ನಜ಼ರುದ್ದೀನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ನಜ಼ರುದ್ದೀನ್‌ನ ಚೆರಿಹಣ್ಣಿನ ತರ್ಕ ಪೇಟೆಯಲ್ಲಿ ಮಾರುವ ಉದ್ದೇಶದಿಂದ ಒಂದು ಚೀಲ ತುಂಬ ಚೆರಿಹಣ್ಣನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ನಜರುದ್ದೀನ್ ಪಟ್ಟಣಕ್ಕೆ ಹೋಗುತ್ತಿದ್ದ. ದಾರಿಯಲ್ಲಿ ಒಂದು ಡಜನ್ ಮಕ್ಕಳು ಅವನನ್ನೂ ಅವನು ಒಯ್ಯುತ್ತಿದ್ದ ಚೆರಿಹಣ್ಣುಗಳನ್ನೂ ನೋಡಿದರು. ಕೆಲವು ಚೆರಿಹಣ್ಣುಗಳು ತಿನ್ನಲು ಸಿಕ್ಕುತ್ತವೆಂಬ ಸಂತೋಷದಿಂದ ಅವರು ನಜ಼ರುದ್ದೀನ್‌ನ ಸುತ್ತಲೂ ಹಾಡುತ್ತಾ ಕುಣಿಯತೊಡಗಿದರು. ಅವರು ಕೇಳಿದರು, “ಮುಲ್ಲಾ, ನಮಗೆ ಕೆಲವು ಹಣ್ಣುಗಳನ್ನು ಕೊಡು.” ನಜ಼ರುದ್ದೀನ್ ಇಕ್ಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ. ಅವನಿಗೆ ಮಕ್ಕಳ ಮೇಲೆ ಬಲು ಪ್ರೀತಿ ಇತ್ತು, ಎಂದೇ ಅವರಿಗೆ … Read more