ಪ್ರೌಢಶಾಲಾ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕಾರ್ಯಾಗಾರ: ಶ್ರೀಮತಿ. ಶಾರದ. ಎಚ್.ಎಸ್
ದಿನಾಂಕ 13.06.2015ರಂದು ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿಯಲ್ಲಿ ಮೈಸೂರು ದಕ್ಷಿಣ ವಲಯ ಮತ್ತು ಮೈಸೂರು ತಾಲ್ಲೂಕಿನ ಆಯ್ದ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಬೋಧಿಸುವ ಶಿಕ್ಷಕರಿಗಾಗಿ ಶಿಕ್ಷಣದಲ್ಲಿ ರಂಗಕಲೆ ಕುರಿತಂತೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ, ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಆರ್.ಪೂರ್ಣಿಮ ಅವರು ಇಡೀ ಕಾರ್ಯಾಗಾರವನ್ನು ನಡೆಸಿಕೊಡುವ ಜವಾಬ್ದಾರಿಯನ್ನು ಹೊತ್ತಿದ್ದರು. ಸುಪ್ರಸಿದ್ಧ ನಾಟಕಕಾರ ಶೇಕ್ಸ್‍ಪಿಯರ್‍ನ ಜನಪ್ರಿಯ ಉಕ್ತಿ “ಜೀವನವೆಂಬೀ ನಾಟಕರಂಗದಿ ಪಾತ್ರಧಾರಿಗಳು ಗಂಡು ಹೆಣ್ಣುಗಳು, … Read more