ಬೆಂಗಳೂರಿನ ದಾಖಲೆ ಮಳೆ: ಪ್ರಶಸ್ತಿ ಅಂಕಣ
ಟ್ರಾಫಿಕ್ ಜಾಂಗೂ ಬೆಂಗ್ಳೂರಿಗೂ ಖಾಸಾ ಖಾಸಾ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯನೇ..ಆದರೆ ಬೆಂಗ್ಳೂರಲ್ಲಿ ದಾಖಲೆ ಮಳೆಯೆಂಬ ದಾಖಲೆಯಲ್ಲಿ ದಾಖಲಾಗಿದ್ದು, ಮುಕ್ಕಾಲು ಘಂಟೆಯ ಪಯಣ ಮಳೆರಾಯನಿಂದ ಮೂರು ಘಂಟೆಯಷ್ಟಾಗಿದ್ದು ಮಾತ್ರ ಮರೆಯಲಾರದ ನೆನಪುಗಳು.. ಮೊನ್ನೆ ಎಂದಿನಂತೆ ಶುಭ ಶುಕ್ರವಾರ. ಅಕ್ಷರಶ: ಸೆಕೆಯಲ್ಲಿ ಬೇಯ್ತಿರೋ ಬೆಂಗಳೂರಿಂದ ದೂರ ನನ್ನ ಹುಟ್ಟೂರೆಡೆಗೆ ತೆರಳೋ ಖುಷಿಯಿಂದ ಸಹಜವಾಗೇ ಶುಕ್ರವಾರ ಶುಭದ್ದೆನಿಸಿತ್ತು. ಆದರೆ ಸಂಜೆ ಆರು ಘಂಟೆಯಾಗುತ್ತಿದ್ದಂತೆಯೇ ಎಲ್ಲಿಂದಲೋ ಕವಿದ ಮೋಡಗಳು ಅದ್ಯಾವ ಮಾಯೆಯಲ್ಲಿ ಮಳೆ ಸುರಿಸತೊಡಗಿದವೋ ತಿಳಿಯಲೇ ಇಲ್ಲ…ಯಾರೋ ಬಾಗಿಲು … Read more