಅನುರಕ್ತನಾದೆ. ಅವಳಲ್ಲಿ ತುಂಬಾ ಇಷ್ಟವಾಗಿದ್ದು ಅವಳ ಸ್ನಿಗ್ಧ ಸೌಂದರ್ಯ ಹಾಗು ಅವಳ ಬಣ್ಣ! ಅವತ್ತೇ ಅವಳನ್ನು ಮನೆಗೆ ಕರೆದುಕೊಂಡು ಬಂದಿದ್ದೆ. ಅಪ್ಪ ಎಂದಿನಂತೆ ಬೈದಿದ್ದ. ನಾನವಳನ್ನು ಕರೆದುಕೊಂಡು ಬಂದಿದ್ದು ಅವನಿಗೆ ಸುತಾರಾಮ್ ಇಷ್ಟವಿರಲಿಲ್ಲ. ಆತ ನನ್ನ ಮೇಲೆ ಕೋಪಗೊಂಡಿದ್ದು ಸ್ಪಷ್ಟವಾಗಿತ್ತು. ಆದರೆ ಮುಂದೆ ಎಲ್ಲಾ ಸರಿ ಹೋಗುವುದೆಂಬ ಭರವಸೆ ನನಗೆ. ಅವತ್ತಿಗೆ ಅವನಿಗೆ ಎದುರು ಮಾತನಾಡದೇ ಸುಮ್ಮನಿದ್ದೆ. ಆದರೆ ನನಗಿದ್ದ ದೊಡ್ಡ […]