ಗಿರೀಶ ಕಾರ್ನಾಡರ ಯಯಾತಿ ನಾಟಕದಲ್ಲಿ ಪಾತ್ರಗಳ ಭಾವಗಳೇರಿಳಿತಗಳು: ದಿವ್ಯ ಆಂಜನಪ್ಪ
'ಯಯಾತಿ'- ನಾಲ್ಕಂಕದ ಸಣ್ಣ ನಾಟಕವಾಗಿ ಕಾಣುವ ನಮಗೆ ಪಾತ್ರಗಳಾರರಲ್ಲಿ ಮನುಷ್ಯನ ವಿರಾಟ ದರ್ಶನವನ್ನು ನೀಡುತ್ತದೆ. ನಾಟಕದ ಪ್ರಾರಂಭದಲ್ಲಿ ನಟಿಯೊಡನೆ ಸೂತ್ರಧಾರ ಬರುತ್ತಾರೆ. ಪ್ರೇಕ್ಷಕರನ್ನುದ್ದೇಶಿಸಿ ಸೂತ್ರಧಾರ ನಾಟಕದ ಕುರಿತು ಒಂದು ಕುತೂಹಲಭರಿತ ಮುನ್ನುಡಿಯನ್ನು ನೀಡುತ್ತಾನೆ. ಅಂತ್ಯದಲ್ಲಿ ಅವನಾಡುವ ಮಾತು ಪ್ರಸ್ತುತ ಮತ್ತು ಸರ್ವಕಾಲಿಕ ಸತ್ಯವಾಗಿ ನಿಲ್ಲುತ್ತದೆ. " ಒಮ್ಮೊಮ್ಮೆ ದಾರಿಗುಂಟ ಹೋಗುವಾಗ ನಮ್ಮ ದಾರಿ ಒಡೆದು ಎರಡಾಗುವುದಿಲ್ಲವೇ? ನಾವು ಒಂದನ್ನು ಮಾತ್ರ ಆರಿಸಬಹುದು. ಅದರೊಡನೆ ತತ್ಪೂರ್ತ ನಮ್ಮ ಗುರಿಯೂ ಗೊತ್ತಾಗುತ್ತದೆ. ಆದರೆ ನಮ್ಮ ಹಿಂದೆ ಕಿವಿಗಳ ಸನಿಹದಲ್ಲಿ, ಕೇಳದ … Read more