ಮಾಲಿಂಗ. . .: ಸಿದ್ದರಾಮ ತಳವಾರ
ರಾಮೇನಹಳ್ಳಿಯ ಇಡೀ ಊರಿಗೆ ಊರೇ ಪತರಗುಟ್ಟಿ ಹೋಗಿದೆ. ಊರ ರಾಮೇಗೌಡರ ಮನೆಯೆಂಬುದೊಂದು ಸಂತೆಯಾಗಿ ಹೋಗಿತ್ತು. ಇಡೀ ಊರಿಗೆ ಊರೇ ಅವರ ಮನೆ ಮುಂದೆ ನೆರೆದು ನೆರೆದವರೆಲ್ಲ ಕೌತುಕದಿಂದ ಪರಿಶೀಲನೆಗೆ ಬಂದ ಪೋಲೀಸರ ಮುಖಗಳನ್ನ ದಿಟ್ಟಿಸುತ್ತಿದ್ದಾರೆ. ಊರಿನ ಯಾವೊಬ್ಬ ಹೆಂಗಸು ಮುಖ ತೊಳೆದಿಲ್ಲ ಅಂಗಲದ ಕಸ ಗುಡಿಸಿಲ್ಲ ರಂಗೋಲಿ ಹಾಕಿಲ್ಲ ಬಾಯಲ್ಲಿ ಸೆರಗಿಟ್ಟುಕೊಂಡು “ಯವ್ವಾ ಹೆಂಗಾಗ್ಯದೋ ಏನೋ, ಪಾಪ ದೇವ್ರಂಥ ಗೌಡ್ರಿಗೆ ಹಿಂತಾ ಸ್ಥಿತಿ ಯಾಕ ಬಂತುಅಂತೇನಿ, ಮನೀ ಮಗನಂಗಿದ್ದ ಮಾಲಿಂಗ ಅದ್ಹೆಂಗ್ ಸತ್ನೋ ಏನೋ ಪಾಪ ಗೌಡರ … Read more