ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಜಗತ್ತನ್ನು ಬದಲಾಯಿಸಿ ಸೂಫಿ ಮುಮುಕ್ಷು ಬಯಾಝಿದ್ ತನ್ನ ಜೀವನಚರಿತ್ರೆಯಲ್ಲಿ ಇಂತು ಬರೆದಿದ್ದಾನೆ: ನಾನು ಚಿಕ್ಕವಯಸ್ಸಿನವನಾಗಿದ್ದಾಗ ನನ್ನ ಆಲೋಚನೆಗಳ, ದೇವರಿಗೆ ಮಾಡುತ್ತಿದ್ದ ಕೋರಿಕೆಗಳ, ಹಾಗೂ ಎಲ್ಲ ಪ್ರಾರ್ಥನೆಗಳ ತಿರುಳು “ಜಗತ್ತನ್ನು ಬದಲಿಸಲು ಅಗತ್ಯವಾದ ಶಕ್ತಿಯನ್ನು ನನಗೆ ಕೊಡು” ಎಂಬುದಾಗಿತ್ತು. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಏನೋ ಒಂದು ಲೋಪ ನನಗೆ ಗೋಚರಿಸುತ್ತಿತ್ತು. ನಾನೊಬ್ಬ ಕ್ರಾಂತಿಕಾರಿಯಾಗಿದ್ದೆ. ಇಡೀ ಪ್ರಪಂಚವನ್ನೇ ಬದಲಿಸುವ ಹಂಬಲ ನನ್ನದಾಗಿತ್ತು. ತುಸು ಪಕ್ವವಾದ ನಂತರ ನನಗನ್ನಿಸುತ್ತಿತ್ತು – ಈ ಬಯಕೆ ತುಸು ಅತಿಯಾಯಿತು. ನನ್ನ ಜೀವನ ನನ್ನ ಕೈ … Read more