ವೈಭವದ ಕೂಟ-ಪ್ಯಾಶನ್ನಿನ ಊಟ ? :ಪಾ.ಮು.ಸುಬ್ರಮಣ್ಯ
ಹಾಗೇ ಸುಮ್ಮನೇ ಏನಾದರೊಂದು ಬರೆಯಬೇಕೆಂದು ಮನಸ್ಸು ತವಕಪಡುತ್ತಿತ್ತು. ವಿಷಯಕ್ಕಾಗಿ ಮನದ ಗಾಳಿಪಟವನ್ನು ಹರಿಯಬಿಟ್ಟೆ. ಪಟ ನೇರವಾಗಿ ಒಂದು ಅದ್ದೂರಿ ಕಾರ್ಯಕ್ರಮವೊಂದರ ನಡುವೆ ನಿಂತಿತು. ಸುತ್ತಲೂ ಕಣ್ಣಾಡಿಸಿದೆ. ವೈಭವಪೂರ್ಣವಾದ ಕಾರ್ಯಕ್ರಮ. ಯಾರೋ ಹಣದಧಿಪತಿಗಳೇ ಈ ಕಾರ್ಯಕ್ರಮದ ಆಯೋಜಕರೆಂದು ಮೇಲ್ನೋಟಕ್ಕೆ ಅನ್ನಿಸಿತು. ಯಾರಾದರೆ ನನಗೇನು? ನನಗೆ ಬೇಕಾಗಿರುವ ವಿಷಯ ಸಿಕ್ಕರೆ ಸಾಕು, ಎಂದಂದುಕೊಂಡು ಹುಡುಕತೊಡಗಿದೆ. ಪ್ರತಿಯೊಬ್ಬರೂ ತಮ್ಮದೇ ಆದ ವೈಯಕ್ತಿಕ ವಿಚಾರಗಳಲ್ಲಿ ತೊಡಗಿದ್ದಾರೆನ್ನಿಸಿತು. ನನ್ನನ್ನಾರು ಗಮನಿಸಲಿಲ್ಲ. ಮನದ ಪಟ ಅಲೆದಾಟಕ್ಕಿಳಿದಾಗ ಕೇಳಿಯೇಬಿಟ್ಟಿ. ’ಇಲ್ಲಿ ನನಗೇನು ಕೆಲಸ? ನನ್ನನ್ನು ಇಲ್ಲಿಗೇಕೆ ಕರೆತಂದೆ? … Read more