ಯು.ಆರ್. ಅನಂತಮೂರ್ತಿಯವರ ಭಾರತೀಪುರ
ಇತ್ತೀಚಿಗೆ ನಾನು ಓದಿದ ಕಾದಂಬರಿ ಶ್ರೀ ಯು.ಆರ್. ಅನಂತಮೂರ್ತಿರವರ ‘ಭಾರತೀಪುರ’, ಈ ಕಾದಂಬರಿ ಈ ವರ್ಷದ ಕೆ.ಎ.ಎಸ್ ಮುಖ್ಯ ಪರೀಕ್ಷೆಯಲ್ಲಿ ಪಠ್ಯವಸ್ತುವೂ ಆಗಿದೆ ಗೆಳೆಯರೊಬ್ಬರ ಸಲಹೆಯಂತೆ ಈ ಕಾದಂಬರಿಯನ್ನು ಓದಿದೆ. ಕಾದಂಬರಿಯ ನಾಯಕ ‘ಜಗನ್ನಾಥ ಭಾರತೀಪುರದ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದವನಾಗಿದ್ದು, ಉನ್ನತ ಶಿಕ್ಷಣವನ್ನು ‘ಇಂಗ್ಲೆಂಡಿನಲ್ಲಿ ಪಡೆದಿರುತ್ತಾನೆ. ಈತ ಇಂಗ್ಲೆಂಡಿನಲ್ಲಿ ‘ಬಂಡಾಯ’ ದ ಬಗ್ಗೆ ಮಾತನಾಡುತ್ತ ಎಲ್ಲರನ್ನೂ ಆಕರ್ಷಿಸಿರುತ್ತಾನೆ. ಆ ವೇಳೆಗೆ ಅವನಿಗೆ ‘ಮಾರ್ಗರೇಟ್’ ಗೆಳತಿಯಾಗಿ ಸಿಗುತ್ತಾಳೆ. ಅತೀ ಶೀಘ್ರದಲ್ಲೆ ಪ್ರೇಯಸಿಯಾಗಿರುತ್ತಾಳೆ. ಜಗನ್ನಾಥನ ಗೆಳೆಯ, ಸದಾಕಾಲ … Read more