ಮದರ್ಸ್ ಡೇ: ಪಾರ್ಥಸಾರಥಿ ಎನ್
ಸರೋಜಮ್ಮನವರಿಗೆ ಏಳುವಾಗಲೆ ಎಂತದೋ ಇರುಸುಮುರುಸು. ಎದ್ದು ಮುಖ ತೊಳೆದು ಕಾಫಿ ಕುಡಿಯಬೇಕಾದವರು, ಎದ್ದು ಹತ್ತು ನಿಮಿಶವಾದರು ಹಾಸಿಗೆ ಮೇಲೆ ಕುಳಿತಿದ್ದರು. ನಂತರ ಎದ್ದು ಮುಖತೊಳೆದು ಅಡುಗೆ ಮನೆಗೆ ಹೋಗಿ ಸೊಸೆ ಮಾಡಿಕೊಟ್ಟ ಕಾಫಿ ಪಡೆದು, ನಡುಮನೆಗೆ ಬಂದು ಸೋಪಾ ಮೇಲೆ ಕುಳಿತರು. ಕಾಫಿ ಕುಡಿಯುತ್ತಿದ್ದರೂ, ಅದೆಂತದೋ ಹಿಂಸೆ, ಬಲಗಡೆ ಪಕ್ಕೆಯಲ್ಲಿ ಸಣ್ಣ ನೋವು. ಅಲ್ಲಿಯೆ ಮತ್ತೊಂದು ಸೋಪದಲ್ಲಿ ಅಂದಿನ ಪತ್ರಿಕೆ ಹಿಡಿದು ಅದರಲ್ಲೆ ಮುಳುಗಿದ್ದ ಮಗ ಗೋಕುಲ್ ಕಡೆ ನೋಡಿದರು. ಅವನ ಮುಖದಲ್ಲಿ ಗಂಭೀರತೆ. ಮಗನ ಕೈಲಿ … Read more