ಕೋಡುವಳ್ಳಿಯ ಕರೆ:ಪಾರ್ಥಸಾರಥಿ ಎನ್
ನಾಲ್ವರು ಗೆಳತಿಯರು ಬೆಂಗಳೂರಿನ ಮೆಜಿಸ್ಟಿಕ್ ಬಸ್ ಸ್ಟಾಪ್ ನಲ್ಲಿ ಸಂತಸದಿಂದ ಹರಟುತ್ತಿದ್ದರು. ರಾತ್ರಿ ಆಗಲೇ ಹತ್ತು ಘಂಟೆ ದಾಟಿದ್ದು, 10:40 ಕ್ಕೆ ಚಿಕ್ಕಮಂಗಳೂರಿಗೆ ಹೊರಡುವ ರಾಜಹಂಸ ಬಸ್ಸಿಗೆ ಕಾಯುತ್ತಿದ್ದರು. ಎಲ್ಲರದ್ದೂ ಹೆಚ್ಚು-ಕಡಿಮೆ ಒಂದೇ ವಯಸ್ಸು. ಹತ್ತೊಂಬತ್ತು ಇಪ್ಪತ್ತರ ಉತ್ಸಾಹದ ಚಿಲುಮೆಗಳು. ಮೈಸೂರು ರಸ್ತೆಯಲ್ಲಿರುವ ಡಾನ್ ಬಾಸ್ಕೋನಲ್ಲಿ ಇಂಜಿನೀಯರಿಂಗ್ ಕಾಲೇಜಿನ ಐ.ಎಸ್ ವಿಭಾಗದ ಮೂರನೆ ಸೆಮಿಸ್ಟರ್ ಪರೀಕ್ಷೆಗಳನ್ನು ಮುಗಿಸಿದ ಎಲ್ಲರೂ, ರಜೆ ಇರುವ ಕಾರಣ ಒಂದು ವಾರ ಸಮಯ ಕಳೆಯಲು ಪ್ರಕೃತಿಯ ಮಡಿಲು ಚಿಕ್ಕಮಗಳೂರಿಗೆ ಹೊರಟಿರುವರು. … Read more