ಇಳಿ ಸಂಜೆಯ ಮೌನ… ಮಂಜುಗಣ್ಣಿನ ಮಾತು:ಶ್ರೀವತ್ಸ ಕಂಚೀಮನೆ
ಏಳು ದಶಕಗಳ ಹಣ್ ಹಣ್ಣು ಬದುಕು…ಹೆಸರು ಆನಂದರಾವ್… ಮಣ್ಣ ಮನೆಯಲಿ ಮಲಗುವ ಮುನ್ನಿನ ಮಂಜುಗಣ್ಣಿನ ಹಿನ್ನೋಟದಲ್ಲಿ, ಹೆಸರಲ್ಲಿ ಮಾತ್ರ ಕಂಡ ಆನಂದದ ಅರ್ಥ ಹುಡುಕುತ್ತಾ ಕಂಗಾಲಾಗಿದ್ದೇನೆ… ಈದೀಗ ಮನದಿ ಸುಳಿದಿರುಗುತ್ತಿರೋ ಭಾವ ಇದೊಂದೇ "ಎಷ್ಟುಕಾಲ ಬದುಕಿದ್ದೊಡೇನು – ಜೀವಿಸಲಾಗದಿದ್ದೊಡೆ ನನ್ನಂತೆ ನಾನು…" ಈ ಬದುಕಿಗೆ (ನನ್ನನ್ನೂ ಸೇರಿ ಈ ಜನಕ್ಕೆ) ಅದ್ಯಾಕೆ ಅಷ್ಟೊಂದು ಪ್ರೀತಿಯೋ ಮುಖವಾಡಗಳ ಮೇಲೆ…ಇಂದೀಗ ಬಯಲ ಹಸಿರ ತಂಗಾಳಿ ನಡುವೆಯೂ ಉಸಿರುಗಟ್ಟುವ ಭಾವ ನನ್ನಲ್ಲಿ… ಏನೆಲ್ಲ ಇತ್ತಲ್ಲವಾ ಬದುಕ ದಾರೀಲಿ…ಸೊಗಸಾದದ್ದು, ಆಹ್ಲಾದವನೀಯುವಂಥದ್ದು…ಪುಟ್ಟ ಪುಟ್ಟದು…ಆಸ್ವಾದಿಸಿದರೆ … Read more