ಸೆಂಟ್ ನರಸಿಂಹ : ವಿ.ಆರ್.ಕಾರ್ಪೆಂಟರ್
ನಾನಾಗ ಎಂಟನೇ ತರಗತಿ ಓದುತ್ತಿದ್ದೆ. ನಮ್ಮ ಮನೆಯ ಪಕ್ಕದಲ್ಲಿರುವ ದುಬ್ಬಪ್ಪನ ಹೊಲ ಕಟಾವು ಮುಗಿಸಿ ಇನ್ನೊಂದು ಬಿತ್ತನೆ ಶುರುವಾಗುವವರೆಗೂ ಊರಿನ ತಿಪ್ಪೆಯಂತೆ ಕಂಗೊಳಿಸುತ್ತದೆ. ನಾನು ನನ್ನ ಸ್ನೇಹಿತರೊಡನೆ ಅಲ್ಲಿಯೇ ಕ್ರಿಕೆಟ್, ಗೋಲಿ, ಸೈಕಲ್ ರೇಸ್, ಚಿಲ್ಲೀ ದಾಂಡು, ಬಂಗ್ರ (ಬುಗರಿ), ಪ್ಯಾಕೇಟ್ (ಸಿಗರೇಟ್ ಪ್ಯಾಕ್), ಲಗೋರಿ ಆಡುತ್ತಲೇ ಅಲ್ಲಿನ ತಿಪ್ಪೆಗಳಲ್ಲಿ ಸಿಗುವ ನಾಣ್ಯ, ಕಬ್ಬಿಣ, ತಾಮ್ರದ ವಸ್ತುಗಳನ್ನು ತಡಕುತ್ತಿದ್ದೆವು. ಒಂದೊಂದು ಸಾರಿ ಇಡೀ ತಿಪ್ಪೆಯನ್ನೇ ಬುಡಮೇಲು ಮಾಡಿ! ಅದರಿಂದ ಸಿಗುವ ಹಣದಲ್ಲಿ ಬಾಯಿ ಚಪಲ ತೀರಿಸಿಕೊಳ್ಳುತ್ತಿದ್ದೆವು. ಅಲ್ಲಿ … Read more