ದೇವರು ಮೆಚ್ಚಿದ ಭಕ್ತ: ಸುಬ್ರಹ್ಮಣ್ಯ ಹೆಗಡೆ
ಅದೊಂದು ಊರು, ಆ ಊರಿನಲ್ಲಿ ಒಂದು ದೇವಸ್ಥಾನ. ಆ ದೇವಸ್ಥಾನಕ್ಕೆ ಒಬ್ಬ ದೇವರು. ಎಲ್ಲಾ ಊರುಗಳ ಎಲ್ಲ ದೇವರುಗಳಂತೆ ಭಕ್ತಗಣಗಳಿಂದ ಸೇವೆ ಮಾಡಿಸಿಕೊಂಡು, ಹಣ್ಣು ಕಾಯಿಗಳನ್ನು ತನ್ನ ಹೆಸರಿನಲ್ಲಿ ಅರ್ಪಿಸಿ ಭ(ಭಂ)ಜಿಸುತ್ತಿರುವ ಜನಸಮೂಹವನ್ನು ಕಂಡು ಒಳಗೊಳಗೆ ನಗುತ್ತಿರುವ ಸರ್ವಜ್ಞ, ಸರ್ವಾಂತರ್ಯಾಮಿ, ಸರ್ವಶಕ್ತ ಆತ. ಎಲ್ಲವೂ ಹೀಗೇ ಇರಲು, ಕಾಲಚಕ್ರ ಸುಮ್ಮನೇ ಉರುಳುತ್ತಿರಲು, ದೇವನಿಗೆ ಒಂದು ದಿನ ಜಗಜ್ಜನಿತವಾದ ತನ್ನ ಮಾಮೂಲು ಮೂಕ ಧಾಟಿಯನ್ನು ಮೀರಿ ತನ್ನೂರಿನ ಒಬ್ಬ ಶ್ರೀಸಾಮಾನ್ಯನ ಬಳಿ ಒಂದಿಷ್ಟು ಸಮಯ ಕಳೆಯುವ ಮನಸ್ಸು ಮೂಡಿತು. … Read more