ಅಪ್ಪ ಸತ್ತಾಗ: ಅಖಿಲೇಶ್ ಚಿಪ್ಪಳಿ
80 ವರ್ಷಗಳ ಹಿಂದೆ ಅಳುತ್ತಲೇ ಭೂಮಿಗೆ ಬಂದ ಮಗುವಿಗೆ ತಿಳುವಳಿಕೆ ಬರುವ ಮೊದಲೇ ತನ್ನ ತಂದೆಯನ್ನು ಕಳೆದುಕೊಂಡಿತ್ತು. ತಂದೆಯನ್ನು ನೋಡಿದ ನೆನಪು ಅದಕ್ಕಿರಲಿಲ್ಲ. ಕಡುಬಡತನದ ಆ ಮನೆಯಲ್ಲಿ ಮನೆ ತುಂಬಾ ಮಕ್ಕಳು ಎಲ್ಲರೂ ಸೇರಿದರೆ ಬರೋಬ್ಬರಿ 8 ಮಕ್ಕಳು ಹಾಗೂ ಎರಡು ವಿಧವೆಯರು! ಊರಲ್ಲಿ ಶಾಲೆಯಿದೆ, ಓದಲಿಕ್ಕೆ ಕಷ್ಟವಿದೆ. ಅಂತೂ-ಇಂತೂ ಕಷ್ಟಪಟ್ಟು ಆ ಮಗು 7ನೇ ತರಗತಿಯವರೆಗೆ ಕಲಿಯಿತು. ಹೆಚ್ಚು ಕನ್ನಡ ಹಾಗೂ ಸ್ವಲ್ಪ ಇಂಗ್ಲೀಷು. ಮತ್ತೆ ಬೇಸಾಯಕ್ಕಿಳಿದ ಆ ಯುವಕ ನಿರಂತರವಾಗಿ ದುಡಿಯುತ್ತಲೇ ಇದ್ದ. ಮಧ್ಯದಲ್ಲಿ … Read more