ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ
೧. ಮಹಾತ್ಮ ಪರ್ವತದ ತುದಿಯಲ್ಲಿ ಇರುವ ಪುಟ್ಟ ಮನೆಯಲ್ಲಿ ವಿವೇಕಿಯಾದ ಮಹಾತ್ಮನೊಬ್ಬ ವಾಸಿಸುತ್ತಿದ್ದಾನೆ ಎಂಬ ಸುದ್ದಿ ಗ್ರಾಮಾಂತರ ಪ್ರದೇಶದಲ್ಲಿ ಹರಡಿತು. ಹಳ್ಳಿಯ ನಿವಾಸಿಯೊಬ್ಬ ಸುದೀರ್ಘವೂ ಕಠಿಣವೂ ಆದ ಪ್ರಯಾಣ ಮಾಡಿ ಅವನನ್ನು ಭೇಟಿಯಾಗಲು ನಿರ್ಧರಿಸಿದ. ಆ ಮನೆಯನ್ನು ಅವನು ತಲುಪಿದಾಗ ಒಳಗಿದ್ದ ವೃದ್ಧ ಸೇವಕನೊಬ್ಬ ಬಾಗಿಲಿನಲ್ಲಿ ತನ್ನನ್ನು ಸ್ವಾಗತಿಸಿದ್ದನ್ನು ಗಮನಿಸಿದ. ಅವನು ಸೇವಕನಿಗೆ ಹೇಳಿದ, “ವಿವೇಕಿಯಾದ ಮಹಾತ್ಮನನ್ನು ನಾನು ನೋಡಬಯಸುತ್ತೇನೆ.” ಸೇವಕ ನಸುನಕ್ಕು ಅವನನ್ನು ಮನೆಯೊಳಕ್ಕೆ ಕರೆದೊಯ್ದ. ಮನೆಯಲ್ಲಿ ಕೋಣೆಯಿಂದ ಕೋಣೆಗೆ ಹೋಗುತ್ತಿರುವಾಗ ಮಹಾತ್ಮನನ್ನು ಸಂಧಿಸುವ ನಿರೀಕ್ಷೆಯಿಂದ … Read more