ಸರ್…. ಡ್ರಾಪ್ ಪ್ಲೀಸ್!!: ಸಂತೋಷ್ ಕುಮಾರ್ ಎಲ್. ಎಮ್.
ಒಂದು ಸುಮಾರು 15 ವರ್ಷಗಳ ಹಿಂದೆ ಮೈಸೂರಿನಲ್ಲಿ PUC ಓದುತ್ತಿದ್ದ ಸಂದರ್ಭ. ಅಪ್ಪ ನನಗೆ ಕೊಡಿಸಿದ ಸೆಕೆಂಡ್ ಹ್ಯಾಂಡ್ ಬೈಸಿಕಲ್ಲು ಮುರಿದು ಮೂಲೆ ಸೇರಿತ್ತು. ಅದರ ರಿಪೇರಿಗೂ ನೂರು ರೂಪಾಯಿ ಇಲ್ಲದ ಪರಿಸ್ಥಿತಿ. ಕಾಲೇಜು ಶುರುವಾಗುತ್ತಿದ್ದುದೇ ಒಂಭತ್ತು ಗಂಟೆಗೆ. ಮೊದಲ ಪಿರಿಯಡ್ ಮುಂಗೋಪಿ ಮತ್ತು ಮಹಾಸಿಡುಕ ಪ್ರೊಫೆಸರ್ ಸಾಂಬಶಿವಯ್ಯನವರದ್ದು. ಆದ್ದರಿಂದ ಅವರು ಕ್ಲಾಸಿಗೆ ಪ್ರವೇಶವಾಗುವ ಮೊದಲೇ ಎಲ್ಲರೂ ಒಳಗಿರಬೇಕಿತ್ತು. ಲೇಟಾಗಿ ಬಂದವರಿಗೆ ಮರದ ಸ್ಕೇಲಿನ ಬಿಸಿಯೇಟು. ಬರದೆ ಹೋದವರ ಮನೆಗೆ absence report. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ … Read more