ಅರ್ಧ: ಪ್ರಶಸ್ತಿ ಅಂಕಣ
ಅರೆಬೆಂದ ತರಕಾರಿ, ಅಡ್ಡಗೋಡೆಯ ಮೇಲಿಟ್ಟಂತೆ ಅರ್ಧ ಪೂರ್ತಿ ಮಾಡಿದ ಮಾತು, ಒಂದೇ ಹೃದಯವೆನ್ನುವಂತಿದ್ದಾಗ ದೂರಾದ ಎರಡು ಅರ್ಧಗಳು, ಅರ್ಧಾಂಗಿ ದೂರಾಗಿ ವಿರಹವೇದನೆಯಿಂದ ಬಳಲುತ್ತಿರೋ ಉಳಿದರ್ಧ.. ಹೀಗೆ ಅರ್ಧವೆನ್ನೋದು ಕೊಡೋ ವೇದನೆ ಅಷ್ಟಿಷ್ಟಲ್ಲ. ಅರೆಬರೆದ ಕವನವೋ, ಕತೆಯೋ ಮುಗಿಸಲಾಗದಿದ್ದರೆ ನನ್ನನ್ನು ಶುರುವಾದರೂ ಯಾಕೆ ಮಾಡಿದೆಯೋ ಎನ್ನುವಾಗ ಆಗೋ ನರಳಾಟವೂ ಕಮ್ಮಿಯಲ್ಲ , ಅರೆಕ್ಷಣದಲ್ಲಿ ಒಲಿಂಪಿಕ್ ಪದಕ ತಪ್ಪಿದಾಕೆ, ಅರೆಕ್ಷಣ ಮೈಮರೆತಿದ್ದೆ ಜೀವನವೇ ಹಾಳಾಯ್ತು ಅನ್ನೋ ವ್ಯಕ್ತಿ, ಅರೆಕ್ಷಣ ನಿದ್ರೆ ತೂಕಡಿಸಿತ್ತಷ್ಟೇ.. ಎಚ್ಚೆತ್ತುಕೊಳ್ಳೋದ್ರಲ್ಲಿ ಅನಾಹುತ ಘಟಿಸಿಹೋಗಿತ್ತು ಅನ್ನೋ ಡ್ರೈವರುಗಳು ಆ … Read more