ಹಿಮಪಾತ: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಇವತ್ಯಾಕೆ ಇಷ್ಟೊಂದು ಬೇಗ ಎಚ್ಚರ ಆಯ್ತು ಅಂತ ಗೊತ್ತಾಗಲಿಲ್ಲ ವೆಂಕಟ್ ಗೆ. ಬೇಗ ಎದ್ದು ಏನು ಮಾಡುವುದೆಂದು ಒಂದು ಕ್ಷಣ ಅವನಿಗೆ ಹೊಳೆಯಲಿಲ್ಲ. ಬೆಂಗಳೂರಿನಲ್ಲಾಗಿದ್ದರೆ ಎದ್ದ ಕೂಡಲೇ ಬಾಗಿಲಿಗೆ ಸಿಗಿಸಿರುತ್ತಿದ್ದ ಪೇಪರ್ ಎತ್ತಿಕೊಂಡು ಓದಬಹುದಿತ್ತು.  ಈ ಪರದೇಶದಲ್ಲಿ ಹಾಗಿಲ್ಲವಲ್ಲ. ಸುದ್ದಿ ತಿಳಿಯಬೇಕೆಂದರೆ  ಒಂದೋ ಟೀವಿ, ಸ್ಮಾರ್ಟ್ ಫೋನ್, ಇಲ್ಲವೇ ಟಚಿಠಿಣoಠಿ ನಲ್ಲೆ ನೋಡಿ ತಿಳಿಯಬೇಕು. ಅವನಿಗೆ ಅಲ್ಲಿಯ ಸ್ಥಳೀಯ ಸುದ್ದಿಯ ತಿಳಿದುಕೊಳ್ಳುವ ಬಗ್ಗೆ ಉತ್ಸಾಹವೇನಿರಲಿಲ್ಲ. ಇಲ್ಲಿನ ಸುದ್ದಿಗಳೂ ಸುದ್ದಿಗಳೇ? ಒಂದು ಸಣ್ಣ ಬಿರುಗಾಳಿ ಬಂದರೇನೇ ಇಡೀ … Read more

ಬಹುಪರಾಕ್!: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಬೆಳಿಗ್ಗೆ ಕೆಲಸಕ್ಕೆ ಹೊತ್ತಾಗಿದ್ದರೂ ಅಂತಹ ಗಡಿಬಿಡಿಯೇನೂ ತೋರಿಸದೆ, ತಾನು ಬೇಗ ಹೋಗಿಯಾದರೂ ಏನು ಮಾಡುವುದು ಅನ್ನುವ ಮನಸ್ಥಿತಿಯಲ್ಲಿ ಆರಾಮವಾಗಿ ಬಂದ ಪ್ರದೀಪ್ ಗೆ ಸ್ವಾಗತಿಸಿದ್ದು ಎಂದಿಗಿಂತಲೂ ಚೊಕ್ಕದಾದ ಆಫೀಸಿನ ಪ್ರಾಂಗಣ. ಅವನಿಗೆ ಆಶ್ಚರ್ಯವಾಗಿತ್ತು. ಅಲ್ಲೇ ನಿಂತು ಅತ್ತಿತ್ತ ಕಣ್ಣಾಡಿಸಿದ. ರಿಸೆಪ್ಶನ್ ನಲ್ಲಿ ಹೂವಿನ ಅಲಂಕಾರ, ಆ ಕಡೆ ಈ ಕಡೆಗೊಂದು ಹೂ ಕುಂಡಲ. ಇದ್ದುದರಲ್ಲೇ ಸುಂದರಿಯರು ಅನಿಸಿಕೊಂಡ ನಾಲ್ಕು ಲಲನೆಯರು, ತಮಗೆ ಪರಿಚಿತವೇ ಅಲ್ಲದ ಸ್ಯಾರಿ ಎಂಬ ದೇಸಿ ಉಡುಗೆಯಲ್ಲಿ ನಿಂತಿದ್ದರು. ಆಗಾಗ ತಮ್ಮ ಸ್ಯಾರಿ … Read more

ಜಾನ್ ಎಂಬ ಬಿರುಗಾಳಿಯ ಮುನ್ಸೂಚನೆ…: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಜಾನ್ ಆಯೋಜಿಸಿದ್ದ ಪಾರ್ಟಿ ಮುಗಿಸಿ ಮನೆಗೆ ಬಂದ ವೆಂಕಣ್ಣನ ಮುಖ ತುಂಬಾ ಚಿಂತೆಯಲ್ಲಿದ್ದಂತೆ ಕಂಡು ಬಂದದ್ದರಿಂದ ಜಾನು ಗೆ ಕಳವಳವಾಯಿತು.  “ಯಾಕ್ರೀ ಪಾರ್ಟಿಯೊಳಗ ಯಾರರೆ ಏನರೆ ಅಂದರೋ ಏನು?” ಅಂತ ಹತ್ತಿರಕ್ಕೆ ಹೋಗಿ ವಿಚಾರಿಸಿದಳು. ಹಾಗೆ ಹತ್ತಿರ ಹೋಗಿದ್ದಕ್ಕೆ ಇನ್ನೊಂದು ಕಾರಣವೂ ಇತ್ತು. ಗಂಡ ವಿದೇಶಕ್ಕೆ ಬಂದು ಅವರ ತರಹವೇ ಪಾರ್ಟಿಲಿ ಗುಂಡು ಹಾಕೋಕೂ ಶುರು ಹಚ್ಚಿಕೊಂಡನೋ ಹೇಗೆ ಎಂಬ ಪರೀಕ್ಷೆ ಅದಾಗಿತ್ತು. “ಯಾರೇನ್ ಅಂದ್ರೂ ನಾ ತಲಿ ಕೆಡಿಸ್ಕೊಳೋದಿಲ್ಲ ಬಿಡು. ಆದ್ರ ಆ ಜೇ.ಸಿ.ಬಿ … Read more

ಕಾರ್-ಬಾರ್!: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ವೆಂಕಟ್ ಗೆ ಬಾಡಿಗೆ ಕಾರು ತೆಗೆದುಕೊಳ್ಳೋದು ಹೆಚ್ಚು ಕಡಿಮೆ ಅನಿವಾರ್ಯವಾಗಿತ್ತು. ಇವನು ಇನ್ನೂ ಮೂರು ವಾರಗಳಾದರೂ ಅಮೆರಿಕಾದಲ್ಲಿ ಇರುವುದು ಬಾಕಿ ಇತ್ತು. ದಿನಾಲೂ ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ ಇವನ ಸಹೋದ್ಯೋಗಿ ರಜೆಯ ಮೇಲೆ ಭಾರತಕ್ಕೆ ಹೋಗಿದ್ದನಾದ್ದರಿಂದ ಇವನಿಗೆ ದಿನಾಲೂ ಆಫಿಸಿಗೆ ಹೋಗುವುದೇ ಕಷ್ಟವಾಗಿತ್ತು. ಅದೂ ಅಲ್ಲದೆ, ಅಲ್ಲಿ ಕಾರಿಲ್ಲವೆಂದರೆ ಕಾಲೇ ಕಳೆದುಕೊಂಡಂತೆ. ತನ್ನ ಅಪ್ಪ ಕಾರು ತರಲು ಹೋಗುತ್ತಿದ್ದಾನೆ ಎನ್ನುವುದೇ ಖುಷಿ ಗೆ ಕೌತುಕದ ಸಂಗತಿಯಾಗಿತ್ತು. ಜಾನುನೂ  ಅಲ್ಲಿ ಇಲ್ಲಿ ಅಡ್ಡಾಡಲು ಅನುಕೂಲವಾಗುತ್ತದೆಂದು ಖುಷಿಯಲ್ಲಿದ್ದಳು.  … … Read more

ಜೇ.ಸಿ.ಬಿ!: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಬೆಳ್ಳಂ ಬೆಳಿಗ್ಗೆ ಅಮೇರಿಕದಿಂದ ವೆಂಕಟ್ ಕಳಿಸಿದ್ದ ಒಂದು ಇಮೇಲ್ ಭಾರತದಲ್ಲಿದ್ದ ಅವನ ಬಾಸ್ ಸುಧೀರನನ್ನು ಅಧೀರನನ್ನಾಗಿಸಿತ್ತು! ಅದು ಅಲ್ಲಿನ ಒಂದು ಬಹು ಮುಖ್ಯ ಸುದ್ದಿಯನ್ನು ಭಿತ್ತರಿಸಿದ ಸಂದೇಶವಾಗಿತ್ತು. ಇವರ ಕಂಪನಿಯ ಅಮೆರಿಕಾದ ಮೂಲ ಶಾಖೆಯ ಉಪಾಧ್ಯಕ್ಷ ನಾಗಿದ್ದ ರೋಜರ್ ನನ್ನು ಅಲ್ಲಿನ ಆಡಳಿತ ಮಂಡಳಿ ಕಿತ್ತೊಗೆದಿತ್ತು. ಖಾಲಿಯಾದ ಅವನ ಸ್ಥಾನದಲ್ಲಿ ಮೂವತ್ತು ವರ್ಷದಿಂದ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಜಾನ್ ಸಿ. ಬೇಕರ್ ನನ್ನು ಕುಳ್ಳಿರಿಸಿದ್ದರು.  …ಅಮೆರಿಕಾದಲ್ಲಿ ಇದೆಲ್ಲ ಈಗ ಮಾಮೂಲಿ. ಅದು ಕಂಪನಿಯ ವೆಚ್ಚಗಳ … Read more

ನಾನು ಮತ್ತು ನನ್ನ ನಾಯಿ ಇಬ್ಬರೂ ನಿರ್ಗತಿಕರು!: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ.. ಅಮೆರಿಕಾಕ್ಕೆ ಬಂದು ಇವತ್ತಿಗೆ ಆಗ್ಲೇ ಒಂದು ವಾರವಾಯ್ತೆ ಅಂತ ವೆಂಕಣ್ಣ ತಲೆ ಕೆರೆಯುತ್ತಾ ಯೋಚಿಸುತ್ತಿದ್ದಾಗಲೇ ಮಗಳು ಖುಷಿ ಇವನ ಭುಜ ಹಿಡಿದು ಅಲುಗಾಡಿಸುತ್ತಿದ್ದಳು.   “ಅಪ್ಪ ಅಮೇರಿಕಾ ಬೋರಿಂಗ್ ಅದ” ಅಂದಳು.  ಶಾಲೆಗೆ ಹೋಗುವ ರಗಳೆ ಇಲ್ಲ ಅಂತ ಬಂದ ಹೊಸತು ಅವಳಿಗೆ ಖುಷಿಯಾಗಿತ್ತಾದರೂ, ಈಗ ಅವಳಿಗೆ ಬೇಜಾರು ಶುರು ಆಗಿತ್ತು. ಹೊಸ ಜಾಗ, ಅದೂ ಅಲ್ಲದೆ  ಅವಳ ಜೊತೆಗೆ ಆಡಲು ಅಲ್ಲಿ ಯಾರೂ ಇರಲಿಲ್ಲ. ಆದರೆ  ಇವತ್ತು ಶನಿವಾರ, ವೆಂಕಣ್ಣನ ಆಫೀಸಿಗೆ ರಜೆ. ಅದಕ್ಕೆ … Read more

ಕೆಲಸಕೆ ಚಕ್ಕರ್… ಊಟಕೆ ಹಾಜರ್!: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ… ನಿಶಾ ಳ ಸಂಗಡ ಹೋಗುತ್ತಿರುವಂತೆ, ಆಫೀಸಿನಲ್ಲಿ ಎಲ್ಲರ ಕಣ್ಣುಗಳು ಇವರನ್ನೇ ನೋಡುತ್ತಿದ್ದರೆ ಸುಜಯ್ ಗೆ ಒಳಗೊಳಗೇ  ಖುಷಿ. ಅದರೂ ಅದು ಹೇಗೋ ಅವನ ಮುಖದ ಮೇಲೆಯೂ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಅದನ್ನು ಗಮನಿಸಿದ ಅವಳ ಮುಖದಲ್ಲೊಂದು ತುಂಟ ಮುಗುಳ್ನಗು ಸುಳಿಯಿತು. ಇಬ್ಬರೂ ರಿಸೆಪ್ಶನ್ ದಾಟಿಕೊಂಡು ಹೋಗುತ್ತಿದ್ದಂತೆ, “ಸುಜಯ್… ಹೇ ಸುಜಯ್…” ಅಂತ ಕೂಗುತ್ತಿದ್ದ ಕೋಮಲ ದನಿಯೊಂದು ಇವರಿಬ್ಬರಿಗೂ ನಿಲ್ಲುವಂತೆ ಮಾಡಿತು. ಯಾರು ಅಂತ ಹಿಂತಿರುಗಿ ನೋಡಿದರೆ ಆ ಕೋಮಲ ದನಿ ಬೇರೆ ಯಾರದೂ ಅಲ್ಲ, ಪೃಥ್ವಿ ಅನ್ನುವ … Read more

ಕಾಯಕವೇ ಕೈಲಾಸ: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ..  ಅವತ್ತು ಸಂಜೆ ಬೇಗನೆ ಮನೆಗೆ ತಲುಪಿದ ವೆಂಕಣ್ಣನ ಕಿವಿಯಲ್ಲಿ ಜೇಮ್ಸ್ ನ ಮಾತುಗಳು ಗುಂಯ್ ಗುಡುತ್ತಿತ್ತು. ಹೌದೆ? ನಾವೆಲ್ಲ ಅಮೆರಿಕಾಕ್ಕೆ ಬಂದು ಇವರ ಕೆಲಸಗಳನ್ನು ಕಸಿಯುತ್ತಿದ್ದೇವೆಯೇ? ಅನ್ನುವ ಪ್ರಶ್ನೆ ಇವನ ಕಾಡತೊಡಗಿತ್ತು. ಜಾನು ಮತ್ತು ಖುಷಿ ಇನ್ನೂ ಅಮೆರಿಕಾದ ದಿನಗಳಿಗೆ ಹೊಂದಿಕೊಳ್ಳದೆ ದಿನವಿಡಿ ನಿದ್ದೆಯಲ್ಲೇ ಕಳೆದಿದ್ದರು. ಇವನಿಗೂ ನಿದ್ದೆ ಎಳೆಯುತ್ತಿದ್ದರೂ ಬಲವಂತವಾಗಿ ಅದನ್ನು ತಡೆಯುತ್ತಿದ್ದ. ಆಗ ತಾನೇ ಎದ್ದು ಕುಳಿತಿದ್ದ ಖುಷಿಗೆ ಬೇರೆ ಏನೂ ಮಾಡಲು ತೋಚದೆ ಅಲ್ಲಿನ ಟೀವಿಯಲ್ಲಿ ಬರುತ್ತಿದ್ದ ಕಾರ್ಟೂನು ನೋಡುತ್ತಿದ್ದಳು.  ಜಾನು … Read more

ಅವನ ಹೆಸರೇ ಜೇಮ್ಸ್…: ಗುರುಪ್ರಸಾದ್ ಕುರ್ತಕೋಟಿ

(ಇಲ್ಲಿಯವರೆಗೆ) ಅಂತೂ ಅಮೆರಿಕಾದಲ್ಲಿ ಬೆಳಗಾಗಿತ್ತು! ಜಾನು ಆ ಸುಸಜ್ಜಿತವಾದ ಫ್ಲಾಟ್ ನ ಒಂದು ಸುತ್ತು ತಿರುಗಿ ಎಲ್ಲವನ್ನೂ  ಪರೀಕ್ಷಿಸುತ್ತಿದ್ದಳು. ಬಟ್ಟೆ ಒಗೆದು, ಒಣಗಿಸುವ ಯಂತ್ರವಿದ್ದದ್ದು  ಅಷ್ಟು ವಿಶೇಷವೆನಿಸದಿದ್ದರೂ  ಪಾತ್ರೆ ತೊಳೆಯುವ ಯಂತ್ರ ಗಮನ ಸೆಳೆಯಿತು. ಸಧ್ಯ ಕೆಲಸದವಳನ್ನು ಕಾಯುವ, ಓಲೈಸುವ ಚಿಂತೆಯಿಲ್ಲವೆನ್ನುವ ಸಮಾಧಾನ ಅವಳಿಗೆ. ಅಡಿಗೆ ಮನೆಯಲ್ಲಿ ಓವನ್, ಹೀಟರ್, ಇಂಡಕ್ಶನ್ ಓಲೆಗಳ ಜೊತೆಗೆ ಸೌಟು, ಪಾತ್ರೆ ಪಗಡಗಳೆಲ್ಲವೂ  ಇದ್ದದ್ದು ಖುಷಿಯಾಯ್ತಾದರೂ ಅಲ್ಲೆಲ್ಲೂ ಲಟ್ಟಣಿಗೆ ಕಾಣದೇ ಅವಳು ಚಿಂತೆಗೊಳಗಾದಳು. ಆಗಲೇ ಸ್ನಾನ ಮುಗಿಸಿ ಬಂದಿದ್ದ ವೆಂಕಣ್ಣ ಇವಳ … Read more

ಹಗಲು ರಾತ್ರಿಗಳ ಗೊಂದಲದಲ್ಲಿ…: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ವೆಂಕಣ್ಣ ಯಾರೋ ಒದ್ದೆಬ್ಬಿಸಿದಂತೆ ನಿದ್ದೆಯಿಂದ ಎದ್ದು ಕೂತಿದ್ದ. ಅವನ ನಿದ್ರಾ ಭಂಗಕ್ಕೆ ಕಾರಣವಾಗಿದ್ದು ಗಾಳಿಕುಳಿ ಗೆ ಸಿಕ್ಕು ನಡುಗುತ್ತಿದ್ದ ವಿಮಾನವೋ ಅಥವಾ ಅದರ ಪರಿಣಾಮ ಬಿದ್ದ ಕನಸಿನಿಂದಲೋ ಅವನಿಗೆ ಅರ್ಥವಾಗದಾಯ್ತು. ಆದರೂ ಅವನು  ಕಂಡ ಆ ಕನಸು ಭಲೆ ವಿಚಿತ್ರವಾಗಿತ್ತು. ಅದರಲ್ಲಿ, ಅ ದೊಡ್ಡ ವಿಮಾನದ ತುಂಬಾ ಇವನು ಹಾಗೂ ಜರ್ಮನ್ ವಿಮಾನ ಸಖಿ ಇಬ್ಬರೇ ಇದ್ದರು. ಇವನಿಗೆ ಖುಷಿಯಾಯ್ತಾದರೂ ಆಕಾಶದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ತಮ್ಮಿಬ್ಬರ ಬಿಟ್ಟು ಉಳಿದವರೆಲ್ಲಿ ಎಂಬ ಆತಂಕದಲ್ಲಿ, ಎಲ್ರೂ ಎಲ್ಲಿಗೆ ಹೋದ್ರು? … Read more

‘ನಿಶಾ’ಗಮನ: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಇಡೀ ರಾತ್ರಿ ನಿದ್ದೆ ಹತ್ತಿರಕ್ಕೂ ಸುಳಿಯದೇ ಒದ್ದಾಡಿ ತನಗೆ ಯಾವಾಗಲೋ ನಿದ್ದೆ ಹತ್ತಿದ್ದು ಬೆಳಿಗ್ಗೆ ಎದ್ದಾಗಲೇ ಸುಜಯ್ ಗೆ ಗೊತ್ತಾಗಿದ್ದು. ಎದ್ದವನೇ ಅತ್ತಿತ್ತ ತಡಕಾಡಿ ತನ್ನ ಸ್ಮಾರ್ಟ್ ಫೋನು ಎಲ್ಲಿಹುದು ಅಂತ ಹುಡುಕಾಡಿದ. ಎದ್ದ ಕೂಡಲೇ ಅದರ ಮುಖ ನೋಡದಿದ್ದರೆ ಸಮಾಧಾನವಿಲ್ಲ ಅವನಿಗೆ. ಅದು ಪಕ್ಕದಲ್ಲಿರದಿದ್ದರೆ ಅವನಿಗೆ ಉಸಿರಾಡುವುದೂ ಕಷ್ಟವೇ! ಹಿಂದಿನ ಕಾಲದ  ಕಥೆಗಳಲ್ಲಿ ರಾಕ್ಷಸರ ಜೀವ ಒಂದು ಗಿಣಿಯಲ್ಲಿ ಇರುತ್ತಿತ್ತಂತೆ ಹಾಗೆಯೇ ಸುಜಯ್ ನ ಜೀವ ಅವನ ಸ್ಮಾರ್ಟ್ ಫೋನ್ ನಲ್ಲೆ ಇದೆ. ಅದನ್ನೊಂದು … Read more

ಪಾತಾಳದೆಡೆಗೆ!: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ವೆಂಕಣ್ಣ ಪರಿವಾರ ಸಮೇತ ಬೆಂಗಳೂರಿನ ವಿಮಾನಾಲಯದ ಪ್ರವೇಶದ್ವಾರಕ್ಕೆ ಪಾದಸ್ಪರ್ಶ ಮಾಡಿದಾಗ ಗಂಟೆ ರಾತ್ರಿ ಹನ್ನೊಂದಾಗಿತ್ತು. ಮುಂಜಾನೆ ಎರಡು ಗಂಟೆಗೆ ಪ್ಲೇನು ಹೊರಡುವದಿತ್ತಾದರೂ ಆದಕ್ಕಿಂತ ನಾಲ್ಕು ತಾಸು ಮೊದಲೇ ಅಲ್ಲಿರಬೇಕಿತ್ತು. ಎಲ್ಲ ಔಪಚಾರಿಕತೆಗಳನ್ನು ಮುಗಿಸಬೇಕಲ್ಲ. ಅಮೆರಿಕಾಕ್ಕೆ ಹೋಗುವುದೆಂದರೆ ಅಷ್ಟು ಸುಲಭವೇ? ಬೆಂಗಳೂರಿನಿಂದ ಜರ್ಮನ್ ದೇಶಕ್ಕೆ ಮೊದಲ ಫ್ಲೈಟು. ಅಲ್ಲಿಂದ ಅಮೇರಿಕಾದ ಚಿಕ್ಯಾಗೊ ನಗರಕ್ಕೆ ಇನ್ನೊಂದು ಫ಼್ಲೈಟು. ಕೊನೆಗೆ ಇವನು ಹೋಗಬೇಕಾಗಿದ್ದ ಊರಾದ ಸ್ಯಾಂಡಿ ಗೆ ಮತ್ತೊಂದು! ಒಂದೇ ಫ್ಲೈಟಿನಲ್ಲಿ ಅಷ್ಟು ದೂರ ಕ್ರಮಿಸುವುದು ಕಷ್ಟ. ಆ ದೇಶಕ್ಕೆ … Read more

ಆಪ್ತ ರಕ್ಷಕ!: ಗುರುಪ್ರಸಾದ ಕುರ್ತಕೋಟಿ

ಅವತ್ತು  ಕೆಲಸ ಮುಗಿಸಿ ನಾನು ಮನೆಗೆ ಬಂದಾಗ ರಾತ್ರಿ ಹನ್ನೊಂದು ಗಂಟೆ. ಕೆಲಸದ ಸುಸ್ತು, ತಲೆ ಬೇರೆ ಸಣ್ಣಗೆ ನೋಯುತ್ತಿತ್ತು. ನಮ್ಮ ಅಪಾರ್ಟಮೆಂಟಿನ ಹೊರಗೆ ಕಾರು ನಿಲ್ಲಿಸಿಕೊಂಡು "ಅವನು" ಗೇಟು ತೆಗೆಯಲೆಂದು ಕಾಯುತ್ತಿದ್ದೆ…  ಅವನ ಹೆಸರು ನಂದೀಶ. ಅವನನ್ನು ಏನಂತ ಪರಿಚಯಿಸಬೇಕೆಂದು ಗೊತ್ತಾಗುತ್ತಿಲ್ಲ. ಸೆಕ್ಯುರಿಟಿ ಅನ್ನಲೇ? ಊಹುಂ, ಅವನು ಅದಕ್ಕಿಂತ ಜಾಸ್ತಿ. ವಾಚ್ ಮನ್ ಅನ್ನಲೂ  ಮನಸ್ಸಿಲ್ಲ, ಏಕೆಂದರೆ ವಾಚ್ ಮ್ಯಾನ್ ಗಳು ಬರೀ ವಾಚ್ ಮಾಡುತ್ತಾರೆ ಅಷ್ಟೆ!  ಅವನನ್ನು  ನಮ್ಮ "ಆಪ್ತ ರಕ್ಷಕ" ಅಂತ ಕರೆಯುವುದೇ … Read more

ವಿಮಾನಾಲಯ ಅಂದ್ರ ಏನ್ ಮೀನಿಂಗು?: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ…) ವೆಂಕಣ್ಣನನ್ನು ಅವನ ಕಂಪನಿಯವರು ಅಮೆರಿಕಾಕ್ಕೆ ಕಳಿಸುವ ನಿರ್ಧಾರ ಮಾಡುತ್ತಾರೆ. ಹೆಂಡತಿ, ಮಗಳನ್ನೂ ಜೊತೆಗೆ ಕರೆದೊಯ್ಯುವ ನಿರ್ಧಾರ ಮಾಡಿ ಅವರಿಗೆ ವೀಸಾ ಮಾಡಿಸಲು ಚೆನ್ನೈಗೆ ಹೋಗುತ್ತಾನೆ. ವಿಸಾ ಕೊಡುವದಕ್ಕೆ ಅಮೇರಿಕದವರು ಕಾಡಿಸುವ ರೀತಿಗೆ ಬೇಸತ್ತು,  ಆ ದೇಶಕ್ಕೆ ಹೋಗುವುದೇ ಬೇಡ ಅನ್ನುವ ನಿರ್ಧಾರ ಮಾಡುತ್ತಾನಾದರೂ ಹೆಂಡತಿ ಮಗಳಿಗೋಸ್ಕರ ನಿರ್ಧಾರ ಬದಲಿಸುತ್ತಾನೆ.  ಮುಂದೆ ಓದಿ… ) ಮೊದಲೆಲ್ಲಾ ವಿದೇಶ ಪ್ರಯಾಣ ಮಾಡುವವರ ದೊಡ್ಡದೊಂದು ಫೋಟೊ ಪೇಪರಿನಲ್ಲಿ ಹಾಕಿಸಿ, ಅವರಿಗೆ ಬಂಧು ಮಿತ್ರರು ಶುಭ ಕೋರುತ್ತಿದ್ದರು. ಅದು ಯಾಕೆ ಹಾಗೆ … Read more

ರೆಡಿ ಸ್ಟೆಡಿ ಪೋ!: ಗುರುಪ್ರಸಾದ ಕುರ್ತಕೋಟಿ

ಅವತ್ತಿನ ದಿನದಲ್ಲೇನು ಹೇಳಿಕೊಳ್ಳುವಂತಹ ವಿಶೇಷತೆಯಿರಲಿಲ್ಲ. ಪ್ರತಿದಿನದಂತೆ ಅವತ್ತೂ ಬೆಳಗಾಗಿತ್ತು, ವೆಂಕಣ್ಣ  ಎಂದಿನಂತೆ ಬಲ ಮಗ್ಗಲಲ್ಲೇ ಎದ್ದಿದ್ದ! ಅವನ ಹೆಂಡತಿ ಎಂದಿನಂತೆ ಅವತ್ತು ಕೂಡ ಇನ್ನೂ ಎದ್ದಿರಲಿಲ್ಲವಾದ್ದರಿಂದ, ಹಲವು ಬಗೆಯ ರಾಸಾಯನಿಕಗಳ ಆಗರವೆಂದು ಗೊತ್ತಿದ್ದೂ ಕೂಡ ಚಹಾ ಎನ್ನುವ ಕಷಾಯದ ವಿಷವನ್ನು ತನ್ನ ಕೈಯಾರೆ ಕುದಿಸಿಕೊಂಡ. ಎಷ್ಟಂದ್ರೂ ನಮಗೆ ಬೇಕಾದ ವಿಷವನ್ನು ನಾವೇ ಆರಿಸಿಕೊಳ್ಳಬೇಕೆಂದು ಹಿರಿಯರು ಹೇಳಿಬಿಟ್ಟಿದ್ದಾರಲ್ಲ! ಯಾಂತ್ರಿಕವಾಗಿ ಇತರ ಪ್ರಾತಃ ಕರ್ಮಗಳಿಗೂ ಮುಕ್ತಿಯನ್ನು ಕರುಣಿಸಿದ್ದ. ಹಿಂದಿನ ದಿನ ನೋಡಿದ್ದ ನಾಟಕದ ಪಾತ್ರವೊಂದು ಅವನ ತಲೆಯಲ್ಲಿ ಇನ್ನೂ ಗುಂಯ್ … Read more

ವಿಸ್ಮಯದ ಮಾಯಾಲೋಕ!: ಗುರುಪ್ರಸಾದ ಕುರ್ತಕೋಟಿ

ಕಾರ್ಪೊರೇಟ್ ಜಗತ್ತಿನಲ್ಲಿ, ವರ್ಷಕ್ಕೊಮ್ಮೆಯೋ, ಎರಡು ಸರ್ತಿಯೋ ಟೀಮ್ ಔಟಿಂಗ್ (team outing) ಅಂತ ಮಾಡುತ್ತಾರೆ. ಒಂದು ದಿನದ ಮಟ್ಟಿಗೆ ಕಚೇರಿಯ ಸಹೋದ್ಯೋಗಿಗಳೆಲ್ಲರೂ ಬೆಂಗಳೂರಿನಿಂದ ಸ್ವಲ್ಪ ಹೊರ ವಲಯದಲ್ಲಿರುವ ರಿಸಾರ್ಟ ಒಂದರಲ್ಲಿ ಕಾಲ ಕಳೆದು ಬರುತ್ತಾರೆ. ಅಲ್ಲಿ ಆಟವಾಡಿಸುತ್ತಾರೆ, ಅಬ್ಬರದ ಸಂಗೀತವಿರುತ್ತೆ, ನೃತ್ಯವಿರುತ್ತೆ. ತಮ್ಮ ಒತ್ತಡದ ಕೆಲಸದ ಮಧ್ಯೆ ದಣಿದ ಜೀವಗಳಿಗೆ ಒಂದಿಷ್ಟು ವಿರಾಮ ಕೊಡಿಸುವ ಪ್ರಯತ್ನ ಅದು. ಅದರ ಘೋಷಣೆಯಾಗುತ್ತಲೇ ಎಲ್ಲರಿಗೂ ಖುಷಿ, ಇನ್ನೂ ಕೆಲವು ಆತ್ಮಗಳಂತೂ ಸಂತಸದಿಂದ ಅರಳುತ್ತವೆ. ಆ ಆತ್ಮಗಳ ನೆಲೆಯಾಗಿರುವ ದೇಹಗಳಿಗೊಂದು, ವಿಶಿಷ್ಠವಾದ … Read more

ಬೆಂಬಿಡದ ಭೂತ: ಗುರುಪ್ರಸಾದ ಕುರ್ತಕೋಟಿ

(ಅತೀಂದ್ರಿಯ ಅನುಭವದ ಕಥೆಗಳು – ಭಾಗ ೬) ಈ ಕಥೆ ನನ್ನ ಸಹೋದ್ಯೋಗಿ ರಮೇಶ ನಾಯಕ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದದ್ದು — ನಾನು ಹುಟ್ಟಿ ಬೆಳೆದು ದೊಡ್ಡವನಾಗಿದ್ದು ಭಟ್ಕಳದಲ್ಲಿ. ನಮ್ಮ ಮನೆಯಿಂದ ಎಡವಿ ಬಿದ್ದರೆ ಸಮುದ್ರ! ಅಂದರೆ ಅದು ಅಷ್ಟು ಹತ್ತಿರದಲ್ಲಿದೆ ಅಂತ ಅರ್ಥ. ಅದು ಬೇರೆಯವರಿಗೆ ಕೇಳೋಕೆ ಚಂದ. ಪರ ಊರಿನಿಂದ ಒಂದೆರಡು ದಿನಕ್ಕೆ ಅಂತ ನಮ್ಮೂರಿಗೆ ಬಂದವರಿಗೆ ಸಮುದ್ರಕ್ಕೆ ಹೋಗಿ  ಸ್ನಾನ ಮಾಡಲು ಅಡ್ಡಿ ಇಲ್ಲ. ಅಲ್ಲೇ ಇರೋವ್ರಿಗೆ ಕಷ್ಟ. ಅದರ … Read more

ಪವಾಡ?: ಗುರುಪ್ರಸಾದ ಕುರ್ತಕೋಟಿ

(ಅತೀಂದ್ರಿಯ ಅನುಭವದ ಕಥೆಗಳು – ಭಾಗ ೫): ಈ ಸಲ ಒಂದು ಚಿಕ್ಕ ಘಟನೆಯಾ ಬಗ್ಗೆ ಹೇಳುತ್ತೇನೆ. ಇದು ನನ್ನ ಅಜ್ಜ (ಅಮ್ಮನ ತಂದೆ) ಅವರಿಗಾದ ಅನುಭವ. ಸುಮಾರು ಐದು ದಶಕಗಳ ಹಿಂದೆ ನಡೆದದ್ದು. ಆಗ ನನ್ನಜ್ಜ ಮಧ್ಯ ವಯಸ್ಕ. ಅವರ ಹೆಂಡತಿ, ಅಂದರೆ ನನ್ನ ಅಜ್ಜಿ, ರಾಘವೇಂದ್ರ ಸ್ವಾಮಿಗಳ ಭಕ್ತಳು. ಅಂತಿಂಥ ಭಕ್ತಳಲ್ಲ, ಘನಘೋರ ಭಕ್ತಳು! ರಾಯರ ಬಗ್ಗೆ ಅವಳಿಗೆ ಸಿಕ್ಕಾಪಟ್ಟೆ ನಂಬಿಕೆ. ಅದೇ ರೀತಿಯಾಗಿ ಅವರ ಸೇವೆಯನ್ನೂ ಚಾಚು ತಪ್ಪದೇ ಮಾಡುತ್ತಿದ್ದಳು. ಅದು ಪೂಜೆ-ಪುನಸ್ಕಾರವೋ, … Read more

ಭ್ರಮೆ? (ಅತೀಂದ್ರಿಯ ಅನುಭವದ ಕಥೆಗಳು – ಭಾಗ ೪): ಗುರುಪ್ರಸಾದ ಕುರ್ತಕೋಟಿ

(ಈ ಕಥೆ ನನ್ನ ಗೆಳೆಯ ವಿಟ್ಠಲ ಕುಲಕರ್ಣಿಗಾದ ಅನುಭವದ ಮೇಲೆ ಹೆಣೆದಿದ್ದು. ನಂಬುವಿರೋ ಇಲ್ವೊ ಗೊತ್ತಿಲ್ಲ… ಇದನ್ನು ಅವನ ಬಾಯಿಂದ ಕೇಳುತ್ತಿದ್ದಾಗ ಹಾಗೂ ಈ ಕಥೆಯನ್ನ ರಾತ್ರಿ ಬರೆಯುತ್ತಿರುವಾಗ ನನ್ನ ಮೈಯಲ್ಲಿ ಭಯದ ಕಂಪನಗಳೆದ್ದಿದ್ದಂತೂ ನಿಜ! ಅಂದ ಹಾಗೆ, ಕಥೆಯಲ್ಲಿ ಬಳಸಿರುವ  ಹೆಸರು ನಿಜವಾದ ವ್ಯಕ್ತಿಯದಲ್ಲ.) —  ಸುಮಾರು ಹದಿನೈದು ವರ್ಷಗಳ ಹಿಂದೆ, ನಾನಿನ್ನೂ ಹುಬ್ಬಳ್ಳಿಯಲ್ಲೇ ಕೆಲಸ ಮಾಡುತ್ತಿದ್ದೆ. ಸ್ಟುಡಿಯೋ ಒಂದರಲ್ಲಿ ಗ್ರಾಫಿಕ್ ಡಿಸೈನರ್ ಕೆಲಸ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರು . ಆದರೂ ಒಂದೊಂದು ಸಲ … Read more

ದೀಪದ ದೆವ್ವ (ದೆವ್ವದ ಕಥೆಗಳು – ಭಾಗ ೩):ಗುರುಪ್ರಸಾದ್ ಕುರ್ತಕೋಟಿ

(ಇದು ಸಂಗೀತಾ ಕೇಶವ ಅವರಿಗಾದ ಅನುಭವದ ಎಳೆಯ ಮೇಲೆ ಹೆಣೆದ ಕತೆ) ನಾನಾಗ ಪೀಯುಸಿ ಮೊದಲ ವರ್ಷದಲ್ಲಿ ಓದುತ್ತಿದ್ದೆ. ನಾವಿದ್ದದ್ದು ನನ್ನ ಊರಾದ ಚಿಕ್ಕೋಡಿಯಲ್ಲಿ. ಅದು ಬೆಳಗಾವಿ ಜಿಲ್ಲೆಯಲ್ಲಿದೆ. ಹವಾಮಾನದ ವಿಷಯದಲ್ಲಿ ಅದಕ್ಕೂ ಬೆಳಗಾವಿಗೂ ಏನೂ ವ್ಯತ್ಯಾಸವಿರಲಿಲ್ಲ. ಅದು ಆಗಿನ ಸಂಗತಿ. ಈಗ ಬಿಡಿ ಬೆಳಗಾವಿಯ ಹವಾಮಾನವೂ ಪ್ರಕೃತಿ ವೈಪರಿತ್ಯಕ್ಕೆ ಬಲಿಯಾಗಿ ಹದಗೆಟ್ಟಿದೆ. ಆಗೆಲ್ಲಾ ಬೆಳಗಾವಿಯಲ್ಲಿ ಮಳೆ ಯಾವ ಪರಿ ಸುರಿಯುತ್ತಿತ್ತೆಂದರೆ… ಸುರಿಯುತ್ತಿತ್ತು ಅಷ್ಟೆ! ಒಮ್ಮೆ ಶುರುವಾಯಿತೆಂದರೆ ನಿಲ್ಲುವ ಮಾತೆ ಇರಲಿಲ್ಲ. ಚಿಕ್ಕೋಡಿಯ ಪರಿಸ್ಥಿತಿಯೂ ಹೆಚ್ಚು ಕಡಿಮೆ … Read more