ಮೂರು ಕವಿತೆಗಳು: ಜೈಕುಮಾರ್ ಎಚ್.ಎಸ್., ಪ್ರಶಾಂತ್ ಭಟ್, ರಾಣಿ ಪಿ.ವಿ.
ತೇಪೆ ಚಡ್ಡಿ ಮತ್ತು ನಕ್ಷತ್ರ ಶನಿವಾರದ ಬೆಳ್ಳಂಬೆಳಗ್ಗೆ ಒಪ್ಪತ್ತಿನ ಶಾಲೆಗೆ ಹೊಂಟಿದ್ದೆ ಎದುರಿಗೆ ಸಿಕ್ಕ ಜಮೀನ್ದಾರನ ಸೊಕ್ಕಿನ ಹೈದ 'ನಿಂದು ಪೋಸ್ಟ್ ಆಗಿದೆ' ಎಂದ! ನನಗ್ಯಾವ ಲೋಕದವರು ಪತ್ರ ಬರೆವರೆಂದು ನೋಡಿದರೆ ಅವನ ಕಣ್ಣುಗಳು ನೆಟ್ಟಿದ್ದು ಒಡೆದುಹೋಗಿರುವ ನನ್ನ ಚಡ್ಡಿ ಮೇಲೆ! ಹೋದ್ವಾರ ಅವ್ವ ತವರಿಂದ ತಮ್ಮನ ಚಡ್ಡಿ ತಂದು ಇಕ್ಕಿಸಿದ್ದಳು, ಇದೇ ಹಲ್ಕಟ್ ಹೈದ, 'ದೊಗಳೆ ಚಡ್ಡಿ' ಎಂದು ಆಗಲೂ ಛೇಡಿಸಿದ್ದ. ಅಪ್ಪ ಗದ್ದೆಗೆ ಪಲಾಯನಗೈವ ಮೊದಲೇ ಹಿಡಿಯಲೆಂಬಂತೆ ಓಡಿದೆ ಮನೆ ಎದುರು ಏರು ಕಟ್ಟುತ್ತಿದ್ದ … Read more