ಗಜಲ್
ಗಜಲ್ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ ಕಾಮದ ರೂಪ ಉಂಟೂ ಲೋಕದಲಿನಮ್ಮಿಬ್ಬರ ಪರಿಶುದ್ಧ ಪ್ರೇಮಕೆ ಈ ರಾತ್ರಿಗಳೇ ಸಾಕ್ಷಿ ಸಾಕಿ ಸೌಂದರ್ಯವ ಆಸ್ವಾದಿಸದೇ ಅನುಭೋಗಿಸುವುದು ಸಲ್ಲದುಹೃದಯಾಂತರಾಳದಲಿ ಮಿಳಿತಗೊಂಡ ಆತ್ಮಗಳೇ ಸಾಕ್ಷಿ ಸಾಕಿ ನಿನ್ನೊಲವ ಸವಿರುಚಿಯ ಉಣಬಡಿಸು ನನ್ನೆದೆಗೆನೀನಿರದ ಅನುಕ್ಷಣಗಳಿಗೆ ವಿರಹಗಳೇ ಸಾಕ್ಷಿ ಸಾಕಿ ಪ್ರೀತಿ ಎಂದರೆ ಬರೀ ದೇಹಾಕರ್ಷಣೆ ಅಲ್ಲ ‘ ಬಾಬಾ ‘ಮನಸ್ಸು ಮನಸ್ಸುಗಳ ಸಮ್ಮೀಲನಗಳೇ ಸಾಕ್ಷಿ ಸಾಕಿ -ಶಿವರಾಜ್.ಡಿ (ಚಳ್ಳಕೆರೆ) ರಾಮನ … Read more