ಮತ್ತೊಮ್ಮೆ ‘ವೀರ ಸಿಂಧೂರ ಲಕ್ಷ್ಮಣ’ ದರ್ಶನ: ಹಿಪ್ಪರಗಿ ಸಿದ್ಧರಾಮ
ಸಮೃದ್ಧ ಪರಂಪರೆಯುಳ್ಳ ಇಂಡಿಯಾ ದೇಶದ ಸಾಮಾಜಿಕ ಮತ್ತು ಸ್ವಾತಂತ್ರ್ಯ ಹೋರಾಟದ ಚರಿತ್ರೆಯನ್ನು ಅವಲೋಕಿಸಿದಾಗ, ಜನನಾಯಕರ ಜನಾಂದೋಲನಗಳು, ಕಾನೂನುಬದ್ಧ ಚಳುವಳಿಗಳು ಒಂದೇಡೆಯಾದರೆ ಜಾಗೃತ ಯುವಮನಸ್ಸುಗಳು, ಶೋಷಿತರ ಮತ್ತು ಆದಿವಾಸಿಗಳ ರಕ್ತಸಿಕ್ತ ಹೋರಾಟದಲ್ಲಿ ಸ್ವತಂತ್ರ ಸಮರದ ಗಂಗೆಯ ಪ್ರವಾಹಕ್ಕೆ ಸಾವಿರ ತೊರೆಗಳು ಸೇರಿಕೊಂಡು ಬಿಸಿನೆತ್ತಿರಿನ ತರ್ಪಣದಿಂದ ನಾಡ ಮುಕ್ತಿಗಾಗಿ ಅನ್ಯಾಯದ ವಿರುದ್ಧ ಸಿಡಿದೆದ್ದು ಪ್ರಾಣಾರ್ಪಣೆಗೈದಿದ್ದು ಇನ್ನೊಂದೆಡೆ. ಸುರಪುರ ವೆಂಕಟಪ್ಪ ನಾಯಕ, ನರಗುಂದದ ಬಾಬಾಸಾಹೇಬ, ಮುಂಡರಗಿ ಭೀಮರಾಯ, ಮೈಲಾರ ಮಹಾದೇವ, ಹಲಗಲಿಯ ಬೇಡರು, ಸಂಗೊಳ್ಳಿ ರಾಯಣ್ಣ ಹೀಗೆ ಇನ್ನೂ ಅನೇಕ ಅನಾಮಿಕರ … Read more